ಕಾಂಗ್ರೆಸ್‌ ನ ಈ ಶಾಸಕರಿಗೆ ಟಿಕೆಟ್‌ ಡೌಟ್!‌ ಮಾರ್ಚ್‌ 15 ರಂದು ಕೈ ಅಂತಿಮ ಸಭೆ; ಮೊದಲ ಪಟ್ಟಿ ಬಿಡುಗಡೆ ಯಾವಾಗ?

120 ಕ್ಷೇತ್ರದ ಅಭ್ಯರ್ಥಿಗಳನ್ನ ಕಾಂಗ್ರೆಸ್ ಪಕ್ಷವೂ ಅಂತಿಮಗೊಳಿಸುವ ನಿಟ್ಟಿನಲ್ಲಿ ಹೈಕಮಾಂಡ್‌ ನಾಯಕರು ಸಭೆ ನಡೆಸಲಿದ್ದಾರೆ.

ಬೆಂಗಳೂರು, ಮಾರ್ಚ್‌ 13: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ರಾಜಕೀಯ ಪಕ್ಷಗಳು ಫುಲ್‌ ಆಕ್ಟಿವ್‌ ಆಗಿದ್ದು, ಅಬ್ಬರದ ಪ್ರಚಾರವನ್ನ ನಡೆಸಿವೆ. ಈ ಬಾರಿ ಅಧಿಕಾರಕ್ಕೆ ಬರಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಟಿಕೆಟ್‌ ಅಭ್ಯರ್ಥಿಗಳನ್ನೇ ಇದುವರೆಗೂ ಫೈನಲ್‌ ಮಾಡಿಲ್ಲ.

ಇನ್ನೂ ರಾಜ್ಯ ವಿಧಾನಸಭಾ ರಾಜ್ಯ ಕಾಂಗ್ರೆಸ್ ನಲ್ಲಿ ಈ ಬಾರಿ ಟಿಕೆಟ್‌ಗಾಗಿ 1230 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಈಗಾಗಲೇ 120 ಕ್ಷೇತ್ರ ಅಭ್ಯರ್ಥಿಗಳನ್ನ ಅಂತಿಮಗೊಳಿಸಿದ ಪಟ್ಟಿಯಲ್ಲಿನ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿಯನ್ನ ಅಂತಿಮಗೊಳಿಸುವ ನಿಟ್ಟಿನಲ್ಲಿ ಮಾರ್ಚ್‌ 15 ರಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಚುನಾವಣಾ ಸಮಿತಿಯ ಮಹತ್ವದ ಸಭೆ ನಡೆಯಲಿದೆ.

Congress Election Committee Meeting For Candidate Selection In Karnataka

ಈಗಾಗಲೇ ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನ ಮೋಹನ್‌ ಪ್ರಕಾಶ್‌ ನೇತೃತ್ವದಲ್ಲಿ ಸ್ಕ್ರೀನಿಂಗ್‌ ಕಮಿಟಿ ಅಂತಿಮಗೊಳಿಸಲು ಎರಡು ದಿನಗಳ ಕಾಲ ಸಭೆ ನಡೆಸಿದ್ದು, 120 ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನ ಅಂತಿಮಗೊಳಿಸಿ ಕಾಂಗ್ರೆಸ್‌ ಹೈಕಮಾಂಡ್‌ ಗೆ ಕಳುಹಿಸಲಾಗಿದೆ. ಈ ಪಟ್ಟಿಯನ್ನ ಪರಿಶೀಲಿಸಿ ಅಂತಿಗೊಳಿಸಲು ಮಾರ್ಚ್‌ 15 ರಂದು ಎಐಸಿಸಿ ಮಟ್ಟದಲ್ಲಿ ಚುನಾವಣಾ ಸಮಿತಿಯ ಮಹತ್ವದ ಸಭೆ ನಡೆಯಲಿದ್ದು, ಈ 120 ಅಭ್ಯರ್ಥಿಗಳ ಪಟ್ಟಿಯನ್ನ ಮಾರ್ಚ್‌ 20 ರಂದು ಬಿಡುಗಡೆ ಮಾಡಲು ಎಐಸಿಸಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವವಕುಮಾರ್‌ ಹಾಲಿ ಶಾಸಕರಿಗೆ ಟಿಕೆಟ್‌ ನೀಡುವುದಾಗಿ ಹೇಳಿದ್ರು. ಆದರೆ, ಸ್ಕ್ರೀನಿಂಗ್‌ ಸಮಿತಿಯು ಮೊದಲ 120 ಸಂಭಾವ್ಯ ಅಭ್ಯರ್ಥಿಗಳಲ್ಲಿ ನಾಲ್ಕೈದು ಹಾಲಿ ಶಾಸಕರಿಗೆ ವಿವಿಧ ಕಾರಣಗಳಿಂದ ಟಿಕೆಟ್‌ ನೀಡದಿರಲು ನಿರ್ಧರಿಸಿದೆ ಎನ್ನಲಾಗಿದ್ದು, ಅದರಂತೆ ಕುಂದಗೋಳ ಶಾಸಕಿ ಕುಸುಮಾ ಶಿವಳ್ಳಿ, ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ, ಅಘ್ಜಲ್‌ ಪುರ ಶಾಸಕ ಎಂ.ವೈ ಪಾಟೀಲ್‌ ಹಾಗೂ ಪಾವಗಡ ಶಾಸಕ ವೆಂಕಟರಮಣಪ್ಪ ಅವರಿಗೆ ಈ ಬಾರಿ ಟಿಕೆಟ್‌ ನೀಡದಿರಲು ನಿರ್ಧರಿಸಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Congress Election Committee Meeting For Candidate Selection In Karnataka

ಇನ್ನೂ ಈ ಬಾರಿ ವಿಧಾನಸಭಾ ಚುನಾವಣೆಗೆ ನಮಗೂ ಟಿಕೆಟ್‌ ನೀಡಿ ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯರು ಸಹ ಟಿಕೆಟ್‌ ಸಲ್ಲಿಸಿದ್ದು, ಆ ಪೈಕಿ ಒಬ್ಬರಾದ ಯು.ಟಿ.ವೆಂಕಟೇಶ್‌ ಅವರಿಗೆ ಬಸವನಗುಡಿ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸಲಿದೆ ಎನ್ನಲಾಗಿದೆ. ಇನ್ನೂ ಉಳಿದಂತೆ ಟಿಕೆಟ್‌ ಸಲ್ಲಿಸಿದ್ದ ವಿಧಾನಪರಿಷತ್‌ ಸದಸ್ಯರಿಗೆ ಮುಂದೆ ಸರ್ಕಾರ ಅಧಿಕಾರಕ್ಕೆ ಬಂದರೆ ಉನ್ನತ ಸ್ಥಾನಮಾನ ನೀಡಲು ನಿರ್ಧರಿಸಿದೆ ಎಂದು ಹೇಳಲಾಗಿದೆ.

ಇನ್ನೂ 120 ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳನ್ನ ಹೊರತುಪಡಿಸಿ ಉಳಿದ 75 ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಕುರಿತು ಸ್ಕ್ರೀನಿಂಗ್‌ ಕಮಿಟಿ ಇನ್ನೊಂದು ಸಭೆ ನಡೆಸಲಿದ್ದು, ಈಗಾಗಲೇ ಕಾಂಗ್ರೆಸ್ ಸೇರ್ಪಡೆ ಕುರಿತು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಬಿಜೆಪಿ ಹಾಗೂ ಜೆಡಿಎಸ್ ನ ಶಾಸಕರು ಹಾಗೂ ಸಚಿವರನ್ನ ಕರೆ ತರುವ ಪ್ರಯತ್ನವನ್ನ ನಡೆಸಿದೆ. ಹೀಗಾಗಿ ಅನ್ಯ ಪಕ್ಷದಿಂದ ಬರುವ ಸಮರ್ಥರು ನಾಯಕರಿಗೆ ಟಿಕೆಟ್ ನೀಡಲು 25 ರಿಂದ 30 ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಮಾಡದೆ ಕಾಯ್ದು ನೋಡುವ ತಂತ್ರಗಾರಿಕೆಯನ್ನ ಅನುಸರಿಸಲು ಸ್ಕ್ರೀನಿಂಗ್‌ ಸಮಿತಿಯಲ್ಲಿ ನಿರ್ಧರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+