Congress Manifesto 2023; ಕಲ್ಯಾಣ ಕರ್ನಾಟಕ್ಕೆ ಈ ಭರವಸೆಗಳು
ಬೆಂಗಳೂರು, ಮೇ 02; ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದುವರೆಗೂ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ್ದ 5 ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ಹಲವಾರು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕರ್ನಾಟಕದ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡಿವೆ.

ಕಾಂಗ್ರೆಸ್ ಪಕ್ಷ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕ ಎಂದು ವಿಭಾಗವನ್ನು ಮಾಡಿ ಭರವಸೆಗಳನ್ನು ನೀಡಿದೆ. ಪ್ರಣಾಳಿಕೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಹಲವಾರು ಭರವಸೆಗಳನ್ನು ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರತಿ ವರ್ಷ 5 ಸಾವಿರ ಕೋಟಿ ನೀಡಲಾಗುತ್ತದೆ ಎಂದು ಭರವಸೆ ಕೊಟ್ಟಿದೆ.
ಕಲ್ಯಾಣ ಕರ್ನಾಟಕಕ್ಕೆ ಭರವಸೆಗಳು
* ಬಳ್ಳಾರಿ ಅಂತಾರಾಷ್ಟ್ರೀಯ ಗುಣಮಟ್ಟದ ಚೀನ್ ಬಟ್ಟೆಗಳ ರಾಷ್ಟ್ರೀಯ ಕೇಂದ್ರವಾಗುವಂತೆ ರೂ. 5000 ಕೋಟಿಯ ಹೂಡಿಕೆಯೊಂದಿಗೆ ಅಪರಲ್ ಪಾರ್ಕ್ ನಿರ್ಮಿಸಿ ಉದ್ಯೋಗವನ್ನು ಹೆಚ್ಚಿಸಲು ಕ್ರಮ.
*ಬೀದರ್‌ನಲ್ಲಿ ಐಐಟಿ ಮತ್ತು ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಾಪನೆಗೆ ಕೇಂದ್ರ ಸರಕಾರದ ಮೇಲೆ ಒತ್ತಾಯ ಮತ್ತು ಸಹಯೋಜನೆ
* ಗ್ರಾಮ ಪಂಚಾಯತಿಗಳಿಗೆ ವರ್ಷಕ್ಕೆ ತಲಾ 1 ಕೋಟಿ ಅನುದಾನ
* ಕಲ್ಯಾಣ ಕರ್ನಾಟಕದ 41 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ 100 ಪಿಯುಸಿ ಮತ್ತು ಒಂದು ಮಹಿಳಾ ಪದವಿ ಕಾಲೇಜು ಸ್ಥಾಪನೆ

* ಪ್ರತಿ ಹೋಬಳಿಯಲ್ಲಿ ಒಂದೊಂದು ಬಾಬಾ ಸಾಹೇಬ್ ಅಂಬೇಡ್ಕರ್ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಸ್ಥಾಪನೆ
* ಎರಡು ವರ್ಷದೊಳಗೆ 2,500 ಹೊಸ ಶಾಲಾ ಕೊಠಡಿ ನಿರ್ಮಾಣ ಹಾಗೂ ಖಾಲಿ ಇರುವ ಎಲ್ಲಾ ಶಿಕ್ಷಕ ಹುದ್ದೆಗಳ ಭರ್ತಿ
* ಕಲಬುರಗಿ-ಸಿರುಗುಪ್ಪ-ಬಳ್ಳಾರಿ ಹೆದ್ದಾರಿ ಷಟ್ಟಥವಾಗಿ ಅಗಲೀಕರಣ.
ಕಿತ್ತೂರು ಕರ್ನಾಟಕ ಭರವಸೆಗಳು
* ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ, ರೂ. 5 ಸಾವಿರ ಕೋಟಿ ರೂ. ಮೀಸಲು
* ಮಹಾರಾಷ್ಟ್ರ ಗಡಿಭಾಗದ ಎಲ್ಲಾ ಕನ್ನಡ ಶಾಲೆಗಳಿಗೆ ಒಂದು ಬಾರಿಯ ಮೂಲಸೌಲಭ್ಯ ದೇಣಿಗೆಯಾಗಿ ರೂ.1 ಕೋಟಿ ಹಾಗೂ ಮಾಸಿಕ ರೂ 1 ಲಕ್ಷ ಸಬ್ಸಿಡಿ ಮತ್ತು ಶಿಕ್ಷಕರ ನೇಮಕಾತಿ
* ಕಾರವಾರ, ಧಾರವಾಡ, ವಿಜಯಪುರ ಹಾಗೂ ಬಾಗಲಕೋಟೆಗಳಲ್ಲಿ 500 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ
* ಪ್ರತಿ ಜಿಲ್ಲೆಯಲ್ಲಿ ಬೇಳೆಕಾಳುಗಳ ದಾಸ್ತಾನು ಕೇಂದ್ರ ಸ್ಥಾಪನೆ.
* ಮಲಪ್ರಭಾ ನದಿಯನ್ನು ಒತ್ತುವರಿಯಿಂದ ಮುಕ್ತವಾಗಿಡಲು ಕ್ರಮ
* ಕಾರವಾರ ಬಂದರಿಗೆ ಸಂಪರ್ಕ ಕಲ್ಪಿಸುವ ಎಲ್ಲಾ ಜಿಲ್ಲೆಗಳಿಗೂ ಗುಣಮಟ್ಟದ ಸಂಪರ್ಕ ರಸ್ತೆ ನಿರ್ಮಾಣ. ಅದರ ಭಾಗವಾಗಿ ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ ಮೂಲಕ ಸಾಗುವ ಹೆದ್ದಾರಿಗಳ ಅಭಿವೃದ್ಧಿ.
ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷ ವಿವಿಧ ಘೋಷಣೆಗಳನ್ನು ಮಾಡುತ್ತಾ ಬಂದಿದೆ. ಇದುವರೆಗೂ ಪ್ರಣಾಳಿಕೆ ಹೊರತಾಗಿ 5 ಘೋಷಣೆಗಳನ್ನು ಮಾಡಿದೆ. ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಯುವನಿಧಿ ಮತ್ತು ಶಕ್ತಿ ಎಂಬ ಘೋಷಣೆಗಳನ್ನು ಮಾಡಿದೆ.
ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮೂಲದವರು. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಆ ಭಾಗದ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಪಕ್ಷದ ನಾಯಕರು ಇದ್ದಾರೆ. ಆದ್ದರಿಂದ ಆ ಭಾಗಕ್ಕೂ ಹಲವು ಕೊಡುಗೆಗಳನ್ನು ನೀಡಲಾಗಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications