ಕಾಂಗ್ರೆಸ್‌ನಿಂದ ಮಾಲೀಕಯ್ಯ ಗುತ್ತೇದಾರ್ ಉಚ್ಛಾಟನೆ
Recommended Video

ಬೆಂಗಳೂರು, ಮಾರ್ಚ್ 29 : ಅಫ್ಜಲ್‌ಪುರ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರುವುದಾಗಿ ಗುರುವಾರ ಅವರು ಘೋಷಣೆ ಮಾಡಿದ್ದರು.
ಗುರುವಾರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಅವರು ಮಾಲೀಕಯ್ಯ ಗುತ್ತೇದಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೊದಲೇ ಅವರು ಉಚ್ಚಾಟನೆಗೊಂಡಂತಾಗಿದೆ.
ಮಾಲೀಕಯ್ಯ ಗುತ್ತೇದಾರ್ ಗುರುವಾರ ಮಧ್ಯಾಹ್ನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಯಾಗಿದ್ದರು. ನಂತರ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದರು.

'ಸ್ಪೀಕರ್ ಬಂದ ಮೇಲೆ ಶಾಸಕ ಸ್ಥಾನ ಮತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ಬೆಂಬಲಿಗರ ಜೊತೆ ಚರ್ಚೆ ನಡೆಸಿದ್ದೇನೆ. ಎಲ್ಲರೂ ಬಿಜೆಪಿ ಸೇರುವ ಬಗ್ಗೆ ಸಲಹೆ ನೀಡಿದ್ದಾರೆ. ನನ್ನ ಕ್ಷೇತ್ರಕ್ಕೆ ನಾನೇ ಚಿಹ್ನೆ. ಬೆಂಬಲಿಗರ ಜೊತೆ ಯಾವುದೇ ಷರತ್ತು ಇಲ್ಲದೇ ಬಿಜೆಪಿ ಸೇರಲಿದ್ದೇನೆ' ಎಂದು ಹೇಳಿದ್ದರು.
ಕಲಬುರಗಿ ಜಿಲ್ಲೆಯ ಅಫ್ಜಲ್‌ಪುರ ಕ್ಷೇತ್ರದ ಹಾಲಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಅವರು 7 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, 6 ಬಾರಿ ಗೆಲುವು ಕಂಡಿದ್ದಾರೆ. 2013ರ ಚುನಾವಣೆಯಲ್ಲಿ ಅವರು 38,093 ಮತ ಪಡೆದು ಗೆಲುವು ಸಾಧಿಸಿದ್ದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮಾಲೀಕಯ್ಯ ಗುತ್ತೇದಾರ್, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ಭಾರೀ ಪ್ರಯತ್ನ ನಡೆಸಿದ್ದರು. ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ 2016ರ ಜೂನ್‌ನಲ್ಲಿ ಕೆಪಿಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಬಿಜೆಪಿ ಸೇರಲು ಹೊರಟಿದ್ದಾರೆ.












Click it and Unblock the Notifications