ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಕಾಂಗ್ರೆಸ್‌ನಿಂದ ಉಚ್ಚಾಟನೆ

Posted By: Gururaj
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 13 : ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟುಮಾಡಿದ್ದ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದಿಂದ 2013ರ ಚುನಾವಣೆಗೆ ಸ್ಪರ್ಧಿಸಿದ್ದ ಎ.ಎಸ್.ಪಾಟೀಲ ನಡಹಳ್ಳಿ ಅವರು ಗೆಲುವು ಸಾಧಿಸಿದ್ದರು.

ಜೆಡಿಎಸ್ ಸೇರಲಿದ್ದಾರೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ

ಎ.ಎಸ್.ಪಾಟೀಲ ನಡಹಳ್ಳಿ ಅವರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು. '2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ' ಎಂದು ಅವರು ಈಗಾಗಲೇ ಘೋಷಣೆ ಮಾಡಿದ್ದಾರೆ.

ಎ.ಎಸ್.ಪಾಟೀಲ ಉಚ್ಛಾಟನೆ?

'ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಾ ನಮಗೆ ಬೆಂಬಲ ನೀಡಿದ್ದಾರೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಈಗಾಗಲೇ ಹೇಳಿಕೆ ನೀಡಿದ್ದಾರೆ.

ಉಚ್ಛಾಟನೆ ಆದೇಶ ಪತ್ರ

ಉಚ್ಛಾಟನೆ ಆದೇಶ ಪತ್ರ

ಹಲವು ಬಾರಿ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿದ್ದರಿಂದ ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಉಚ್ಚಾಟನೆ ಮಾಡಲಾಗಿದೆ.

ಪ್ರತ್ಯೇಕ ರಾಜ್ಯದ ಹೇಳಿಕೆ

ಪ್ರತ್ಯೇಕ ರಾಜ್ಯದ ಹೇಳಿಕೆ

ಎ.ಎಸ್.ಪಾಟೀಲ ನಡಹಳ್ಳಿ ಅವರು ಹಲವು ಬಾರಿ ಪಕ್ಷದ ನಾಯಕರಿಗೆ ಮುಜುಗರವಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. 'ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆಗಣಿಸಿದೆ. ಆದ್ದರಿಂದ ಅದು ಪ್ರತ್ಯೇಕ ರಾಜ್ಯವಾಗಬೇಕು' ಎಂದು ಹೇಳಿಕೆ ನೀಡಿ ವಿವಾದವೆಬ್ಬಿಸಿದ್ದರು.

'ವಿಶೇಷ ಅಧಿವೇಶನ ನಡೆಸಿ'

'ವಿಶೇಷ ಅಧಿವೇಶನ ನಡೆಸಿ'

ಬಿಬಿಎಂಪಿ ವಿಭಜನೆ ಕುರಿತು ಚರ್ಚಿಸಲು ಸರ್ಕಾರ ವಿಶೇಷ ವಿಧಾನಮಂಡಲ ಅಧಿವೇಶನ ಕರೆದಾಗ, 'ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಲು ವಿಶೇಷ ಅಧಿವೇಶನ ನಡೆಸಿ ನಿರ್ಣಯ ಕೈಗೊಳ್ಳಬೇಕು' ಎಂದು ಎ.ಎಸ್.ಪಾಟೀಲ ನಡಹಳ್ಳಿ ಒತ್ತಾಯಿಸಿದ್ದರು.

ಶಾಸಕ ಸ್ಥಾನದಿಂದ ಅನರ್ಹ?

ಶಾಸಕ ಸ್ಥಾನದಿಂದ ಅನರ್ಹ?

'ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ನಡಹಳ್ಳಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುತ್ತೇನೆ' ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಮತ್ತು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದರು.

36,231 ಮತ ಪಡೆದಿದ್ದರು

36,231 ಮತ ಪಡೆದಿದ್ದರು

ದೇವರಹಿಪ್ಪರಗಿ ಕ್ಷೇತ್ರ ವಿಜಯಪುರ ಜಿಲ್ಲೆಯಲ್ಲಿದೆ. 2013ರ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎ.ಎಸ್.ಪಾಟೀಲ ನಡಹಳ್ಳಿ ಅವರು 36,231 ಮತಗಳನ್ನು ಪಡೆದು ಬಿಜೆಪಿಯ ಸೋಮನಗೌಡ ಪಾಟೀಲ ಅವರನ್ನು ಸೋಲಿಸಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Congress expelled Devar Hipparagi MLA A.S. Patil Nadahalli from party. A.S. Patil Nadahalli will join JDS soon.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ