ಅನಂತ ಕುಮಾರ್ ಹೆಗಡೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಬೆಂಗಳೂರು, ಮಾರ್ಚ್ 13 : ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ಧ ಚುನಾವಣಾ ಆಯೋಗಕ್ಕೆ ಕರ್ನಾಟಕ ಕಾಂಗ್ರೆಸ್ ದೂರು ನೀಡಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ಹೇಳಿಕೆ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಪರವಾಗಿ ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರಿಗೆ ದೂರು ನೀಡಲಾಗಿದೆ. ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಬೇಕೆಂದು ಒತ್ತಾಯಿಸಲಾಗಿದೆ.
ಮಾ.10ರ ಭಾನುವಾರ ಭಟ್ಕಳದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತ ಕುಮಾರ್ ಹೆಗಡೆ ಅವರು ರಾಹುಲ್ ಗಾಂಧಿ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ದೂರು ನೀಡಲಾಗಿದೆ.

'ಇಡೀ ಜಗತ್ತು ಏರ್ ಸ್ಟ್ರೈಕ್ ನಡೆದಿರುವುದನ್ನ ಒಪ್ಪಿಕೊಂಡಿದೆ. ಆದರೆ, ಕೆಲವರಿಗೆ ಸಾಕ್ಷ್ಯ ಕೊಡಬೇಕಂತೆ. ನಮ್ಮ ಸೈನಿಕರು ಪಾಕಿಸ್ತಾನದಲ್ಲಿ ಹೋಗಿ ಉಗ್ರರನ್ನ ಹೊಡೆದಿದ್ದಕ್ಕೆ ಸಾಕ್ಷಿ ಕೇಳುತ್ತಿದ್ದಾರೆ. ಆದರೆ, ಮುಸಲ್ಮಾನನ ಮಗ ಗಾಂಧಿ ಹೇಗಾದ ಅನ್ನೋದಕ್ಕೆ ಸಾಕ್ಷಿ ಕೊಡುತ್ತಾರಾ?' ಎಂದು ಹೇಳಿಕೆ ನೀಡಿದ್ದರು.
ಕೇಂದ್ರ ಸಚಿವ ಅನಂತ್ ಕುಮಾರ ಹೆಗಡೆ, ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ರಾಹುಲ್ ಗಾಂಧಿ ಅವರ ಮೇಲೆ ಘನತೆಗೆ ಚ್ಯುತಿ ಬರುವಂತಹ ಕೀಳು ಭಾಷೆಯ ಹೇಳಿಕೆಗಳನ್ನು ಪದೇ ಪದೇ ನೀಡುತ್ತಿರುವುದರ ವಿರುದ್ಧ ಚುನಾವಣಾ ಆಯೋಗದಲ್ಲಿ ಕೆಪಿಸಿಸಿ ವತಿಯಿಂದ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಬೇಕೆಂದು ಒತ್ತಾಯಿಸಿ ದೂರು ಸಲ್ಲಿಸಲಾಯಿತು. pic.twitter.com/nkdsawJgcX
— Karnataka Congress (@INCKarnataka) March 13, 2019












Click it and Unblock the Notifications