ದೆಹಲಿಗೆ ಶಿಫ್ಟ್ ಆಗಿರುವ ಕಾಂಗ್ರೆಸ್ ಟಿಕೆಟ್ ರಾಜಕೀಯ
ನವದೆಹಲಿ, ಏಪ್ರಿಲ್ 10: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಸಿದ್ದರಾಮಯ್ಯ ಮತ್ತು ಪರಮೇಶ್ವರ್ ದ್ವಯರು ದೆಹಲಿಗೆ ತೆರಳಿರುವ ಬೆನ್ನಲ್ಲೇ ಕಾಂಗ್ರೆಸ್‌ನ ಬಹುತೇಕ ಮುಖಂಡರು, ಟಿಕೆಟ್ ಆಕಾಂಕ್ಷಿಗಳು ದೆಹಲಿ ಸೇರಿದ್ದಾರೆ.
ಇಂದು ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸೇರಿದಂತೆ ಹಲವು ಪ್ರಮುಖ ಮುಖಂಡರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ಮನೆಗೆ ತೆರಳಿ, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.
ಅಲ್ಲಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರ ಮೇಲೆ ಕೊನೆಯ ಭಾರಿ ಪ್ರಭಾವ ಬೀರಲು ವಿವಿಧ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ದೆಹಲಿಗೆ ಹಾರಿದ್ದು, ಅಲ್ಲಿಯೂ ಕೊನೆಯ ಹಂತದ ಪ್ರಯತ್ನಗಳಲ್ಲಿ ನಿರತರಾಗಿದ್ದಾರೆ.

ದೆಹಲಿಯಲ್ಲಿ ತಮ್ಮನ್ನು ಭೇಟಿ ಆದ ಮುಸ್ಲಿಂ ಸಮುದಾಯದ ಟಿಕೆಟ್ ಆಕಾಂಕ್ಷಿಗಳಿಗೆ 'ಅಲ್ಪಸಂಖ್ಯಾತರು ಎಂಬ ಕೋಟಾದಡಿ ಟಿಕೆಟ್ ಕೇಳಬೇಡಿ, ಈಗಾಗಲೇ ಕಾಂಗ್ರೆಸ್ ಹಲವು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದೆ, ಎಂಎಲ್‌ಸಿಗಳನ್ನಾಗಿಯೂ ಹಲವರನ್ನು ಆಯ್ಕೆ ಮಾಡಲಾಗಿದೆ' ಎಂದಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ನಾಳೆ ಅಥವಾ ನಾಡಿದ್ದು ಕಾಂಗ್ರೆಸ್‌ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ.












Click it and Unblock the Notifications