Assembly Elections 2023: ಫೆಬ್ರವರಿ ಕೊನೆಗೆ 120 ರಿಂದ 150 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಕಾಂಗ್ರೆಸ್ ಲೆಕ್ಕಾಚಾರವೇನು.?
ಕರ್ನಾಟಕ ಚುನಾವಣೆಗೆ ಇನ್ನೆಡರು ತಿಂಗಳು ಬಾಕಿ ಇದೆ. ರಾಜಕೀಯ ಪಕ್ಷಗಳು ಈಗಾಗಲೇ ತಯಾರಿ ನಡೆಸುತ್ತಿವೆ. ಫೆಬ್ರವರಿ ಕೊನೆಯ ತಿಂಗಳ ಹೊತ್ತಿಗೆ ಕಾಂಗ್ರೆಸ್ ನ 120 ರಿಂದ 150 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.
ಬೆಂಗಳೂರು,ಫೆಬ್ರವರಿ6: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು. ರಾಜಕೀಯ ಪಕ್ಷಗಳು ಈಗಾಗಲೇ ಹಲವು ಸಮಾವೇಶ ಹಾಗೂ ಯಾತ್ರೆಗಳ ಮೂಲಕ ರಾಜ್ಯಾದ್ಯಂತ ಪ್ರವಾಸವನ್ನ ನಡೆಸುತ್ತಿದ್ದಾರೆ. ಇತ್ತ ಜೆಡಿಎಸ್ 93 ಅಭ್ಯರ್ಥಿಗಳ ಘೋಷಣೆ ಮಾಡಿದ್ದು, ಕಾಂಗ್ರೆಸ್ ಫೆಬ್ರವರಿ ಕೊನೆಯ ತಿಂಗಳ ಹೊತ್ತಿಗೆ 120 ರಿಂದ 150 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.
ಕಾಂಗ್ರೆಸ್ ರಾಜ್ಯ ಚುನಾವಣಾ ಸಮಿತಿಯು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಈಗಾಗಲೇ ಸಭೆ ನಡೆಸಿದ್ದು, ಹೊರ ರಾಜ್ಯಗಳ ನಾಯಕರು ಸೇರಿದಂತೆ ರಾಷ್ಟ್ರೀಯ ಮಟ್ಟದ ಸ್ಕ್ರೀನಿಂಗ್ ಕಮಿಟಿ ರಚನೆಯಾಗಲಿದ್ದು, ಈ ಸ್ಕ್ರೀನಿಂಗ್ ಕಮಿಟಿ ಪಟ್ಟಿಯನ್ನು ಅಂತಿಮಗೊಳಿಸಲಿದೆ. ನಂತರ ಪಟ್ಟಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕೇಂದ್ರ ಚುನಾವಣಾ ಸಮಿತಿಗೆ ರವಾನಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಅಭ್ಯರ್ಥಿಗಳ ಪಟ್ಟಿ ಕುರಿತು ಸಿದ್ದರಾಮಯ್ಯ ಹೇಳಿದ್ದೇನು.?
ಫೆಬ್ರವರಿ ಕೊನೆಯ ಹೊತ್ತಿಗೆ 120 ರಿಂದ 150 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುತ್ತದೆ. ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಗೆ ಸೇರುವವರು ಸಾಕಷ್ಟು ಜನ ಇದ್ದಾರೆ. ಮುಂದೆ ನೋಡೋಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಲಿ ಶಾಸಕರಿಗೆ ಟಿಕೆಟ್ ಕನ್ಪರ್ಮ್: ಡಿ.ಕೆ.ಶಿವಕುಮಾರ್
2018 ರಲ್ಲಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಯಡಿಯೂರಪ್ಪ ಹಾಗೂ ಬಸರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸಹಾಯ ಮಾಡಲಿಲ್ಲ. ಆದರೆ, ಅವರು ತಮ್ಮ ಕ್ಷೇತ್ರಗಳ ಶ್ರೇಯೋಭಿವೃದ್ಧಿಗಾಗಿ ದುಡಿದಿದ್ದಾರೆ. ಜನರ ನಡುವೆ ನಿಂತು ಅವರ ಕಷ್ಟಗಳನ್ನು ಆಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಿರುವ ಕಾಂಗ್ರೆಸ್‌ನ ಬಹುತೇಕ ಹಾಲಿ ಶಾಸಕರಿಗೆ ಕಾಂಗ್ರೆಸ್‌ನಿಂದ ಟಿಕೆಟ್ ಸಿಗಲಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ; ಕಾಂಗ್ರೆಸ್ ಲೆಕ್ಕಾಚಾರವೇನು.?
ಕಾಂಗ್ರೆಸ್ ರಾಜ್ಯ ಚುನಾವಣಾ ಸಮಿತಿಯು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಈಗಾಗಲೇ ಸಭೆ ನಡೆಸಿದ್ದು, ಹಲವು ಜಿಲ್ಲೆಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ.ಈ ನಡುವೆ ಅಭ್ಯರ್ಥಿಗಳ ಆಯ್ಕೆ ಸವಾಲಿನ ಕೆಲಸದಂತಾಗಿದೆ ಎಂದು ಚರ್ಚೆಯಾಗುತ್ತಿದ್ದು, ಟಿಕೆಟ್ ಘೋಷಣೆಯ ಬೆನ್ನಲ್ಲೆ ಇನ್ನಷ್ಟು ಬಂಡಾಯಕ್ಕೆ ಕಾರಣವಾಗಬಹುದು ಎಂಬ ಲೆಕ್ಕಾಚಾರವನ್ನ ಕಾಂಗ್ರೆಸ್ ಹಾಕಿಕೊಂಡಿದ್ದು, ಫೆಬ್ರವರಿ ಕೊನೆಯಲ್ಲಿ ಮೊದಲ ಪಟ್ಟಿ ಬಿಡುಗಡೆಗೆ ಈಗಾಗಲೇ ತಯಾರಿ ನಡೆಸಿದ್ದು, ಒಂದು ವೇಳೆ ಟಿಕೆಟ್ ಕೈ ತಪ್ಪಿದ ಅಭ್ಯರ್ಥಿಗಳು ಬಂಡಾಯವೆದ್ದರೇ ಯಾವ ರೀತಿಯಲ್ಲಿ ಬಂಡಾಯವನ್ನ ಶಮನಗೊಳಿಸುವ ಬೇಕು ಎಂಬ ಬಗ್ಗೆಯೂ ಕಾಂಗ್ರೆಸ್ ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲರವರ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನೂಈ ಬಾರಿ ಪಕ್ಷವನ್ನ ಅಧಿಕಾರಕ್ಕೆ ತರಬೇಕು ಎಂದು ಪಣತೊಟ್ಟಿರುವ ಕಾಂಗ್ರೆಸ್ ಎರಡನೇ ಪಟ್ಟಿಯನ್ನ ಮಾರ್ಚ್ ಎರಡನೇ ವಾರದಂದೂ ಪ್ರಕಟಗೊಳಿಸುವ ಸಾದ್ಯತೆ ಇದೆ. ಅಭ್ಯರ್ಥಿಗಳ ಅಂತಿಮ ಪಟ್ಟಿಗೆ ಅನುಸರಿಸಬೇಕಾದ ಮಾರ್ಗಸೂಚಿಗಳು, ಗೆಲುವಿನ ಸಾಮರ್ಥ್ಯ, ಸತತ ಎರಡು ಚುನಾವಣೆಯಲ್ಲಿ ಸೋತವರು, ಜಾತಿ ವಿಚಾರ ಮತ್ತು ಪಕ್ಷವು ನಡೆಸಿದ ಸಮೀಕ್ಷೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದ್ದು, ಕೆಲವು ಕ್ಷೇತ್ರಗಳಲ್ಲಿ ಬಹು ಆಕಾಂಕ್ಷಿಗಳಿರುವುದರಿಂದ ಬಂಡಾಯ ಶಮನಗೊಳಿಸುವ ಕಾರ್ಯತಂತ್ರದ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಆಭ್ಯರ್ಥಿಯ ಆಯ್ಕೆ ಸವಾಲಾಗಿಲ್ಲ ಎಂದ ಡಿ.ಕೆ.ಶಿವಕುಮಾರ್
ಇನ್ನೂ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಮಗೆ ಅಭ್ಯರ್ಥಿ ಆಯ್ಕೆ ಸವಾಲಾಗಿ ಪರಿಣಮಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಗೆದ್ದು ಅಧಿಕಾರ ಹಿಡಿಯುವುದು ನಮ್ಮ ಗುರಿ. ಪಕ್ಷ ಅಧಿಕಾರಕ್ಕೆ ಬರಲಿದೆ. ಈ ಕುರಿತು ಮತದಾರರು ವಿಶ್ವಾಸ ನೀಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಕೆಲವು ಕ್ಷೇತ್ರಗಳಿಂದ 10, 12, 20 ಅರ್ಜಿಗಳು ಬಂದಿವೆ. ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಕೆಲವರು ತ್ಯಾಗ ಮಾಡಲೇಬೇಕು. ಪಕ್ಷ ಅಧಿಕಾರಕ್ಕೆ ಬಂದರೆ ಬೇರೆ, ಬೇರೆ ರೀತಿಯಲ್ಲಿ ಅವರಿಗೆ ಅಧಿಕಾರ ನೀಡಲಾಗುವುದು ಎಂದು ಹೇಳಿದ್ದಾರೆ.












Click it and Unblock the Notifications