ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆನಂದ್ ಸಿಂಗ್ ರಾಜೀನಾಮೆ: ಕಾಂಗ್ರೆಸ್‌ಗೆ ಕೈ ಕೊಡಲಿದ್ದಾರೆ ಐದು ಶಾಸಕರು?

|
Google Oneindia Kannada News

ಬೆಂಗಳೂರು, ಜುಲೈ 01: ವಿಜಯನಗರ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರಕ್ಕೆ ಮತ್ತೊಂದು ಆತಂಕ ಎದುರಾಗಿದೆ.

ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೆ ಕಾಂಗ್ರೆಸ್‌ನ ಏಳು ಶಾಸಕರು ರಾಜೀನಾಮೆ ಸಲ್ಲಿಸಲು ತಯಾರಾಗಿದ್ದು, ಕೆಲವು ಶಾಸಕರು ಈಗಾಗಲೇ ಬೆಂಗಳೂರಿಗೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಆನಂದ್ ಸಿಂಗ್ ದಿಢೀರ್ ರಾಜೀನಾಮೆ: ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟ?ಆನಂದ್ ಸಿಂಗ್ ದಿಢೀರ್ ರಾಜೀನಾಮೆ: ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟ?

ಆನಂದ್ ಸಿಂಗ್ ಅವರು ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ಆದರೆ ಸ್ಪೀಕರ್ ರಮೇಶ್ ಕುಮಾರ್ ಅವರು ಹೇಳಿರುವಂತೆ ಈ ವರೆಗೂ ಅವರಿಗೆ ಯಾವ ರಾಜೀನಾಮೆ ಪತ್ರ ಸೇರಿಲ್ಲವಂತೆ.

ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೆ ಅವರ ಜೊತೆಗೆ ಇನ್ನೂ ಐದು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದ್ದು, ಕೆಲವು ಶಾಸಕರು ಈಗಾಗಲೇ ಬೆಂಗಳೂರು ತಲುಪಿದ್ದು, ಸೂಕ್ತ ಸಮಯಕ್ಕೆ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ಪಕ್ಕಾ

ರಮೇಶ್ ಜಾರಕಿಹೊಳಿ ರಾಜೀನಾಮೆ ಪಕ್ಕಾ

ಅತೃಪ್ತ ಶಾಸಕರ ಮುಖಂಡಗೋಕಾಖ್ ಶಾಸಕ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡುವುದು ಬಹುತೇಕ ಪಕ್ಕಾ ಆಗಿದೆ. ಈಗಾಗಲೇ ಕಾಂಗ್ರೆಸ್‌ನಿಂದ ಪೂರ್ಣ ದೂರವಾಗಿರುವ ಅವರು, ತಮ್ಮೊಂದಿಗೆ ಇನ್ನೂ ಕೆಲವು ಶಾಸಕರನ್ನು ಕರೆದುಕೊಂಡು ಹೋಗಲು ಹೊಂಚು ಹಾಕಿ ಕಾಯುತ್ತಿದ್ದಾರೆ ಹಾಗಾಗಿ ಅವರು ರಾಜೀನಾಮೆ ನೀಡುವುದು ಪಕ್ಕಾ ಆಗಿದೆ.ಸ

ಶಾಸಕ ಮಹೇಶ್ ಕುಮಟಳ್ಳಿ ರಾಜೀನಾಮೆಗೆ ತಯಾರು?

ಶಾಸಕ ಮಹೇಶ್ ಕುಮಟಳ್ಳಿ ರಾಜೀನಾಮೆಗೆ ತಯಾರು?

ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ರಮೇಶ್ ಜಾರಕಿಹೊಳಿ ಅವರ ಪಕ್ಕಾ ಬೆಂಬಲಿಗರಾಗಿದ್ದು, ಈಗಾಗಲೇ ಒಮ್ಮೆ ಬಿಜೆಪಿಯ ಬಾಗಿಲು ಬಡಿದು ಬಂದಿದ್ದಾರೆ. ಮಹೇಶ್ ಕುಮಟಳ್ಳಿ ಅವರೂ ಸಹ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಶಾಸಕ ಆನಂದ್ ಸಿಂಗ್ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಶಾಸಕ ಆನಂದ್ ಸಿಂಗ್

ಶಾಸಕ ಬಿ.ನಾಗೇಂದ್ರ ಕೂಡಾ ರಾಜೀನಾಮೆ?

ಶಾಸಕ ಬಿ.ನಾಗೇಂದ್ರ ಕೂಡಾ ರಾಜೀನಾಮೆ?

ಬಳ್ಳಾರಿ ಗ್ರಾಮಾಂತರಶಾಸಕ ನಾಗೇಂದ್ರ ಅವರು ಸಹ ರಮೇಶ್ ಜಾರಕಿಹೊಳಿ ಅವರ ಆಪ್ತವಲಯದಲ್ಲೇ ಗುರುತಿಸಿಕೊಂಡಿದ್ದು, ಆನಂದ್ ಸಿಂಗ್ ಅವರಿಗೆ ಸಹ ಆಪ್ತರಾಗಿದ್ದಾರೆ. ಇವರೂ ಸಹ ಒಮ್ಮೆ ಬಿಜೆಪಿಯ ಬಾಗಿಲು ಬಡಿದು ಬಂದಿದ್ದು, ಕೆಲವೇ ದಿನಗಳಲ್ಲಿ ಇವರೂ ರಾಜೀನಾಮೆ ನೀಡುತ್ತಾರೆ ಎನ್ನಲಾಗಿದೆ.

ಮಸ್ಕಿ ಶಾಸಕ ಪ್ರತಾಪ್ ಗೌಡ ರಾಜೀನಾಮೆ?

ಮಸ್ಕಿ ಶಾಸಕ ಪ್ರತಾಪ್ ಗೌಡ ರಾಜೀನಾಮೆ?

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಸಹ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಸುದ್ದಿಯನ್ನು ಅವರು ನೇರವಾಗಿ ಅಲ್ಲಗಳೆದಿದ್ದಾರೆ. ಆದರೆ ಮೈತ್ರಿ ಸರ್ಕಾರದ ಮೇಲೆ ಅಸಮಾಧಾನ ಇರುವ ಬಗ್ಗೆ ಒಪ್ಪಿಕೊಂಡಿದ್ದಾರೆ.

ನನಗೆ ಯಾರೂ ರಾಜೀನಾಮೆ ಪತ್ರ ನೀಡಿಲ್ಲ: ಸ್ಪೀಕರ್ ರಮೇಶ್ ಕುಮಾರ್ನನಗೆ ಯಾರೂ ರಾಜೀನಾಮೆ ಪತ್ರ ನೀಡಿಲ್ಲ: ಸ್ಪೀಕರ್ ರಮೇಶ್ ಕುಮಾರ್

ಮೈತ್ರಿ ಸರ್ಕಾರ ಬಗ್ಗೆ ಅಸಮಾಧಾನ ಹೊಂದಿರುವ ಬಿ.ಸಿ.ಪಾಟೀಲ್

ಮೈತ್ರಿ ಸರ್ಕಾರ ಬಗ್ಗೆ ಅಸಮಾಧಾನ ಹೊಂದಿರುವ ಬಿ.ಸಿ.ಪಾಟೀಲ್

ಹಿರೆಕೆರೂರುಶಾಸಕ ಮತ್ತು ಸಚಿವ ಸ್ಥಾನ ಆಕಾಂಕ್ಷಿ ಆಗಿದ್ದ ಬಿ.ಸಿ.ಪಾಟೀಲ್ ಅವರು ಸಹ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಪಾಟೀಲ್ ಅವರು ಈಗಾಗಲೇ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಹಹ ಹೇಳಿದ್ದಾರೆ ಹಾಗಾಗಿ ಅವರೂ ಸಹ ರಾಜೀನಾಮೆ ನೀಡುವ ಶಾಸಕ ಪಟ್ಟಿಯಲ್ಲಿದ್ದಾರೆ.

English summary
Congress MLA Anand Singh resigns to MLA post. Five more MLAs may resign to party and MLA post. Coalition government is under pressure.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X