ಕರ್ನಾಟಕದಲ್ಲಿ ಮತ್ತೆ ಚುನಾವಣೆ ಕಾವು: ಚುನಾವಣೆಗಳಿಗೆ ಉಸ್ತುವಾರಿ ಸಮಿತಿ ರಚಿಸಿದ ಕಾಂಗ್ರೆಸ್
ಬೆಂಗಳೂರು, ಜೂನ್ 20: ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಹಲವು ಚುನಾವಣೆಗಳಿಗೆ ರಾಜ್ಯ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಲೋಕಸಭಾ ಚುನಾವಣೆಯಲ್ಲಿ ಹಲವು ವಿಧಾನಸಭಾ ಕ್ಷೇತ್ರದ ಶಾಸಕರು ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಉಷಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಉಸ್ತುವಾರಿ ಸಮಿತಿಗಳನ್ನ ಕಾಂಗ್ರೆಸ್ ರಚಿಸಿದೆ.
ಹೌದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿತ್ತು. ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳನ್ನ ಗೆಲ್ಲುವ ನಿರೀಕ್ಷೆಯಲ್ಲಿದ್ದು, ಕೇವಲ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಹೀಗಾಗಿ ಕಾಂಗ್ರೆಸ್ ಈ ಬಾರೀ ಅಭ್ಯರ್ಥಿಗಳ ಆಯ್ಕೆ ಹಾಗೂ ಅಭ್ಯರ್ಥಿಗಳ ಜಯಶಾಲಿಯಾಗಲು ಅಗತ್ಯ ಚುನಾವಣಾ ತಂತ್ರಗಳನ್ನು ರೂಪಿಸುವ ಸಲುವಾಗಿ ಉಸ್ತುವಾರಿ ಸಮಿತಿಗಳು ರಚಿಸಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಹಲವು ವಿಧಾನಸಭಾ ಕ್ಷೇತ್ರದ ಶಾಸಕರು ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ವಿಧಾನ ಪರಿಷತ್ ಉಪ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಜುಲೈ 12 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆ ಉಪ ಚುನಾವಣಾ ತಂತ್ರಗಾರಿಕೆ ರೂಪಿಸಲು ಕಾಂಗ್ರೆಸ್ ಉಸ್ತುವಾರಿ ಸಮಿತಿ ರಚನೆ ಮಾಡಿದೆ.
ಇನ್ನೂ ಉಪ ಚುನಾವಣಾ ತಂತ್ರಗಾರಿಕೆ ರೂಪಿಸಲು ಕಾಂಗ್ರೆಸ್ ಉಸ್ತುವಾರಿ ಸಮಿತಿಯಲ್ಲಿ ಸಚಿವರು, ಸಂಸದರು, ಡಿಸಿಸಿ ಅಧ್ಯಕ್ಷರನ್ನೊಳಗೊಂಡ ಉಸ್ತುವಾರಿ ಸಮಿತಿಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಶಿಗ್ಗಾಂವಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಶಿಗ್ಗಾಂವಿ ಕ್ಷೇತ್ರಕ್ಕೆ ಸಚಿವ ಈಶ್ವರ್ ಖಂಡ್ರೆ, ಸಂಡೂರು ಕ್ಷೇತ್ರಕ್ಕೆ ಸಚಿವ ಜಮೀರ್ ಅಹಮದ್ ಖಾನ್, ಚನ್ನಪಟ್ಟಣ ಕ್ಷೇತ್ರಕ್ಕೆ ಸಚಿವ ಚಲುವರಾಯಸ್ವಾಮಿ ಮತ್ತು ಉಡುಪಿ-ದಕ್ಷಿಣ ಕನ್ನಡ ಪರಿಷತ್ ಸ್ಥಾನದ ಉಪ ಚುನಾವಣೆಗೆ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ.
ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದಿಂದ ಸ್ಫರ್ಧಿಸಿ ಗೆದ್ದಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೀಗ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇತ್ತ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು, ಗೆಲುವು ಸಾಧಿಸಿ ಸಂಸದರಾದ ಹಿನ್ನೆಲೆ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೇ ನೀಡಿದ್ದಾರೆ. ಸಂಡೂರು ಕೇತ್ರದ ಹಾಲಿ ಶಾಸಕರಾಗಿದ್ದ ಇ. ತುಕಾರಾಮ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉಡುಪಿ-ದಕ್ಷಿಣ ಕನ್ನಡ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ವಿಧಾನ ಪರಿಷತ್ ಸ್ಥಾನ ತೆರವಾಗಿತ್ತು.
ಉಷಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಪ್ರಬಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗಾಗಿ ಹಾಗೂ ಅಭ್ಯರ್ಥಿಗಳ ಜಯಶಾಲಿಯಾಗಲು ಅಗತ್ಯ ಚುನಾವಣಾ ತಂತ್ರಗಳನ್ನು ರೂಪಿಸುವ ಸಲುವಾಗಿ ಕಾಂಗ್ರೆಸ್ ಪಕ್ಷವು ಉಸ್ತುವಾರಿಗಳ ಸಮಿತಿಯನ್ನ ರಚನೆ ಮಾಡಿದ್ದು, ಹಲವು ತಂತ್ರಗಾರಿಕೆಯನ್ನ ಹಾಕಿಕೊಂಡಿದೆ.












Click it and Unblock the Notifications