ಯಡಿಯೂರಪ್ಪ ನುಡಿದಂತೆ ನಡೆಯಲಿ: ಸಿದ್ದರಾಮಯ್ಯ ಸಲಹೆ
ಬೆಂಗಳೂರು, ಜನವರಿ 19: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವುದಿಲ್ಲ. ನಮ್ಮ ಶಾಸಕರನ್ನು ಬರ ಅಧ್ಯಯನಕ್ಕೆ ಕಳುಹಿಸುತ್ತೇನೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನುಡಿದಂತೆ ನಡೆದುಕೊಳ್ಳಲಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ತನ್ನ ಶಾಸಕರನ್ನು ಹರಿಯಾಣದ ಗುರುಗ್ರಾಮಕ್ಕೆ ಕರೆದೊಯ್ದಿದ್ದ ಬಿಜೆಪಿಯ ರೆಸಾರ್ಟ್ ರಾಜಕಾರಣವನ್ನು ಟೀಕಿಸಿದ್ದ ಕಾಂಗ್ರೆಸ್, ಈಗ ಆಪರೇಷನಲ್ ಕಮಲದ ದಾಳಕ್ಕೆ ಶಾಸಕರು ಬೀಳಲಿದ್ದಾರೆ ಎಂಬ ಭಯದಿಂದ ತನ್ನ ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ದಿದೆ.
ಈ ಬಗ್ಗೆ ಶನಿವಾರ ಬೆಳಿಗ್ಗೆ ಹೇಳಿಕೆ ನೀಡಿರುವ ಯಡಿಯೂರಪ್ಪ, ತಮ್ಮ ಎಲ್ಲ ಶಾಸಕರನ್ನೂ ಬೆಂಗಳೂರಿಗೆ ಬರುವಂತೆ ಸೂಚಿಸಲಾಗಿದೆ. ನಾವು ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಆ ಭಯ ಬೇಡ. ನಾವು ವಿರೋಧ ಪಕ್ಷದಲ್ಲಿಯೇ ಕೆಲಸ ಮಾಡುತ್ತೇವೆ. ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಅಧ್ಯಯನ ನಡೆಸಲು ತೆರಳುವುದು, ಜನರ ಸಮಸ್ಯೆ ಆಲಿಸುವುದ ನಮ್ಮ ಕೆಲಸವಾಗಲಿದೆ ಎಂದು ಹೇಳಿದ್ದರು.

ಯಡಿಯೂರಪ್ಪ ಅವರ ಈ ಹೇಳಿಕೆಯನ್ನು ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ದೆಹಲಿಯಲ್ಲಿದ್ದ ಬಿಜೆಪಿ ಶಾಸಕರನ್ನು ಕರೆಸಿಕೊಂಡು ರಾಜ್ಯದ ಬರನಿರ್ವಹಣೆಯ ಸಮೀಕ್ಷೆಗೆ ಕಳುಹಿಸುವ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರವನ್ನು ಸ್ವಾಗತಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
'ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ, ಪ್ರತಿಪಕ್ಷವಾಗಿ ಕೆಲಸ ನಿರ್ವಹಿಸುತ್ತೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಭಯ ಬೇಡ' ಎಂದಿರುವ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆಯಲಿ, ರಾಜ್ಯದ ಜನರ ನಂಬಿಕೆ ಉಳಿಸಿಕೊಳ್ಳಲಿ.@INCKarnataka
— Siddaramaiah (@siddaramaiah) 19 January 2019
ಜೊತೆಗೆ ಯಡಿಯೂರಪ್ಪ ನುಡಿದಂತೆ ನಡೆದು ರಾಜ್ಯದ ಜನತೆಯ ನಂಬಿಕೆ ಉಳಿಸಿಕೊಳ್ಳಲಿ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.
'ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ, ಪ್ರತಿಪಕ್ಷವಾಗಿ ಕೆಲಸ ನಿರ್ವಹಿಸುತ್ತೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಭಯ ಬೇಡ' ಎಂದಿರುವ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆಯಲಿ, ರಾಜ್ಯದ ಜನರ ನಂಬಿಕೆ ಉಳಿಸಿಕೊಳ್ಳಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.












Click it and Unblock the Notifications