ಸಿಎಂ ಆಯ್ಕೆ ವಿಳಂಬದ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಜಿ.ಪರಮೇಶ್ವರ
ಬೆಂಗಳೂರು, ಮೇ 18: ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನ ಉತ್ತಮ ಆಡಳಿತವನ್ನು ಜನ ನೋಡಲಿದ್ದಾರೆ. ಯಾವುದೇ ವಿಚಾರದಲ್ಲೂ ಸಹ ಹತ್ತಾರು ದಶಕಗಳ ಇತಿಹಾಸವಿರುವ ಕಾಂಗ್ರೆಸ್ ಯಾವುದನ್ನು ಸಹ ಬಿಜೆಪಿಯನ್ನು ನೋಡಿ ಕಲಿಯುವ ಅಗತ್ಯವಿಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.
#WATCH | "Let AICC officially make an announcement about whom to give which position, and then the rest of the things will follow," says Congress leader & former Dy CM Dr G Parameshwara on Karnataka government formation. pic.twitter.com/46JTMBopF1
— ANI (@ANI) May 18, 2023
ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಹುಮತ ಬಂದರೂ ಸಿಎಂ ಆಯ್ಕೆಯನ್ನು ಕಾಂಗ್ರೆಸ್ ಬೇಗ ಮಾಡುತ್ತಿಲ್ಲ ಎಂದೆಲ್ಲ ಬಿಜೆಪಿ ನಾಯಕರು ಆರೋಪಿಸಿದ್ದರು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿ.ಪರಮೇಶ್ವರ್, ಸುಮಾರು 130 ವರ್ಷಗಳ ಇತಿಹಾಸ ಕಾಂಗ್ರೆಸ್ ಪಕ್ಷಕ್ಕೆ ಇದೆ. ಸಾಕಷ್ಟು ಸಲ ದೇಶದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಿದೆ ಹೊರತು, ಬಿಜೆಪಿ ಅಲ್ಲ. ಹೀಗಾಗಿ ನಾವು ಬಿಜೆಪಿಯಿಂದ ಏನನ್ನು ನೋಡಿ ಕಲಿಯುವ ಅವಶ್ಯಕತೆ ಇಲ್ಲ ಎಂದು ಅವರು ತಿರುಗೇಟು ನೀಡಿದರು.

ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಮಾತನಾಡಿದ ಅವರು, ಕರ್ನಾಟಕದ ಜನರು ಕಳೆದ ನಾಲ್ಕು ವರ್ಷಗಳ ಹಿಂದಿನ ಆಡಳಿತ ನೋಡಿದ್ದಾರೆ. ಮುಂದಿನ ಕಾಂಗ್ರೆಸ್ ಆಡಳಿತ ನೋಡಿ ಅವರೇ ನಿರ್ಧರಿಸುತ್ತಾರೆ. ಕಾಂಗ್ರೆಸ್ ಜನರಿಗೆ ಉತ್ತಮ ಆಡಳಿತ ನೀಡುವ ವಿಶ್ವಾಸ ನಮಗಿದೆ ಎಂದರು.
ಸಿಎಂ ಆಯ್ಕೆ ಬಗ್ಗೆ ಎಐಸಿಸಿಯೇ ಘೋಷಿಸಲಿದೆ
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಲ್ಲಿ ಯಾರು ಮುಖ್ಯಮಂತ್ರಿ ಆಗಬೇಕು. ಯಾರು ಡಿಸಿಎಂ ಆಗಬೇಕು ಎಂಬುದರ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು ನಿರ್ಧರಿಸಲಿದ್ದಾರೆ. ಅವರೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಯಲಿದೆ. ಅದಾದ ಬಳಿಕ ಎಲ್ಲವು ತಿಳಿಯಲಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದಲ್ಲಿ ನೀವು ಸಹ ಪ್ರಮುಖ ಜವಾಬ್ದಾರಿ ವಹಿಸುಕೊಳ್ಳುವ ಮಾತುಗಳು ಕೇಳಿ ಬರುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಅದನ್ನು ಸಹ ಎಐಸಿಸಿ ನಿರ್ಧರಿಸುತ್ತದೆ. ಎಲ್ಲವನ್ನು ಹೈಕಮಾಂಡ್ ಅಂತಿಮಗೊಳಿಸಿ ಅವರೇ ಅಧಿಕೃತವಾಗಿ ಘೋಷಿಸುತ್ತಾರೆ. ಅದನ್ನು ನಾವು ಅನಸರಿಸುತ್ತೇವೆ. ಅಲ್ಲಿಯವರೆಗೆ ಕಾಯೋಣ ಎಂದು ಅವರು ತಿಳಿಸಿದರು.

ಕರ್ನಾಟಕದ ಸಿಎಂ ಯಾರಾಗಬೇಕು ಎಂದು ಕೆಲವೇ ನಿಮಿಷಗಳಲ್ಲಿ ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಸುದ್ದಿಗೋಷ್ಠಿಯಲ್ಲಿ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ. ಐದು ವರ್ಷದ ಸಿಎಂ ಆಡಳಿತದ ಅವಧಿಯನ್ನು ಎಐಸಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ತಲಾ 2.5 ವರ್ಷದಂತೆ ಹಂಚಿಕೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.












Click it and Unblock the Notifications