ಅಮಿತ್ ಶಾರಿಂದ ನೀತಿ ಸಂಹಿತೆ ಉಲ್ಲಂಘನೆ, ಕಾಂಗ್ರೆಸ್‌ನಿಂದ ಆಯೋಗಕ್ಕೆ ದೂರು
Recommended Video

ಬೆಂಗಳೂರು, ಮಾರ್ಚ್ 30: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದ್ದಾರೆ. ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದಾಖಲಿಸುತ್ತಿರುವ ಎರಡನೇ ದೂರು ಇದಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಇಂದು ಮೈಸೂರಿನ ಕ್ಯಾತಮಾರನಹಳ್ಳಿಯ ಬಿಜೆಪಿ ಕಾರ್ಯಕರ್ತ ಮೃತ ರಾಜು ಅವರ ಮನೆಗೆ ಭೇಟಿ ನಿಡಿದ್ದ ಅಮಿತ್ ಶಾ ಅವರು ಅವರ ಕುಟುಂಬ ಸದಸ್ಯರಿಗೆ 5 ಲಕ್ಷ ರೂಪಾಯಿ ಚೆಕ್ ನೀಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್ ಮುಖಂಡರಾದ ಸೂರಜ್ ಹೆಗಡೆ. ಬ್ರಿಜೇಶ್ ಕಾಳಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದರು. ಈ ಮುಂಚೆ ಸಿದ್ದರಾಮಯ್ಯ ಅವರ ವಿರುದ್ಧ ಅಮಿತ್ ಶಾ ಕೀಳು ಭಾಷೆ ಬಳಸಿದ್ದಾರೆ, ಅವರ ಜಾತಿ ಉಲ್ಲೇಖಿಸಿ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದ್ದರು.

ಚುನಾವಣಾ ನೀತಿ ಸಂಹಿತೆ ಪ್ರಕಾರ ಚುನಾವಣೆ ಮುಗಿಯುವವರೆಗೆ ಚುನಾವಣೆಗೆ ಸಂಬಂಧಿಸಿದ ಯಾವೊಬ್ಬ ವ್ಯಕ್ತಿಗೆ ದೊಡ್ಡ ಮೊತ್ತದ ಹಣ ಸಹಾಯ ನೀಡುವಂತಿಲ್ಲ, ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ಹೊರತುಪಡಿಸಿ ಇನ್ನಾವುದೇ ವ್ಯಕ್ತಿಗೆ ಹಣ ಸಹಾಯ ಮಾಡುವಂತಿಲ್ಲ.
ಆದರೆ ಅಮಿತ್ ಶಾ ಅವರು 5 ಲಕ್ಷ ರೂಪಾಯಿ ಹಣ ನೀಡಿರುವುದು ಸ್ಪಷ್ಟ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿದ್ದು, ಅದರ ಚುನಾವಣಾ ಆಯೋಗವು ಕ್ರಮ ಜರುಗಿಸುವ ಸಾಧ್ಯತೆಯೂ ಇದೆ.
ದೂರು ನೀಡಿದ ಬಳಿಕ ಮಾತನಾಡಿದ ಬ್ರಿಜೇಶ್ ಕಾಳಪ್ಪ ಅವರು ಅಮಿತ್ ಶಾ ಅವರು ಸ್ಪಷ್ಟವಾಗಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕ್ರಮ ಜರುಗಿಸಲೇ ಬೇಕಿದೆ ಎಂದರು.












Click it and Unblock the Notifications