ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ತಾಕತ್ತು ಹೊಂದಿದವರಿಗೆ ಮಂತ್ರಿ ಪಟ್ಟ: Inside Story
ಬೆಳಗಾವಿ, ಮೇ 24: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಮೊದಲ ಸುತ್ತಿನಲ್ಲೇ ಎಂಟು ಮಂದಿ ಪ್ರಮುಖ ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಸಚಿವ ಸ್ಥಾನದ ಆಕಾಂಕ್ಷಿಗಳು ಸಂಪುಟ ವಿಸ್ತರಣೆಗೆ ತುದಿಗಾಲಲ್ಲಿ ನಿಂತಿದ್ದಾರೆ. ಅವರಲ್ಲಿ ಹಲವರು ಮುಖ್ಯಮಂತ್ರಿ ಮತ್ತು ಪಕ್ಷದ ಹೈಕಮಾಂಡ್ ಜೊತೆ ಮಾತುಕತೆಯನ್ನು ಮಾಡುತ್ತಿದ್ದಾರೆ. ಆದರೆ, ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಮಹತ್ವದ ಮಾನದಂಡವನ್ನು ಅನುಸರಿಸುತ್ತಿದೆ.
2024 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವ, ಆಯಾ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಸಾಮಾರ್ಥ್ಯವುಳ್ಳ ಶಾಸಕರಿಗೆ ಮಾತ್ರ ಮಂತ್ರಿ ಪಟ್ಟ ನೀಡಲಾಗುವುದು ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಅಂತರದಿಂದ ಗೆದ್ದಿರುವ ಕೆಲವು ಶಾಸಕರನ್ನು ಸಚಿವ ಸ್ಥಾನಕ್ಕಾಗಿ ಆಯ್ಕೆ ಮಾಡುವ ಕಸರತ್ತು ನಡೆಯುತ್ತಿದೆ. ಗರಿಷ್ಠ ಸಂಖ್ಯೆಯ ಲೋಕಸಭೆ ಸ್ಥಾನಗಳನ್ನು ಗೆಲ್ಲಲು ಪಕ್ಷವು ಕಾರ್ಯತಂತ್ರವನ್ನು ರೂಪಿಸುತ್ತಿದೆ. ಸಾರ್ವತ್ರಿಕ ಚುನಾವಣೆಗೆ ಸಮೀಕರಣಗಳು ಭಿನ್ನವಾಗಿರುತ್ತವೆ ಎಂದು ಕಾಂಗ್ರೆಸ್‌ಗೆ ತಿಳಿದಿದೆ. ವಿಧಾನಸಭಾ ಚುನಾವಣೆಯಲ್ಲಿ ಮತದಾರರು ನಡೆದುಕೊಂಡ ರೀತಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ನಡೆದುಕೊಳ್ಳಲಾರರು ಎಂದೂ ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಅದಕ್ಕಾಗಿಯೇ ಪಕ್ಷವು ಎಲ್ಲಾ ವರ್ಗಗಳನ್ನು ತೃಪ್ತಿಪಡಿಸುವುದನ್ನು ಆಶ್ರಯಿಸುವುದಕ್ಕಿಂತ ಹೆಚ್ಚಾಗಿ ತನ್ನ ಜನಪ್ರಿಯ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಉತ್ಸುಕವಾಗಿದೆ ಎಂದು ಮೂಲಗಳು ತಿಳಿಸಿವೆ.
ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಈ ಪ್ರದೇಶದಲ್ಲಿ ಜನಪ್ರಿಯರಾಗಿರುವ ಕಾರಣ ಪಕ್ಷಕ್ಕೆ ಬೆಳಗಾವಿ ಲೋಕಸಭಾ ಸ್ಥಾನ ಸಿಗಬಹುದು ಎಂದು ಪಕ್ಷದ ಕೆಲವು ಮುಖಂಡರು ಹೇಳಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಲಿಂಗಾಯತ ಮತದಾರರನ್ನು ಸೆಳೆಯಲು ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬಹುದು ಎನ್ನಲಾಗಿದೆ. ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಹಿಡಿತವನ್ನು ಪರಿಗಣಿಸಿ ಪಕ್ಷವು ಅವರನ್ನು ಆಯ್ಕೆ ಮಾಡಬೇಕು ಎಂದು ಮುಖಂಡರು ಸಲಹೆ ನೀಡಿದ್ದಾರೆ.

ಈಶ್ವರ ಖಂಡ್ರೆ, ಶಿವಾನಂದ ಪಾಟೀಲ್, ಬಸವರಾಜ ರಾಯರೆಡ್ಡಿ, ನಾಗೇಂದ್ರ, ಶರಣಬಸಪ್ಪ ದರ್ಶನಾಪುರ ಮತ್ತು ಶರಣಪ್ರಕಾಶ ಪಾಟೀಲ್ ಸೇರಿದಂತೆ ಕಿತ್ತೂರು-ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಕೆಲವು ಜನಪ್ರಿಯ ಶಾಸಕರು ಸಚಿವ ಸಂಪುಟ ಸೇರಬಹುದು.
ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಪಾತ್ರ ವಹಿಸಬಹುದಾದ ಪ್ರಿಯಾಂಕ ಖರ್ಗೆ ಮತ್ತು ಎಂ ಬಿ ಪಾಟೀಲ್ ಈಗಾಗಲೇ ಸಂಪುಟದಲ್ಲಿದ್ದಾರೆ. ಬಿಜೆಪಿಯ ಧಾರವಾಡದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಎದುರಿಸಲು ವಿನಯ್ ಕುಲಕರ್ಣಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಗಂಭೀರವಾಗಿ ಪರಿಗಣಿಸುತ್ತಿದೆ.
ಆದರೆ ಲೋಕಸಭೆ ಚುನಾವಣೆಯಲ್ಲಿ ಜೋಶಿ ವಿರುದ್ಧ ಶೆಟ್ಟರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಬಹುದು. ಅವರನ್ನು ಒಂದು ವೇಳೆ ಸಚಿವ ಸ್ಥಾನಕ್ಕೆ ಪರಿಗಣಿಸದೇ ಹೋದರೆ, ಈ ಬೆಳವಣಿಗೆ ನಡೆಯಬಹುದು.

ಮುಂದಿನ ಎರಡು ಮೂರು ದಿನಗಳಲ್ಲಿ ಸಿದ್ದರಾಮಯ್ಯ ಅವರು ಪಕ್ಷದ ಹೈಕಮಾಂಡ್‌ನೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿದ ನಂತರ ಶುಕ್ರವಾರ ಅಥವಾ ಶನಿವಾರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷವು 28 ಸಚಿವರ ಸಂಪುಟವನ್ನು ಹೊಂದಬಹುದು. ಸ್ವಲ್ಪ ಸಮಯದ ನಂತರ ಇನ್ನೂ ಐದು ಸಚಿವರನ್ನು ಸೇರಿಸಿಕೊಳ್ಳಲು ಮತ್ತೊಂದು ಸುತ್ತಿನ ವಿಸ್ತರಣೆಗೆ ಹೋಗಬಹುದು ಎಂದು ತಿಳಿದುಬಂದಿದೆ.
ಇಂದು ದೆಹಲಿಗೆ ಸಿಎಂ, ಡಿಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಕುರಿತು ಪಕ್ಷದ ಕೇಂದ್ರ ನಾಯಕತ್ವ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿಸಲಿದ್ದಾರೆ.

ಶುಕ್ರವಾರ ಅಥವಾ ಶನಿವಾರ ಸಿಎಂ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ, ಸಿಎಂ ಹಾಗೂ ಡಿಸಿಎಂ ಕೇಂದ್ರ ನಾಯಕರ ಜತೆ ಚರ್ಚಿಸಿದ ಬಳಿಕ ನಿರ್ಧಾರವಾಗಲಿದೆ. ಮೂರು ದಿನಗಳ ವಿಧಾನಸಭೆಯ ಅಧಿವೇಶನ ಬುಧವಾರ ಮುಕ್ತಾಯಗೊಂಡ ನಂತರ, ಇಬ್ಬರು ಉನ್ನತ ನಾಯಕರು ವಿಶೇಷ ವಿಮಾನದ ಮೂಲಕ ನವದೆಹಲಿಗೆ ಪ್ರಯಾಣಿಸಲಿದ್ದಾರೆ. ಸಿದ್ದರಾಮಯ್ಯ ಅವರು 20 ಹೊಸ ಸಚಿವರನ್ನು ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್










Click it and Unblock the Notifications