Yuva Nidhi Scheme: ಯುವ ನಿಧಿ ಯೋಜನೆಗೆ ಚಾಲನೆ: ನಿರುದ್ಯೋಗಿ ಡಿಪ್ಲೋಮಾ, ಪದವೀಧರರ ಖಾತೆಗೆ ಬೀಳಲಿದೆ 1500, 3000 ರೂಪಾಯಿ
ಬೆಂಗಳೂರು, ಜನವರಿ 12: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗ್ಯಾರಂಟಿ ಯುವನಿಧಿ ಯೋಜನೆಗೆ ಇಂದು (ಶುಕ್ರವಾರ) ಶಿವಮೊಗ್ಗ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಚಾಲನೆ ನೀಡಲಾಗುತ್ತಿದೆ.
ಲೋಕಸಭೆ ಚುನಾವಣೆ ಹತ್ತಿರವಾಗ್ತಿರುವ ಸಂದರ್ಭದಲ್ಲಿ 5 ನೇ ಗ್ಯಾರಂಟಿ ಗ್ಯಾರಂಟಿ ಯೋಜನೆಯಾದ ಯುವ ನಿಧಿಯನ್ನು ಜಾರಿಗೆ ತರುತ್ತಿದೆ. ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ಸಿಕ್ಕಿದೆ. ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಂದ ನೋಂದಣಿ ಮಾಡಿಕೊಂಡಿದ್ದಾರೆ.

ಇಂದು ಸ್ವಾಮಿ ವಿವೇಕಾನಂದ ಜಯಂತಿ. ಈ ದಿನವನ್ನು ರಾಷ್ಟ್ರೀಯ ಯುವ ದಿನಾಚರಣೆಯನ್ನಾಗಿಯೂ ಆಚರಿಸಲಾಗ್ತಿದೆ. ಈ ದಿನವೇ ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿಂದು ನಡೆಯುವ ಕಾರ್ಯಕ್ರಮದಲ್ಲಿ ಯುವನಿಧಿಗೆ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುತ್ತೆ. 2022-23ನೇ ಸಾಲಿನಲ್ಲಿ ಪಾಸಾದ ನಿರುದ್ಯೋಗಿಗಳು ಯೋಜನೆಗೆ ಅರ್ಹರಾಗಿದ್ದು, ಒಟ್ಟು 5.29 ಲಕ್ಷ ಫಲಾನುಭವಿಗಳಿಗೆ ಇದರ ಪ್ರಯೋಜನ ಲಭ್ಯವಾಗಲಿದೆ.
ಯುವ ನಿಧಿ ಚಾಲನೆ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಚಿತ್ರದುರ್ಗ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ ಸೇರಿ ಬೇರೆ ಬೆರೆ ಜಿಲ್ಲೆಗಳಿಂದ ಜನ ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ಊಟದ ವ್ಯವಸ್ಥೆಯಿದೆ ಎಂದು ಹೇಳಲಾಗಿದೆ.
ಏನಿದು ಯುವನಿಧಿ ಯೋಜನೆ?
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೊಳಿಸಿದೆ. ಇದೀಗ ಐದನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸಲಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ಸಿಗಲಿದೆ. ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ನೀಡಿದರೆ, ಡಿಪ್ಲೋಮಾ ಪದವೀಧರರಿಗೆ 1500 ರೂಪಾಯಿ ನೀಡಲಾಗುತ್ತದೆ. ಪದವೀಧರರಿಗೆ ಉದ್ಯೋಗ ಸಿಗುವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನೀಡಲಾಗುತ್ತದೆ.
ನೋಂದಣಿ ಮಾಡುವುದು ಹೇಗೆ?
ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.
ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು.
2023ರಲ್ಲಿ ಪದವಿ/ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು.
ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ.
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಎಸ್‍ಎಸ್‍ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ ಅಗತ್ಯ. ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್ನಲ್ಲಿ ಸಲ್ಲಿಸಬಹುದಾಗಿದೆ.
ಅರ್ಹರಾಗದೇ ಇರುವವರು ಯಾರು?
ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರಿಗೆ ಯೋಜನೆ ಅನ್ವಯಿಸುವುದಿಲ್ಲ.
ಶಿಷ್ಯ ವೇತನವನ್ನು ಪಡೆಯುತ್ತಿರುವವರಿಗೆ ಯುವನಿಧಿ ಅನ್ವಯಿಸುವಿದಿಲ್ಲ.
ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರಿಗೆ ಅನ್ವಯ ಆಗುವುದಿಲ್ಲ.












Click it and Unblock the Notifications