ಜನಸಂಖ್ಯೆಗನುಗುಣವಾಗಿ ಶೇ.70 ರ ಮೀಸಲಾತಿಗೆ ಬದ್ಧ: ಸಿಎಂ

Posted By:
Subscribe to Oneindia Kannada

ಬೆಳಗಾವಿ, ನವೆಂಬರ್:29: ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು ಎನ್ನುವುದಕ್ಕೆ ಸರ್ಕಾರ ಬದ್ಧವಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಶೇ.70 ರಷ್ಟು ಮೀಸಲಾತಿ ಎಲ್ಲ ವರ್ಗಗಳಿಗೂ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷಾ ವರದಿ ಡಿಸೆಂಬರ್ ಅಥವಾ 2017 ರ ಜನವರಿ ತಿಂಗಳಲ್ಲಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಹೇಳಿದ್ದಾರೆ.

ವಿಧಾನಪರಿಷತ್ತಿನಲ್ಲಿ ಸದಸ್ಯರಾದ ವಿ.ಎಸ್. ಉಗ್ರಪ್ಪ, ಶ್ರೀಮತಿ ಮೋಟಮ್ಮ, ಹೆಚ್.ಎಂ. ರೇವಣ್ಣ ಅವರು ಮಂಡಿಸಿದ ಗಮನ ಸೆಳೆಯುವ ಸೂಚನೆಯ ಚರ್ಚೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು, 2004-05ನೇ ಸಾಲಿನ ಬಜೆಟ್ ನಲ್ಲಿ ತಾವು ಹಣಕಾಸು ಮಂತ್ರಿಯಾಗಿದ್ದಾಗ ಸಮಾಜದ ಎಲ್ಲ ಜನರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಗಬೇಕೆಂದು ಕ್ರಮ ಕೈಗೊಂಡು ಹಣ ಮೀಸಲಿಟ್ಟಿದ್ದೆ.[ಮೇಲ್ವರ್ಗದ ಬಡವರಿಗೂ ಮೀಸಲಾತಿ ಘೋಷಿಸಿದ ಗುಜರಾತ್]

ಆದರೆ, ಕಾರಣಾಂತರಗಳಿಂದ ಅದು ಹಾಗೇ ಉಳಿದು ನಾನು ಮುಖ್ಯಮಂತ್ರಿಯಾದ ಮೇಲೆ ಈ ಕುರಿತು ಕ್ರಮ ಕೈಗೊಂಡಿದ್ದೇನೆ. ಈಗ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿದ್ದು, ಕಾಂತರಾಜು ನೇತೃತ್ವದ ಆಯೋಗ ಡಿಸೆಂಬರ್ ಅಥವಾ ಜನೇವರಿಯಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದು, ಅದನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಾಗುವುದೆಂದು ಹೇಳಿದರು.

Congress Government bats for 70 per cent quota for SC/STs, OBCs

ಕೆ.ಎಸ್. ಈಶ್ವರಪ್ಪರಿಂದ ಬೆಂಬಲ : ಮುಂದಿನ ಅಧಿವೇಶನದಲ್ಲಿ ವರದಿಯನ್ನು ಸದನದಲ್ಲಿ ಮಂಡಿಸಲಾಗುವುದು. ಅದರಲ್ಲಿನ ಅಂಶಗಳಿಗೆ ಅನುಗುಣವಾಗಿ ಅಗತ್ಯವಿರುವ ಸಂವಿಧಾನ ತಿದ್ದುಪಡಿಯನ್ನು ಸದನದಿಂದ ಪಡೆದು ಕೇಂದ್ರಕ್ಕೆ ಸಲ್ಲಿಸಲಾಗುವುದು. ಈ ಸಂದರ್ಭದಲ್ಲಿ ವಿರೋಧ ಪಕ್ಷಗಳ ಸಹಕಾರವು ಬೇಕೆಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಸರ್ಕಾರದ ನಡೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.[ಮೀಸಲಾತಿಗೆ ಬಲಿಯಾದ ಒಂದು ಛೊಲೋ ಪ್ರೀತಿ!]

ಪ್ರಸ್ತುತ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಶೇ.18, ಇತರೆ ಹಿಂದುಳಿದ ವರ್ಗಗಳಿಗೆ ಶೇ.32 ರಷ್ಟು ಮೀಸಲಾತಿ ಇದೆ. 2011 ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿಗೆ ಶೇ.17.15 ಪರಿಶಿಷ್ಟ ಪಂಗಡಕ್ಕೆ ಶೇ.6.95 ಮೀಸಲಾತಿ ಸಿಗಬೇಕಾಗಿದೆ. ಹಿಂದುಳಿದ ವರ್ಗಗಳ ಜನಸಂಖ್ಯೆಯಲ್ಲಿಯೂ ಏರಿಕೆಯಾಗಿದೆ.[ಜಾತಿ ಮೀಸಲಾತಿ ನಿಷೇಧ ಅಸಾಧ್ಯ, ಏಕೆಂದರೆ?]

ಒಟ್ಟಾರೆ ಮೀಸಲಾತಿ ಪ್ರಮಾಣ ಶೇ.50 ರಿಂದ ಶೇ.70 ಕ್ಕೆ ಹೆಚ್ಚಳವಾಗಬೇಕಾಗಿದೆ. ಆದರೆ ಸುಪ್ರೀಂಕೋರ್ಟ್ ಎಲ್ಲಾ ವರ್ಗದ ಮೀಸಲಾತಿ ಶೇ.50 ಮೀರಬಾರದು ಎಂಬ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶೇ.50 ರಷ್ಟು ಮೀಸಲಾತಿಯನ್ನು ಮಾತ್ರ ಪ್ರಸ್ತುತ ಕಲ್ಪಿಸಲಾಗಿದೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಬಂದ ನಂತರ ಜಾತಿವಾರು ಜನಸಂಖ್ಯೆಗನುಗುಣವಾಗಿ ಶೇ.70 ರಷ್ಟು ಮೀಸಲಾತಿ ಕಲ್ಪಿಸಿ ಸಂವಿಧಾನದ ಅನುಸೂಚಿ 9 ರಡಿ ಸೇರ್ಪಡೆಗೆ ಕೇಂದ್ರಕ್ಕೆ ಕಳುಹಿಸಲಾಗುವುದು. ಆಗ ವಿರೋಧ ಪಕ್ಷಗಳು ಕೇಂದ್ರದ ಮೇಲೆ ಒತ್ತಡ ಹೇರಿ ಸಾಮಾಜಿಕ ನ್ಯಾಯ ಜಾರಿಗೊಳಿಸಲು ಸಹಕರಿಬೇಕು ಎಂದರು.

ಇದಕ್ಕೂ ಮುನ್ನ ನಡೆದ ಚರ್ಚೆಯಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ, ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಸದಸ್ಯರಾದ ವಿ.ಎಸ್. ಉಗ್ರಪ್ಪ, ಮೋಟಮ್ಮ, ಕೆ.ಬಿ. ಶಾಣಪ್ಪ, ಬಸವರಾಜ ಹೊರಟ್ಟಿ, ಕೆ.ಸಿ. ಕೊಂಡಯ್ಯ, ಹೆಚ್.ಎಂ. ರೇವಣ್ಣ, ಪುಟ್ಟಸ್ವಾಮಿ, ರಿಜ್ವಾನ್ ಅರ್ಷದ್ ಹಾಗೂ ಮತ್ತಿತರರು ಭಾಗವಹಿಸಿ ತಮ್ಮ ವಾದಗಳನ್ನು ಮಂಡಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Chief Minister Siddaramaiah on Tuesday said that his government would take all initiatives to increase reservation for SC/STs and other backward classes from 50 to 70 per cent. Caste census of Karnataka State Commission for Backward Classes will be tabled in two months, he said.
Please Wait while comments are loading...