ಸಿದ್ದರಾಮಯ್ಯ ನೀವೇ ನಮ್ಮ ನೀರೋ!, ರಾಜ್ಯದ ಪಾಲಿನ ಝೀರೋ!

ಬೆಂಗಳೂರು, ಮಾರ್ಚ್ 10: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕೆಗಳನ್ನು ಮಾಡಿದ್ದು, 'ಲಜ್ಜೆಗೇಡು' ಎಂದು ಆರೋಪಿಸಿದ್ದಾರೆ.

ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಎಚ್. ಡಿ. ಕುಮಾರಸ್ವಾಮಿ, #ಕರ್ನಾಟಕದ_ಝೀರೋ, #ಸಿದ್ದನಾಮಿಕ್ಸ್ ಎಂಬ ಹ್ಯಾಷ್‌ಟ್ಯಾಗ್ ಬಳಕೆ ಮಾಡಿ ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಟೀಕೆ ಮಾಡಿದ್ದಾರೆ.

Congress Government Guarantee Rally Kumaraswamy Upset With Govt

ಕುಮಾರಸ್ವಾಮಿ ಗರಂ: ಎಚ್. ಡಿ. ಕುಮಾರಸ್ವಾಮಿ ತಮ್ಮ ಪೋಸ್ಟ್‌ನಲ್ಲಿ, 'ರಾಜ್ಯ ಇತಿಹಾಸದಲ್ಲಿ ಕಂಡೂ ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ Indian National Congress - Karnataka ಸರಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ! ಲಜ್ಜೆಗೇಡು!!' ಎಂದು ಕುಮಾರಸ್ವಾಮಿ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

'ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!' ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ!! ರಾಜ್ಯದ ಪಾಲಿನ ಝೀರೋ!! ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ. ಆ ಚಿಂತೆಯೇ ನಿಮ್ಮ ಪಕ್ಷ, ಸರಕಾರಕ್ಕೆ ಚಿಂತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು, ಆ ಪರಮೇಶ್ವರನ ಮಾತು ಒಂದೇ! ಸುಳ್ಳಾಗದು' ಎಂದು ಹೇಳಿದ್ದಾರೆ.

'ಬರಪೀಡಿತ ರೈತರಿಗೆ ಕೊಡಲು ಈ ನಿಮ್ಮ ಸರಕಾರಕ್ಕೆ ರೂ. 2000 ಗತಿ ಇಲ್ಲ. ಆದರೆ, ಗ್ಯಾರಂಟಿ ಸಮಾವೇಶಗಳಿಗೆ ಬೇಕಾದಷ್ಟು ಹಣವಿದೆ. ತುರ್ತು ಉದ್ದೇಶಕ್ಕೆ ಇರಿಸಿರುವ ಜಿಲ್ಲಾಧಿಕಾರಿ, ತಹಸೀಲ್ದಾರುಗಳ ಪಿಡಿ ಖಾತೆಗೆ ನಿಮ್ಮ ಸರಕಾರ ಕನ್ನ ಹಾಕಿದೆ. ಜನರ ಹಾಹಾಕಾರವೇ ನಿಮಗೆ ಭರ್ಜರಿ ಆಹಾರ!! ಹೌದಲ್ಲವೇ? ಇದೆಂಥಾ ಸಿದ್ದನಾಮಿಕ್ಸ್ Siddaramaiah ನವರೇ?' ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

'ಈ ಗ್ಯಾರಂಟಿ ಸಮಾವೇಶಗಳಿಗೆ, ಜಾಹೀರಾತು ಜಾತ್ರೆಗಳಿಗೆ ವರ್ಷದಿಂದ ಎಷ್ಟು ಸಾವಿರ ಕೋಟಿ ಸುರಿದಿದ್ದೀರಿ ಸಿದ್ದರಾಮಯ್ಯನವರೇ? ಜನರ ಮುಂದೆ ಲೆಕ್ಕ ಇಡಿ. ಬೇಕಾದರೆ 'ಗ್ಯಾರಂಟಿ ಪ್ರಚಾರ ಸಮಾವೇಶ ಖರ್ಚು ಬಾಬತ್ತಿನ ಶ್ವೇತಪತ್ರ' ಹೊರಡಿಸಿ. ನಿಮ್ಮ ಸರಕಾರದ ಅಸಲಿ ಬಣ್ಣ ಏನೆಂಬುದು ಜನರಿಗೆ ಗೊತ್ತಾಗಲಿ' ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

'ಒಂದು ವರ್ಷದಿಂದ ನಿಮ್ಮ ಇಡೀ ಸರಕಾರದ ಬದುಕು ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ. ನಿಮ್ಮ ಹಿಂದೆ ಮುಂದೆ ಸುತ್ತುವ ಪಟಾಲಂಗಳ ಏಜೆನ್ಸಿಗಳ ಮೂಲಕ 'ಜಾಹೀರಾತು ಜಾತ್ರೆ'ಯನ್ನು ಎಗ್ಗಿಲ್ಲದೆ ಮಾಡುತ್ತಿದ್ದೀರಿ. ಬರದಲ್ಲಿ ಬೆಂದು ಕಣ್ಣೀರು ಹಾಕುತ್ತಿರುವ ಜನರ ಹಣವನ್ನು ಹೀಗೆ ಪ್ರಚಾರದ ತೆವಲಿಗೆ ಸುರಿಯುತ್ತಿರುವ ನಿಮಗೆ ನಾಚಿಕೆ ಆಗುವುದಿಲವೇ?' ಎಂದು ಕುಮಾರಸ್ವಾಮಿ ಸರ್ಕಾರ, ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.

ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರ ವಿವಿಧ ಜಿಲ್ಲೆಗಳಲ್ಲಿ ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ. ಭಾನುವಾರ ಮಂಡ್ಯದಲ್ಲಿ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ಈಗಾಗಲೇ ಶಿವಮೊಗ್ಗ, ಧಾರವಾಡ, ಬೆಳಗಾವಿ ಸೇರಿ 5ಕ್ಕೂ ಹೆಚ್ಚು ಕಡೆ ಸಮಾವೇಶಗಳನ್ನು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರು ಸಮಾವೇಶಗಳಲ್ಲಿ ಭಾಗವಹಿಸುತ್ತಿದ್ದಾರೆ.

2023ರ ವಿಧಾನಸಭೆ ಚುನಾವಣೆಗೂ ಮೊದಲು ಕರ್ನಾಟಕಸ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಸರ್ಕಾರ ಈಗ ಐದೂ ಯೋಜನೆಗಳನ್ನು ಜಾರಿಗೊಳಿಸಿದ್ದು, ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಗಳನ್ನು ಮಾಡುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+