ರಾಜ್ಯದ ಕಾಂಗ್ರೆಸ್‌ ಸರಕಾರ ಹೆಚ್ಚು ದಿನ ಉಳಿಯಲ್ಲ: ಭವಿಷ್ಯ ನುಡಿದ ಜೆಡಿಎಸ್‌ ನಾಯಕ

ಮಂಡ್ಯ, ಜುಲೈ 01: ಕರ್ನಾಟಕದಲ್ಲಿ ಎಲ್ಲ ಅಗತ್ಯ ವಸ್ತುಗಳ ಬೆಲೆಗಳು ಏಕೆಯಾಗುತ್ತಿದ್ದು, ಲೋಕಸಭಾ ಚುನಾವಣೆ ಫಲಿತಾಂಶ ನೋಡಿದಾಗ ಗ್ಯಾರಂಟಿಗಳು ವರ್ಕ್ ಆಗಿಲ್ಲ. ಇದೆಲ್ಲವನ್ನೂ ಗಮನಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಹೆಚ್ಚು ದಿನ ಇರೋದಿಲ್ಲ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗ್ಯಾರಂಟಿಗಳನ್ನು ಕೊಟ್ಟೂ ಕಾಂಗ್ರೆಸ್‌ ಸರಕಾರವು ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ. ಐದು ಗ್ಯಾರಂಟಿಗಳ ನಿರ್ವಹಣೆಗಾಗಿ ರಾಜ್ಯ ಸರಕಾರ ಎಲ್ಲ ವಸ್ತುಗಳ ಬೆಲೆ ಏರಿಸುತ್ತಿದೆ. ಇದರ ವಿರುದ್ಧ ಜೆಡಿಎಸ್‌ ಹೋರಾಟ ಮಾಡುತ್ತಿದೆ. ಲೋಕಸಭೆ ಚುನಾವಣೆ ಫಲಿತಾಂಶದಿಂದ ಬೇಸರಗೊಂಡಿರುವ ಕಾಂಗ್ರೆಸ್‌ ನಾಯಕರೇ ಗ್ಯಾರಂಟಿಗಳನ್ನು ರದ್ದು ಮಾಡಬೇಕು ಎನ್ನುತ್ತಿದ್ದಾರೆ. ನಮ್ಮ ಜನ ಗ್ಯಾರಂಟಿಗಳನ್ನು ನಂಬಿಕೊಂಡು ಜೀವನ ಮಾಡುತ್ತಿಲ್ಲ. ಜನರು ಗ್ಯಾರಂಟಿಯನ್ನು ಕೇಳಿರಲಿಲ್ಲ. ಆದರೆ, ಗ್ಯಾರಂಟಿಗಳನ್ನು ಕೊಟ್ಟೂ ಕಾಂಗ್ರೆಸ್‌ ಸರಕಾರವು ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ

congress Government In Karnataka Will Not Last Long Predicts Jds Nikhil Kumaraswamy

ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಆಗಿ ಮುಂದುರಿಸುತ್ತದೋ ಅಥವಾ ಬೇರೆಯವರನ್ನು ಮಾಡುವುದೋ ಗೊತ್ತಿಲ್ಲ. ಇದೀಗ ಐದು ಮಂದಿ ಉಪಮುಖ್ಯಮಂತ್ರಿ ವಿಚಾರ ಕಾಂಗ್ರೆಸ್‌ ಪಕ್ಷದೊಳಗೆ ಕೋಲಾಹಲ ಸೃಷ್ಟಿಸಿದೆ. ಐದು ಜನರನ್ನು ಡಿಸಿಎಂ ಮಾಡುತ್ತಾರೋ ನೋಡೋಣ. ಆದರೆ, ಈ ಸರಕಾರ ಜಾಸ್ತಿ ದಿನ ಇರೋದಿಲ್ಲ ಅನಿಸುತ್ತಿದೆ. ಕಾಲವೇ ಎಲ್ಲದಕ್ಕೂ ಉತ್ತರ ಕೊಡಲಿದೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಮಂಡ್ಯ ಜಿಲ್ಲೆಯ ಜನರ ಆಶೀರ್ವಾದದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾವು ಎಂದೂ ಧಕ್ಕೆ ತರದಂತೆ ನೋಡಿಕೊಳ್ಳುತ್ತೇವೆ. ಮಂಡ್ಯ ಜಿಲ್ಲೆಯ ಜನತೆ ನಮ್ಮ ತಂದೆಯವರಾದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಯ್ಕೆಗೊಳಿಸಿ ಕೇಂದ್ರ ಸಚಿವರನ್ನಾಗಿ ಮಾಡಿದ್ದೀರಿ. ರಾಜ್ಯದ ಜವಾಬ್ದಾರಿಯ ಜೊತೆಗೆ ದೇಶದ ಅಭಿವೃದ್ದಿಗೆ ಕುಮಾರಣ್ಣ ಅವರು ಶ್ರಮಿಸಲ್ಲಿದ್ದಾರೆ.

ಮಂಡ್ಯ ಜಿಲ್ಲೆಯ ಜನರು ಆಶೀರ್ವಾದ ಮಾಡಿದ್ದರ ಪರಿಣಾಮವಾಗಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಕೇಂದ್ರ ಸರ್ಕಾರ ದೊಡ್ಡ ಜವಾಬ್ದಾರಿಯನ್ನು ನೀಡಿದ್ದು, ಜಿಲ್ಲೆಗೆ ಅವರು ಬರಲು ಆಗದ ಸಮಯದಲ್ಲಿ ಆ ಜವಾಬ್ದಾರಿಯನ್ನು ನಾನು ನಿರ್ವಹಿಸುತ್ತೇನೆ. ಕೇಂದ್ರ ಸರ್ಕಾರ ಕುಮಾರಸ್ವಾಮಿ ಅವರಿಗೆ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆಯನ್ನು ನೀಡಿರುವುದರಿಂದ ಬೆಂಗಳೂರಿಗೆ ವಾರಕ್ಕೆರಡು ದಿನ ಮಾತ್ರ ಬರುತ್ತಾರೆ. ಅವರು ಈ ದಿನ ಮಂತ್ರಿಯಾಗಲು ಮಂಡ್ಯ ಜಿಲ್ಲೆಯ ಜನರೇ ಕಾರಣ. ಹಾಗಾಗಿ ಜನರ ಕಷ್ಟಸುಖ ಕೇಳಲು ನನ್ನ ಹೆಗಲಿಗೆ ವಹಿಸಿದ್ದಾರೆ. ಆ ಜವಾಬ್ದಾರಿಯನ್ನು ನಾನೇ ನಿರ್ವಹಿಸುತ್ತೇನೆ. ಜಿಲ್ಲೆಯ ಯಾವುದೇ ಗ್ರಾಮದವರಾದರೂ ಸರಿ ನಮ್ಮ ಮುಖಂಡರ ಮೂಲಕ ನನಗೆ ವಿಚಾರ ತಿಳಿಸಿದರೆ ತಕ್ಷಣದಲ್ಲೇ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಮದ್ದೂರು ತಾಲ್ಲೂಕಿನ ಜನತೆಯೇ ಹೆಚ್ಚು ಮತಗಳನ್ನು ನೀಡಿದ್ದು, ಹಾಗಾಗಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರೊಂದಿಗೆ ನಾನು ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಲು ಅವಕಾಶ ಸಿಕ್ಕಿದೆ. ಎಲ್ಲಾ ತಾಲ್ಲೂಕುಗಳಲ್ಲಿಯೂ ಲೀಡ್ ಕೊಟ್ಟಿದ್ದೀರಿ. ನಿಮ್ಮ ಋಣ ಮರೆಯಲಾರದಂತಹದು. ಯಾವುದೇ ಸಮಾರಂಭವಾದರೂ ಕುಮಾರಸ್ವಾಮಿ ಅವರನ್ನು ಕಾಯದೆ ನನಗೆ ತಿಳಿಸಿದಲ್ಲಿ ನಾನು ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತೇನೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+