ಅಕ್ಕಿಯಲ್ಲಿ ದೊಡ್ಡ ಗೋಲ್‌ಮಾಲ್ ನಡೆಯುತ್ತಿದೆ: ಜನರಿಗೆ ಸರ್ಕಾರ ದೋಖಾ: ಬೊಮ್ಮಾಯಿ

ಬೆಂಗಳೂರು, ಜಲೈ 04: ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದೆ. 'ಯುವನಿಧಿ' ಯೋಜನೆ ಏನಾಯಿತು ಗೊತ್ತಿಲ್ಲ. ಅಕ್ಕಿಯಲ್ಲಿ ದೊಡ್ಡ ಗೋಲ್‌ ಮಾಲ್ ನಡೆಯುತ್ತಿದೆ. ಎಷ್ಟು ಅಕ್ಕಿ ಕೊಡುತ್ತಾರೆ ಎಂಬುದು ಇನ್ನೂ ತಿಳಿದಿಲ್ಲ. ಜನರಿಗೆ ದೋಖಾ ಮಾಡಿದ ಈ ಸರ್ಕಾರದ ಮುಖವಾಡ ಮತ್ತು ಕಾಂಗ್ರೆಸ್ಸಿಗರ ಬಣ್ಣ ಬಯಲಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ‌ನಡೆಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಹೊಸ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ಜನ ವಿರೋಧಿ ನಡೆತ ತಾಳಿದೆ. ಜನರಿಗೆ ಯಾವ ಗ್ಯಾರೆಂಟಿ ಹೇಳಿದ್ದರೊ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

Congress Is Doing A Big Golmaal In Rice Distribution

'ಯುವನಿಧಿ' ಯೋಜನೆ ಏನಿಯಿತೋ ಎಂಬುದು ಗೊತ್ತಿಲ್ಲ. ಇನ್ನೂ 'ಗೃಹ ಲಕ್ಷ್ಮಿ' ಯೋಜನೆ ಜಾರಿ ಎಂದ ಕಾಂಗ್ರೆಸ್ ನಾಯಕರು ಮನೆಯಲ್ಲಿ ಯಾರು ಯಜಮಾನಿ ಎಂದು ಕೇಳಿ ಮೆನೆ-ಮನೆಗಳಲ್ಲಿ ಗಲಾಟೆ ಶುರುವಾಗುವಂತೆ ಮಾಡಿದ್ದಾರೆ. ಗೃಹ ಜ್ಯೋತಿ ಯೋಜನೆ ಯೋಜನೆ ಘೋಷಿಸಿ ಮೂರು ಪಟ್ಟು ಬಿಲ್ ಏರಿಸಿ ಜನರಿಗೆ ಆರ್ಥಿಕ ಭಾರ ಹೊರೆಸಿದರು.

ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಿ ಘೋಷಿಸಿದ ಬಲಿಕ ಬಸ್ ಗಳಲ್ಲಿ ಗೊಂದಲ ಹೆಚ್ಚಾಗಿದೆ. ಮಕ್ಕಳು-ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ತೆರಳಲು ಸಮರ್ಪಕವಾಗಿ ಬಸ್ ಲಭ್ಯವಾಗುತ್ತಿಲ್ಲ. ಕಿಟಕಿಯಲ್ಲಿ ಬಸ್ ಹತ್ತುವಂತಹ ಸ್ಥಿತಿ ನಿರ್ಮಾಣವಾಗಿದೆ.

ಗ್ಯಾರೆಂಟಿ ಗೊಂದಲ ಬಗ್ಗೆ ಚರ್ಚಿಸಲು ಅವಕಾಶ ಕೊಡಿ

ರಾಜ್ಯದಲ್ಲಿ ಉಂಟಾಗಿರುವ ಗ್ಯಾರೆಂಟಿ ಯೋಜನೆಗಳ ಗೊಂದಲಗಳ ಕುರಿತು ನಾವು ಚರ್ಚಿಸಲು ಸದನದಲ್ಲಿ ಅವಕಾಶ ನೀಡುವಂತೆ ಕೇಳಿದ್ದೇವೆ. ಅದಕ್ಕೆ ಅವಕಾಶ ಕೊಡದೇ ಕಾಂಗ್ರೆಸ್ ಸರ್ಕಾರ ಹಠಮಾರಿತನ, ಮೊಂಡತನ ಮಾಡುತ್ತಿದೆ. ಸಭಾಧ್ಯಕ್ಷರ ಮೇಲೆ ಒತ್ತಡ ತಂದು ಅವಕಾಶ ಕೊಡದಂತೆ ತಡೆಯುತ್ತಿದ್ದಾರೆ ಎಂದು ಅವರು ದೂರಿದರು.

Congress Is Doing A Big Golmaal In Rice Distribution

ಮುಂಗಾರು ವಿಳಂಬದಿಂದಾಗಿ ರಾಜ್ಯದಲ್ಲಿ ಬರ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಇದೆಲ್ಲದರ ಬಗ್ಗೆ ಚರ್ಚೆ ಮಾಡಬೇಕಿದೆ. ಸರ್ಕಾರ ಮೊದಲ ದಿನವೇ ವಿರೋಧ ಪಕ್ಷವನ್ನು ಬಾವಿಗೆ ತಳ್ಳುವ ಕೆಲಸ ಮಾಡಿದೆ ಎಂದು ಹೇಳಿದರು.

ದೋಖಾ ಮಾಡಿದ ಕಾಂಗ್ರೆಸ್ ಸರ್ಕಾರ

ಬೇಡಿಕೆ ಈಡೇರಿಸದೇ ರಾಜ್ಯ ಸರ್ಕಾರ ಜನರಿಗೆ ದೋಖಾ ಮಾಡಿದೆ. ನಮ್ಮ ಬೇಡಿಕೆ ಇಷ್ಟೆ ನೀವು ಕೊಟ್ಟ ಭರವಸೆ ಈಡೇರಿಸಿ ಎಂದು ಆಗ್ರಹಿಸಿದ್ದೇವೆ. ಈ ಸರ್ಕಾರ ಮುಂದಿನ ಕಲಾಪದ ಬಗ್ಗೆ ಚರ್ಚೆ ಮಾಡುವ ಕುರಿತು ಕಲಾಪ ಸಲಹಾ ಸಮಿತಿ ಸಭೆ ಕರೆದಿದೆ.

ಈಗಿನ ಗೊಂದಲ ಬಗೆ ಹರಿಸದೇ ಮುಂದಿನ ಕಲಾಪದ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ. ಹೀಗಾಗಿ ನಾವು ಸದನ ಬಹಿಷ್ಕಾರ ಮಾಡಿದ್ದೇವೆ. ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುವ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನಪರ ಕಾನೂನುಗಳನ್ನು ಜಾರಿಗೆ ತಂದಿದ್ದೇವೆ ಅವು ಕಾಂಗ್ರೆಸ್ ನವರಿಗೆ ಬೇಡವಾಗಿರಬಹುದು. ಜನ ಬಯಸಿದ್ದನ್ನು ನಾವು ಮಾಡಿದ್ದೇವು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+