Congress Guarantee: ರಾಜ್ಯದ ಜನತೆಗೆ ಗುಡ್ ನ್ಯೂಸ್: ಬಡವರಿಗಾಗಿ ಮತ್ತೆರಡು ಗ್ಯಾರಂಟಿ ಜಾರಿ

ಬೆಂಗಳೂರು,ಸೆಪ್ಟೆಂಬರ್‌ 03: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿಯಾಗಿ ಕಾಂಗ್ರೆಸ್‌ ಗೆಲುವು ಸಾಧಿಸಲು ಪಂಚ ಗ್ಯಾರಂಟಿ ಯೋಜನೆಗಳೆ ಪ್ರಮುಖ ಕಾರಣವಾಗಿದ್ದು, ಇದೀದ ಕಾಂಗ್ರೆಸ್‌ ರಾಜ್ಯದ ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯನ್ನ ಜಾರಿಗೊಳಿಸಿದೆ. ಈ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡ ವರ್ಗಕ್ಕೆ ಸಾಕಷ್ಟು ಸಹಾಯಕವಾಗಿದ್ದು, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನತೆ ಕಾಂಗ್ರೆಸ್‌ ಕೈ ಹಿಡಿದಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕಮಾರ್‌ ಹಲವು ಲೆಕ್ಕಾಚಾರವನ್ನ ಹಾಕಿಕೊಂಡಿದ್ದು, ಮತ್ತೆರಡು ಗ್ಯಾರಂಟಿ ಜಾರಿಗೆ ಪ್ಲಾನ್‌ ಹಾಕಿಕೊಂಡಿದ್ದಾರೆ.
ಇನ್ನೂ ಪಂಚ ಗ್ಯಾರಂಟಿಗಳ ಜೊತೆಗೆ ಮುಂದಿನ ದಿನಗಳಲ್ಲಿ ಬಡವರಿಗಾಗಿ ಇನ್ನಷ್ಟು ಯೋಜನೆ ತರಲಾಗುವುದು ಗ್ಯಾರಂಟಿ ಜಾರಿಗೆ ತರಲಾಗುವುದು. ಸಾರ್ವಜನಿಕರ ಹಣವನ್ನು ಬಡವರು, ದೀನ ದಲಿತರು ಎಲ್ಲಾ ವರ್ಗದವರಿಗೂ ಮತ್ತಷ್ಟು ತಲುಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದ್ದು, ಈ ಬಗ್ಗೆ ಮಹತ್ವದ ಮಾಹಿತಿಯನ್ನ ನೀಡಿದ್ದಾರೆ.

Congress Government Is Guaranteeing Health And Education Says DK Shivakumar

ಐದು ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ಆರೋಗ್ಯ ಮತ್ತು ಶಿಕ್ಷಣದ ಗ್ಯಾರಂಟಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಗ್ಯಾರಂಟಿಗಳನ್ನು ನೀಡಿದ್ದು ಚುನಾವಣೆಗಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕರ್ನಾಟಕವನ್ನು ಹಸಿವು, ಬಡತನ ಮತ್ತು ಅಸಮಾನತೆ ಮುಕ್ತ ರಾಜ್ಯ ಮಾಡಬೇಕೆಂಬುದು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗುರಿ ಎಂದರು.

ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸಾಕಷ್ಟು ಅನುದಾನ ನೀಡುತ್ತಿದ್ದಾರೆ. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ ಪಾಟೀಲರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಭಾವನೆಗೆ ಕೆಲಸ ಮಾಡುತ್ತಿಲ್ಲ. ಬದುಕಿಗಾಗಿ ಮಾಡುತ್ತಿದೆ. ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ಸಾವಿರ ಹಣ ಉಳಿಸುತ್ತಿದ್ದೇವೆ ಎಂದರು.

ನಮ್ಮ ರಾಜ್ಯದಲ್ಲಿ 70 ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳಿವೆ. ಸುಮಾರು 1 ಸಾವಿರಕ್ಕೂ ಹೆಚ್ಚು ಪ್ಯಾರಾ ಮೆಡಿಕಲ್ ಕಾಲೇಜುಗಳಿವೆ. ದೇಶದ ಯಾವ ರಾಜ್ಯಗಳಲ್ಲೂ ಇಲ್ಲದ ವೈದ್ಯಕೀಯ ಶಿಕ್ಷಣ ಸೌಲಭ್ಯ ನಮ್ಮಲ್ಲಿದೆ. ವಿದೇಶಗಳಿಂದ ಜನರು ಬಂದು ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ನಾಟಕ ಹೆಲ್ತ್ ಟೂರಿಸಂಗೆ ಹೆಸರಾಗುತ್ತಿದೆ ಎಂದರು.

ಈ ಆಸ್ಪತ್ರೆಗೆ ಇನ್ಪೋಸಿಸ್ ಅವರು 10 ಕೋಟಿ ಸಿಎಸ್ ಆರ್ ಅನುದಾನ ನೀಡಿದ್ದಾರೆ. ನನ್ನ ಕನಕಪುರ ಕ್ಷೇತ್ರದಲ್ಲಿಯೂ ತಾಯಿ, ಮಗು ಆಸ್ಪತ್ರೆಯನ್ನು ಕಟ್ಟಿಸಿಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಮಾತ್ರವಲ್ಲ ಶಿಕ್ಷಣ ಕ್ಷೇತ್ರದಲ್ಲಿ ಸಿಎಸ್ ಆರ್ ಅನುದಾನ ಬಳಸಿಕೊಂಡು ಈ ವರ್ಷ 500 ಶಾಲೆಗಳನ್ನು ಪಂಚಾಯಿತಿ ಮಟ್ಟದಲ್ಲಿ ಕಟ್ಟಲಾಗುವುದು. ಒಟ್ಟು 2 ಸಾವಿರ ಶಾಲೆಗಳ ನಿರ್ಮಾಣ ನಮ್ಮ ಸರ್ಕಾರ ಗುರಿ ಎಂದು ತಿಳಿಸಿದರು.

ನಮ್ಮ ಯೋಜನೆಗಳ ಫಲದಿಂದ ರಾಜ್ಯದ ಜನರು ನಮ್ಮ ಕೈ ಬಿಡುವುದಿಲ್ಲ ಎನ್ನುವ ನಂಬಿಕೆ ಅಚಲವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮಹದೇವಪುರದ ಜನರು ಕಡಿಮೆ ಮತ ನೀಡಿರಬಹುದು. ಆದರೆ ಶಿವಾಜಿನಗರದ ಜನತೆ ಅತಿ ಹೆಚ್ಚು ಮತ ನೀಡಿದ್ದಾರೆ. ನಿಮ್ಮ ಋಣವನ್ನು ತೀರಿಸಲಾಗುವುದು. ದೇಶದ ಮಹಾನ್ ಋಷಿ ಚರಕ ಮಹರ್ಷಿಯ ಹೆಸರನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಇಡಲಾಗಿದೆ. ಇತ್ತೀಚೆಗೆ ದಿನೇಶ್ ಗುಂಡೂರಾವ್ ಅವರ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ, ಮಗು ಆಸ್ಪತ್ರಗೆ ಗುದ್ದಲಿ ಪೂಜೆ ಮಾಡಲಾಯಿತು. ಜನರ ಆರೋಗ್ಯ ರಕ್ಷಣೆಗೆ ಸಾಕಷ್ಟು ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.

ಶಿವಾಜಿನಗರದ ಜನತೆ ಸಜ್ಜನ, ವಿದ್ಯಾವಂತ, ದೂರದೃಷ್ಟಿ ಹೊಂದಿರುವ ಯುವ ನಾಯಕನಾದ ರಿಜ್ವಾನ್ ಆರ್ಷದ್ ಅವರನ್ನು ಆಯ್ಕೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪ್ರಮುಖ ವಿಧಾನಸಭಾ ಕ್ಷೇತ್ರದಿಂದ ಇವರನ್ನು ಜನರು ಆಶೀರ್ವಾದ ಮಾಡಿ ಕಳುಹಿಸಿದ್ದಾರೆ. ಬೆಂಗಳೂರಿಗಾಗಿ ಯಾವುದೇ ಕಾರ್ಯಕ್ರಮ ಮಾಡಿದರೂ ಆ ಸಮಿತಿಗೆ ರಿಜ್ವಾನ್ ಅವರನ್ನು ಸೇರಿಸಿಕೊಂಡು ಮಾಡಲೇಬೇಕು ಎಂದರು.

ಶಿವಾಜಿನಗರ ಕ್ಷೇತ್ರ ರಿಜ್ವಾನ್ ಅವರ ನೇತೃತ್ವದಲ್ಲಿ ಮಿಕ್ಕ ಯಾವ ಕ್ಷೇತ್ರಗಳಿಗೂ ಕಡಿಮೆ ಇಲ್ಲದಂತೆ ಅಭಿವೃದ್ದಿ ಹೊಂದುತ್ತಿದೆ. ನೀವುಗಳು ನಮ್ಮ ಕ್ಷೇತ್ರ ಹಿಂದುಳಿದಿದೆ ಎಂದು ಕೊರಗುವುದನ್ನು ರಿಜ್ವಾನ್ ತಪ್ಪಿಸಿದ್ದಾರೆ. ಗ್ರೇಟರ್ ಬೆಂಗಳೂರು ವಿಧೇಯಕ ಪರಿಶೀಲನೆ ಮತ್ತು ವರದಿಗಾಗಿ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ರಿಝ್ವಾನ್ ಆರ್ಶದ್ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+