ಬಿತ್ತನೆ ಬೀಜದ ದರ ಶೇ.60ರಷ್ಟು ಹೆಚ್ಚಳ; 'ಕೃಷಿ ಸಚಿವರೇ.. ಎಲ್ಲಿದ್ದೀರಪ್ಪ?'
ಬೆಂಗಳೂರು, ಮೇ 28: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಉತ್ತಮ ಮಳೆಯಾಗುತ್ತಿದೆ. ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಆದರೆ ಬಿತ್ತನೆ ಬೀಜಗಳ ದರ ಮಾತ್ರ ಗಗನಕ್ಕೇರಿದ್ದು ಶೇ. 60 ರಷ್ಟು ಬೆಲೆ ಹೆಚ್ಚಳವಾಗಿದೆ.
ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ತಿಂಗಳ ಮುಂಚಿತವಾಗಿಯೇ ಮಳೆಯ ಮೂನ್ಸೂಚನೆ ದೊರೆತಿದ್ದು ವಿವಿಧ ಕಡೆ ರೈತರು ಮುಂಗಾರು ಬಿತ್ತನೆಗೆ ಸಜ್ಜಾಗುತ್ತಿದ್ದಾರೆ. ಕಳೆದ ವರ್ಷ ಮಳೆ ಕೊರತೆಯಿಂದ ಬೀಜೋತ್ಪನ್ನ ಪ್ರಮಾಣ ತೀವ್ರ ಕಡಿಮೆಯಾಗಿತ್ತು. ಇದರ ಪರಿಣಾಮ ಈ ವರ್ಷ ಬೀಜಗಳ ಬೆಲೆ ಮಾತ್ರ ರೈತರಿಗೆ ಕೈಗೆಟಕುವ ದರದಲ್ಲಿ ದೊರೆಯುವುದು ಕಷ್ಟಕರವಾಗಿದೆ. ಬಿತ್ತನೆ ಬೀಜದ ದರ ಶೇ 60 ರಷ್ಟು ಹೆಚ್ಚಳದ ಕುರಿತು ಜೆಡಿಎಸ್ ರಾಜ್ಯ ಘಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಪಂಚ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡಿದೆ ಎಂದು ಬೀಗುವ ಕಾಂಗ್ರೆಸ್ ಸರಕಾರ ಮಾಡಿರುವ ಘನಕಾರ್ಯ ಇದು. ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ ಮಾಡುತ್ತಿರುವ ಘನಕಾರ್ಯವಿದು! ಕೊಟ್ಟ ಹಾಗೆ ಕೊಟ್ಟು ಜನರಿಗೆ ಗೊತ್ತೇ ಆಗದಂತೆ ಜೇಬಿಗೆ ಕೈ ಹಾಕಿ ಪಿಕ್ ಪಾಕೆಟ್ ಮಾಡುತ್ತಿರುವ ಕಿಡಿಗೇಡಿ ಕೆಲಸ ಇದು ಎಂದು ಕಿಡಿಕಾರಿದೆ.
•ಬಿತ್ತನೆ ಬೀಜದ ದರ ಶೇ.60ರಷ್ಟು ಹೆಚ್ಚಳ•
— Janata Dal Secular (@JanataDal_S) May 28, 2024
ಪಂಚ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡಿದೆ ಎಂದು ಬೀಗುವ @INCKarnataka ಸರಕಾರ ಮಾಡಿರುವ ಘನಕಾರ್ಯ ಇದು.
ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ ಮಾಡುತ್ತಿರುವ ಘನಕಾರ್ಯವಿದು! ಕೊಟ್ಟ ಹಾಗೆ ಕೊಟ್ಟು ಜನರಿಗೆ ಗೊತ್ತೇ ಆಗದಂತೆ ಜೇಬಿಗೆ ಕೈ ಹಾಕಿ ಪಿಕ್ ಪಾಕೆಟ್… pic.twitter.com/bYOpL6rrCA
ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಲಭ್ಯವಿದ್ದ ಬಿತ್ತನೆ ಬೀಜದ ಬೆಲೆ ಏರಿಕೆಯಾದ ಪರಿಣಾಮ, ಮುಕ್ತ ಮಾರುಕಟ್ಟೆಯಲ್ಲಿಯೂ ದರ ದುಪ್ಪಟ್ಟಾಗಿದೆ. ತಕ್ಷಣವೇ ಸರಕಾರ ಬಿತ್ತನೆ ಬೀಜದ ದರ ಇಳಿಕೆಗೆ ಕ್ರಮ ಕೈಗೊಳ್ಳಬೇಕು ಮತ್ತು ಮುಕ್ತ ಮಾರುಕಟ್ಟೆಯಲ್ಲಿ ದರ ಏರಿಕೆಗೆ ನಿಯಂತ್ರಣ ವಿಧಿಸಬೇಕು. ಕೃಷಿ ಸಚಿವರೇ.. ಎಲ್ಲಿದ್ದೀರಪ್ಪ? ಎಂದು ಜೆಡಿಎಸ್ ರಾಜ್ಯ ಘಟಕ ಪ್ರಶ್ನಿಸಿದೆ.












Click it and Unblock the Notifications