ಕಾಂಗ್ರೆಸ್ ಸರ್ಕಾರ ಪತನವಾಗಲಿದೆ, ಸಂತೋಷ್‌ ಹೇಳಿಕೆಯನ್ನು ಲಘುವಾಗಿ ಪರಿಗಣಿಸಬೇಡಿ: ಕೆಎಸ್‌ ಈಶ್ವರಪ್ಪ ಸ್ಪೋಟಕ ಹೇಳಿಕೆ

ಶಿವಮೊಗ್ಗ, ಸೆಪ್ಟೆಂಬರ್‌ 02: 2024ರ ಲೋಕಸಭೆ ಚುನಾವಣೆಗೆ ಮುನ್ನ ಅಥವಾ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್‌ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್‌ ಹೇಳಿದ್ದಾರೆ. ಸಂತೋಷ್ ಅವರ ಹೇಳಿಕೆಯನ್ನು ಲಘುವಾಗಿ ಪರಿಗಣಿಸಬಾರದು ಎಂದು ಈಶ್ವರಪ್ಪ ಹೇಳಿದ್ದಾರೆ.

ks-eshwarappa

ನಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬೇಜವಾಬ್ದಾರಿ ಹೇಳಿಕೆ ನೀಡಲು ಸಾಧ್ಯವಿಲ್ಲ. ಸಂತೋಷ್ ಹೇಳಿಕೆಗೆ ಪುಷ್ಟಿ ನೀಡುವ ಹಲವು ಬೆಳವಣಿಗೆಗಳು ಕರ್ನಾಟಕದಲ್ಲಿ ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಡುವೆ ಸಮನ್ವಯತೆ ಇಲ್ಲ. ಅನೇಕ ಕಾಂಗ್ರೆಸ್ ಶಾಸಕರು ತಮ್ಮ ಸರ್ಕಾರದ ಬಗ್ಗೆ ಅತೃಪ್ತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಶಾಸಕರಿಗೆ ತಮ್ಮ ಸರ್ಕಾರದ ಮೇಲೆ ವಿಶ್ವಾಸವಿಲ್ಲ ಎಂಬುದನ್ನು ಈ ಬೆಳವಣಿಗೆಗಳು ತೋರಿಸುತ್ತಿವೆ. ಸ್ಪಷ್ಟವಾಗಿ, ಅವರು ತಮ್ಮ ಪಕ್ಷವು ಆಡಳಿತಕ್ಕೆ ಅನರ್ಹ ಎಂಬುದಾಗಿ ಹೇಳುತ್ತಿದ್ದಾರೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಬಿಜೆಪಿಗೆ ತಾಕತ್ತು ಇರುವುದಕ್ಕೆ 2019ರಲ್ಲಿ ಮೈತ್ರಿ ಸರ್ಕಾರವನ್ನು ಬೀಳಿಸಿ ತೋರಿಸಿದ್ದು. ಈಗ ಮತ್ತೆ ಕಾದು ನೋಡಿ. ನಾವು ಮತ್ತೆ ಆಪರೇಷನ್‌ ಕಮಲ ಮಾಡಿಯೇ ತೀರುತ್ತೇವೆ ಎಂದು ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಬಂದು ಮೂರು ತಿಂಗಳಾಗಿವೆ. ಈಗಾಗಲೇ ಸರ್ಕಾರದ ವಿರುದ್ಧ ಶಾಸಕರು ಅಸಮಾಧಾನ ಹೊಂದಿದ್ದಾರೆ. ಲೋಕಸಭೆ ಚುನಾವಣೆಯವರೆಗೂ ಪ್ರಿಯಾಂಕ್‌ ಖರ್ಗೆ ಕಾಯಲಿ. ಬಿಜೆಪಿಯಿಂದ ಆಪರೇಷನ್‌ ಕಮಲ ಆಗಿಯೇ ತೀರುತ್ತದೆ ಎಂದು ತಿಳಿಸಿದ್ದಾರೆ.

40 ರಿಂದ 45 ಕಾಂಗ್ರೆಸ್‌ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಬಿ ಎಲ್‌ ಸಂತೋಷ್‌ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌ ನಾಯಕರು ಸಂತೋಷ್‌ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಎಲ್ಲಾ ಕಾಂಗ್ರೆಸ್‌ ಶಾಸಕರನ್ನು ಸಂಪರ್ಕಿಸಿದರೆ ನಮಗೆ ಸಂತೋಷವಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಸಂತೋಷ್‌ ಅವರಿಗೆ ಸವಾಲು ಹಾಕಿರುವ ಪ್ರಿಯಾಂಕ್‌ ಖರ್ಗೆ, 'ಬಿಎಲ್‌ ಸಂತೋಷ್‌ ಅವರಿಗೆ ಒಂದು ಸವಾಲು. ಒಂದು ದಿನವಲ್ಲ, ಒಂದು ತಿಂಗಳು ಸಮಯ ನೀಡುತ್ತೇವೆ. ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ' ಎಂಬುದಾಗಿ ಹೇಳಿದ್ದಾರೆ.

'ಇದೆಲ್ಲವಕ್ಕೂ ಮಿಗಿಲಾಗಿ ಮತ್ತೊಂದು ಸವಾಲು, ಒಂದು ವಾರದ ಸಮಯದಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಹಾಗೂ ಮೇಲ್ಮನೆಯ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ತೋರಿಸಲಿ. ಈ ಸವಾಲನ್ನು ಸ್ವೀಕರಿಸುವ ದಮ್ಮು, ತಾಕತ್ತು ಇದೆಯೇ?' ಎಂದು ಪ್ರಿಯಾಂಕ್‌ ಪ್ರಶ್ನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+