ಕೈ ಪಾಳಯದಲ್ಲಿ ಮುಸುಕಿನ ಗುದ್ದಾಟ; ಕಾಂಗ್ರೆಸ್‌ ಸರ್ಕಾರ ಪತನ ನಿಶ್ಚಿತ: ಭವಿಷ್ಯ ನುಡಿದ ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ, ಮಾರ್ಚ್‌ 06: ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಸ್ಥಾನಕ್ಕೆ ಮುಸುಕಿನ ಗುದ್ದಾಟ ಜೋರಾಗಿದೆ. ಇದು ಹೀಗೇ ಮುಂದುವರೆದರೆ ಕಾಂಗ್ರೆಸ್ ಸರ್ಕಾರದ ಅಧಃಪತನ ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ಹೇಳೀದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ನೇರವಾಗಿ ಏನನ್ನೂ ಮಾತನಾಡುತ್ತಿಲ್ಲ. ಅವರ ಬೆಂಬಲಿತ ಸಚಿವರು, ಶಾಸಕರಿಂದ ಹೇಳಿಕೆ ಕೊಡಿಸುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ಪತನ ಆಗುವುದು ನಿಶ್ಚಿತ ಎಂದು ಜಗದೀಶ್‌ ಶೆಟ್ಟರ್‌ ಅವರು ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದರಾದ ಜಗದೀಶ್‌ ಶೆಟ್ಟರ್‌ ಅವರು ಮಾತನಾಡಿ, ಸಿಎಂ ಸ್ಥಾನಕ್ಕೆ ಮುಸುಕಿನ ಗುದ್ದಾಟ ಜೋರಾಗಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇದಕ್ಕೆ ಕಡಿವಾಣ ಹಾಕಬೇಕು ಎಂದ ಅವರು, ಕೆಪಿಎಸ್‌ಸಿ ನೇಮಕಾತಿಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ. ಭ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಅದನದಲ್ಲಿ ಈಬಗ್ಗೆ ಚರ್ಚೆಗಳೂ ನಡೆಯುತ್ತಿವೆ. ಇದು ಕೇವಲ ಚರ್ಚೆಗೆ ಸೀಮಿತವಾಗದೇ ಉನ್ನತ ಮಟ್ಟದ ತನಿಖೆಯಾಗಬೇಕು. ಯೂಪಿಎಸ್‌ಸಿ ಮಾದರಿಯಲ್ಲೇ ನೇಮಕಾತಿ, ವರ್ಗಾವಣೆ ಆಗುವಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರಯಾಗ್ ರಾಜ್‌ಗೆ ಭೇಟಿ ನೀಡಿ ಕುಂಭ ಮೇಳದಲ್ಲಿ ಭಾಗಿಯಾದ ಶಾಸಕ, ಸಚಿವರಿಗೆ ಹಾಗೂ ಗಣ್ಯರಿಗೆ ಯುಪಿ ಸರ್ಕಾರ ಅಭಿನಂದನಾ ಪತ್ರ ಕಳುಹಿಸಿದೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಶೆಟ್ಟರ್‌ ಅವತು ತಿಳಿಸಿದರು.

Congress Government s Fall Is Certain Said MP Jagadish Shettar

ಪ್ರಿಯಾಂಕ್ ಖರ್ಗೆ ಬುರುಡೆ ಬಿಡುತ್ತಿದ್ದಾರೆ: ವಿಜಯೇಂದ್ರ

ಪ್ರಿಯಾಂಕ್ ಖರ್ಗೆಯವರು ಬುರುಡೆ ಬಿಡುತ್ತಿದ್ದಾರೆ. ಬೇರೆ ರಾಜ್ಯಗಳಲ್ಲಿ ಎಸ್‍ಸಿ, ಎಸ್‍ಟಿ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿದ್ದರೆ ವಿಪಕ್ಷವಾದ ಇವರೇನು ಕತ್ತೆ ಕಾಯುತ್ತಿದ್ದಾರಾ? ಪ್ರಶ್ನೆ ಮಾಡಲಿ ಎಂದು ಈ ಸಂಬಂಧ ಪ್ರಶ್ನೆಗೆ ಉತ್ತರ ನೀಡಿದರು. ಇಲ್ಲಿ ತಮ್ಮ ಹುಳುಕು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಬುರುಡೆ ಬಿಡುತ್ತಾರೆಯೇ ಹೊರತು ಅದರಲ್ಲಿ ಸತ್ಯ ಇದೆ ಎಂದು ನನಗೆ ಅನಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಸುಮಾರು 25 ಸಾವಿರ ಕೋಟಿ ಹಣವನ್ನು ಇಲ್ಲಿನವರೆಗೆ ದುರುಪಯೋಗ ಮಾಡಿಕೊಂಡಿದ್ದಾರೆ. ಈ ಅನ್ಯಾಯದ ವಿರುದ್ಧ ಬಿಜೆಪಿ ಕಳೆದ ಕೆಲದಿನಗಳಿಂದ 14 ತಂಡ ರಚಿಸಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದೆ. ಇವತ್ತು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದೇವೆ. ಈ ಬಜೆಟ್‍ನಲ್ಲಿ ಇಂಥ ದುರುಪಯೋಗ ಮಾಡಬಾರದು ಎಂದು ಆಗ್ರಹಿಸಿದರು. ಕೇಂದ್ರದ ಗೃಹ ಸಚಿವ ಅಮಿತ್ ಶಾ ಜೀ ಅವರು ನಾಡಿದ್ದು 7ರಂದು ಬೆಂಗಳೂರಿನಲ್ಲಿ ಆಸ್ಪತ್ರೆ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಬಡ ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಿಂದೆ ಬಿಜೆಪಿ ಸರಕಾರ ಇದ್ದಾಗ ಆರಂಭಿಸಿದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಿ ಹಾಕುವ ಕೆಲಸವನ್ನು ಕಾಂಗ್ರೆಸ್ ಸರಕಾರ ಈಗಾಗಲೇ ಮಾಡಿದೆ ಎಂದು ಟೀಕಿಸಿದರು. 300- 400 ಕೋಟಿ ಅನುದಾನ ಕೊಡಲು ಸಾಧ್ಯವಿಲ್ಲ ಎಂಬ ಒಂದೇ ಕಾರಣಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚಿ ಹಾಕುವ ಕೆಲಸ ಮಾಡಿದ್ದಾರೆ. ಬಾಗಲಕೋಟೆಯಲ್ಲಿರುವ ತೋಟಗಾರಿಕಾ ವಿವಿ ಚೆನ್ನಾಗಿ ನಡೆಯುತ್ತಿದೆ. ಅನೇಕ ಶಿಕ್ಷಣ ಸಂಸ್ಥೆಗಳು ಅದರ ಅಡಿಯಲ್ಲಿವೆ. ಅದನ್ನು ಮಂಡ್ಯ ಜಿಲ್ಲೆಗೆ ತರುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳು ಮತ್ತು ಚಲುವರಾಯಸ್ವಾಮಿ ಅವರು ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುವುದನ್ನು ಬಿಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಬಿಜೆಪಿ ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು.

ಲಜ್ಜೆಗೆಟ್ಟ ಕಾಂಗ್ರೆಸ್ ಸರಕಾರ ಇಡುವ ಒಂದೊಂದು ಹೆಜ್ಜೆಯೂ ಬಡವರಿಗೆ ಮಾರಕವಾಗಿದೆ. ಬಡವರು ಕಣ್ಣೀರು ಹಾಕುತ್ತಿದ್ದಾರೆ. ಈ ಸರಕಾರದ ಕ್ರಮಗಳು ರೈತರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಆಕ್ಷೇಪಿಸಿದರು. ಗ್ಯಾರಂಟಿಗೆ ಹಣ ಕ್ರೋಡೀಕರಿಸಲು ಜನರ ಮೇಲೆ ಬರೆ ಎಳೆಯುತ್ತಿದ್ದಾರೆ ಎಂದು ತಿಳಿಸಿದರು. ಎರಡನೇ ಬಾರಿಗೆ ಇದೀಗ ಹಾಲಿನ ದರ ಏರಿಸುತ್ತಿದ್ದಾರೆ. ಹಿಂದಿನ ಬಿಜೆಪಿ ಸರಕಾರವು ಹೈನುಗಾರರಿಗೆ ಪ್ರೋತ್ಸಾಹಧನ ನೀಡುತ್ತಿತ್ತು. ಆದರೆ, ಕಾಂಗ್ರೆಸ್ ಸರಕಾರವು ಹೈನುಗಾರರ ಪ್ರೋತ್ಸಾಹಧನ 700- 800 ಕೋಟಿ ಬಾಕಿ ಉಳಿಸಿಕೊಂಡಿದೆ ಎಂದರು. ಸರಕಾರವು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+