ವಿಜಯೇಂದ್ರಗೆ ಪೊಲೀಸ್ ಭದ್ರತೆ, ಎಸ್ಕಾರ್ಟ್‌ ಸೌಲಭ್ಯ ನೀಡಿದ ಸರ್ಕಾರ

ಬೆಂಗಳೂರು, ನವೆಂಬರ್ 13; ಶಿಕಾರಿಪುರ ಕ್ಷೇತ್ರದ ಬಿಜೆಪಿ ಶಾಸಕ, ಕರ್ನಾಟಕ ಬಿಜೆಪಿಯ ನಿಯೋಜಿತ ಅಧ್ಯಕ್ಷ ಬಿ. ವೈ. ವಿಜಯೇಂದ್ರಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪೊಲೀಸ್ ಭದ್ರತೆ, ಎಸ್ಕಾರ್ಟ್ ಸೌಲಭ್ಯವನ್ನು ನೀಡಿ ಆದೇಶ ಹೊರಡಿಸಿದೆ.

ಮೂವರು ಪೊಲೀಸ್ ಸಿಬ್ಬಂದಿ ಇರುವ ಬೆಂಗಾವಲು ವಾಹನ ಬಿ. ವೈ. ವಿಜಯೇಂದ್ರರ ಭದ್ರತೆಯನ್ನು ನೋಡಿಕೊಳ್ಳಲಿದೆ. ನವೆಂಬರ್ 15ರಂದು ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅಧಿಕೃತವಾಗಿ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ, ಬೆಂಗಾವಲು ವಾಹನ ನೀಡಲಾಗುತ್ತದೆ.

Congress Govt Given Police Escort For BJP President BY Vijayendra

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಶಿಕಾರಿಪುರ ಕ್ಷೇತ್ರದ ಶಾಸಕರು. ಹಾಲಿ ಶಾಸಕರಿಗೆ ನೀಡುವ ಪೊಲೀಸ್ ಭದ್ರತೆ ಅವರಿಗೆ ಇರಲಿದೆ. ಅದರ ಜೊತೆಗೆ ಹೆಚ್ಚುವರಿ ಬೆಂಗಾವಲು ವಾಹನವನ್ನು ನೀಡಲಾಗಿದೆ. ವಿಜಯೇಂದ್ರ ಸಂಚಾರ ನಡೆಸುವಾಗ ಈ ವಾಹನ ಬೆಂಗಾವಾಲಾಗಿ ಇರಲಿದೆ.

ಶುಕ್ರವಾರ ಬಿ. ವೈ. ವಿಜಯೇಂದ್ರರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ. ನವೆಂಬರ್ 15ರಂದು ನಡೆಯುವ ಕಾರ್ಯಕ್ರಮದಲ್ಲಿ ಅವರು ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಶಿಷ್ಟಾಚಾರದಂತೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.

ಹಾಲಿ ಶಾಸಕರು; 47 ವರ್ಷದ ಬಿ. ವೈ. ವಿಜಯೇಂದ್ರ ಈ ಬಾರಿಯ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಲ್ಲಿ 81,810 ಮತಗಳನ್ನು ಪಡೆದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಮೂರು ವರ್ಷಗಳ ಹಿಂದೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದ ಬಿ. ವೈ. ವಿಜಯೇಂದ್ರರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದರು.

ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಬಿ. ವೈ. ವಿಜಯೇಂದ್ರ ಸಕ್ರಿಯರಾಗಿದ್ದಾರೆ. ಹಲವಾರು ಕಡೆ ಸಂಚಾರ ನಡೆಸುತ್ತಿದ್ದಾರೆ. ವಿವಿಧ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಅಧಿಕೃತವಾಗಿ ಅವರು ಅಧಿಕಾರ ಸ್ವೀಕಾರ ಮಾಡಬೇಕಿದೆ.

ಶನಿವಾರ ಅವರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದರು. ಭಾನುವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಟ್ಟಿದ್ದರು. ಸೋಮವಾರ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಎಸ್. ಎಂ. ಕೃಷ್ಣ ಭೇಟಿ ಮಾಡಿ ಮಾತುಕತೆ ನಡೆಸಿದರು.

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವಧಿ ಪೂರ್ಣಗೊಂಡಿದ್ದರೂ ಸಹ ಅವರನ್ನು ಮುಂದುವರೆಸಲಾಗಿತ್ತು. 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ರಾಜ್ಯದಲ್ಲಿ ಹೀನಾಯ ಸೋಲು ಕಂಡ ಬಳಿಕ ಹೊಸ ಅಧ್ಯಕ್ಷರ ನೇಮಕವಾಗಲಿದೆ ಎಂಬ ಸುದ್ದಿ ಹಬ್ಬಿತ್ತು.

ಬಿಜೆಪಿ ರಾಷ್ಟ್ರೀಯ ನಾಯಕರು 2024ರ ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದ ಬಿ. ವೈ. ವಿಜಯೇಂದ್ರರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+