BBMP Elections: ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆಗೆ ಮುಂದಾದ ಸರ್ಕಾರ: ತಜ್ಞರ ಸಮಿತಿ ನೇಮಿಸಿ ಆದೇಶ

ಬೆಂಗಳೂರು, ಜೂನ್‌ 12: ಕಾಂಗ್ರೆಸ್‌ ಸರ್ಕಾರ ರಚನೆಯ ಬೆನ್ನಲ್ಲೇ ಮುಂಬರುವ ಚುನಾವಣೆಗಳಿಗೆ ತಯಾರಿ ನಡೆಸುತ್ತಿದೆ. ಲೋಕಸಭಾ ಚುನಾವಣೆಗೂ ಮುನ್ನವೇ ಬಿಬಿಎಂಪಿ ಚುನಾವಣೆಯನ್ನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಪಾಲಿಕೆಯನ್ನು ವಿಭಜಿಸಲು ಸರ್ಕಾರ ಮುಂದಾಗಿದ್ದು, ಇದಕ್ಕೂ ಮುನ್ನ ತಜ್ಞರ ಸಮಿತಿ ರಚನೆ ಮಾಡಿ ಆದೇಶಿಸಿದೆ.

ಆಡಳಿತದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ದೃಷ್ಟಿಯಿಂದ ಪಾಲಿಕೆಯನ್ನು ವಿಭಜಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೂ ಮುನ್ನ ತಜ್ಞರ ಸಮಿತಿ ರಚನೆ ಮಾಡಿ ಆದೇಶಿಸಿದೆ. ಅಲ್ಲದೆ, ನಿಗದಿತ ಸಮಯದಲ್ಲಿ ವರದಿ ತರಿಸಿಕೊಂಡು ಅದರ ಆಧಾರದ ಮೇಲೆ ಪಾಲಿಕೆಯನ್ನು ಪುನರ್ ರಚಿಸಲು ಸರ್ಕಾರ ತೀರ್ಮಾನಿಸಿದೆ.

 Congress Govt to Bifurcate BBMP

ಇನ್ನೂ ಈ ರೀತಿ ವಿಭಜಿಸುವ ಮುನ್ನ ತಜ್ಞರ ಸಮಿತಿ ನೇಮಿಸಿ ಸಮಿತಿಯಿಂದ ನಿಗಧಿತ ಕಾಲಮಿತಿಯೊಳಗೆ ವರದಿ ತರಿಸಿಕೊಂಡು ಪಾಲಿಕೆಯನ್ನು ವಿಭಜನೆ ಮಾಡುವ ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿದೆ.

ಇನ್ನೂ ನಿವೃತ್ತ ಐಎಎಸ್ ಅಧಿಕಾರಿ ಬಿಎಸ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಈ ಹಿಂದೆ ರಚಿಸಲಾಗಿತ್ತು. ಪ್ರಸ್ತುತ ಪಾಲಿಕೆಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಬಿಎಸ್​ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಇದೀಗ ಪುನರ್ ರಚಿಸಲು ಸರ್ಕಾರವು ತೀರ್ಮಾನಿಸಿದ್ದು, ಪಾಟೀಲ್ ಅಧ್ಯಕ್ಷತೆಯ ಸಮಿತಿಯಲ್ಲಿ ಬಿಬಿಎಂಪಿ ನಿವೃತ್ತ ಆಯುಕ್ತ ಸಿದ್ದಯ್ಯ ಮತ್ತು ಹಿಂದಿನ ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್​ ಸದಸ್ಯ ರವಿಚಂದರ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಪಾಲಿಕೆ ವಿಶೇಷ ಆಯುಕ್ತರು ಸಮಿತಿಗೆ ಬೇಕಾದ ಅಗತ್ಯ ಮಾಹಿತಿಯನ್ನು ಒದಗಿಸಬೇಕು ಮತ್ತು ತತ್ಸಬಂಧ ಕರೆಯಬೇಕಾಗಿರುವ ಸಭೆಗಳ ಬಗ್ಗೆ ಸೂಕ್ತವಾಗಿ ಸಮನ್ವಯ ಕಾರ್ಯ ನಿರ್ವಹಿಸಬೇಕು. ಸಮಿತಿಗೆ ಉತ್ತಮ ಕಚೇರಿ, ಕೊಠಡಿ, ಅಗ್ಯತ್ಯ ಸಿಬ್ಬಂದಿ, ಪೀಠೋಪಕರಣಗಳು, ವಾಹನ ಸೌಲಭ್ಯ ಸೇರಿದಂತೆ ಇನ್ನಿತರ ಸೌಲಭ್ಯ ಒದಗಿಸುವಂತೆ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್​ಎಸ್​ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+