Congress Guarantee: ಉಚಿತ ಗ್ಯಾರಂಟಿ ಚುನಾವಣಾ ಗಿಮಿಕ್ ಅಷ್ಟೇ ಎಂದ ಸಚಿವ ಚೆಲುವರಾಯಸ್ವಾಮಿ: ಇಲ್ಲಿದೆ ವಿಡಿಯೋ!
ಬೆಂಗಳೂರು, ಜೂನ್ 07: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿ ಜಯಗಳಿಸಿ, ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಉಚಿತ ಗ್ಯಾರಂಟಿಗಳು ಪ್ರಮುಖ ಪಾತ್ರವನ್ನ ವಹಿಸಿವೆ ಎನ್ನಲಾಗಿದೆ.
Karnataka Agriculture Minister Cheluvarayaswamy of कांग्रेस candidly admits that the promise of freebies was an election gimmick
— Surendra Tapuriah 🇮🇳 (@Bobbycal) June 6, 2023
I am so happy for the Hindus of Karnataka who voted Congress for freebies, now enjoy
On the other side, Farmers in Rajasthan who voted for Congress… pic.twitter.com/2JHMWEMRnz
ರಾಜ್ಯದ ಬಡ, ಮಧ್ಯಮವರ್ಗದವರನ್ನ ಗಮನದಲ್ಲಿಟ್ಟುಕೊಂಡು ಐದು ಗ್ಯಾರಂಟಿಗಳನ್ನು ಘೋಷಿಸಿದ್ದಾಗಿ ಚುನಾವಣಾಪೂರ್ವದಲ್ಲಿ ರಾಜ್ಯ ಕಾಂಗ್ರೆಸ್ ಭರವಸೆಯನ್ನ ನೀಡಿತ್ತು. ಇದೀಗ ಸಿದ್ದರಾಮಯ್ಯ ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಸೂಚಿಸಿದ್ದು, ಅನುಷ್ಠಾನ ಹಂತದಲ್ಲಿರುವಾಗಲೇ ನೂತನ ಸರ್ಕಾರದ ಕೃಷಿ ಸಚಿವ ಚೆಲುವರಾಯಸ್ವಾಮಿ ನೀಡಿರುವ ಸ್ಫೋಟಕ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಹೌದು, ಉಚಿತ ಭರವಸೆಗಳೆಲ್ಲ ಕೇವಲ ಚುನಾವಣಾ ಗಿಮಿಕ್ ಅಷ್ಟೆ. ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲು ಇಂಥ ಗಿಮಿಕ್ಗಳನ್ನು ಮಾಡಲಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಒಂದು ಕಡೆ ಕೊಟ್ಟ ಭರವಸೆಯನ್ನ ನಮ್ಮ ಸರ್ಕಾರ ಈಡೇಸುವುದಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಹೇಳಿದ್ದು, ಆದರೆ, ಸರ್ಕಾರದ ಭಾಗವಾಗಿರುವ ಸಚಿವ ಚೆಲುವರಾಯಸ್ವಾಮಿ ನೀಡಿರುವ ಸ್ಫೋಟಕ ಹೇಳಿಕೆ ಇದೀಗ ಹಲವು ಪ್ರಶ್ನೆಗಳನ್ನ ಹುಟ್ಟು ಹಾಕಿದೆ.
ಗ್ಯಾರಂಟಿ ಘೋಷಣೆಗಳ ಬಗ್ಗೆ ಚೆಲುವರಾಯಸ್ವಾಮಿ ಹೇಳಿದ್ದೇನು?
ಮೊದಲಿಗೆ ಉಚಿತ ಯೋಜನೆಗಳನ್ನು ಘೋಷಿಸುವ ಬಗ್ಗೆ ದೇಶದಲ್ಲೆಲ್ಲ ಚರ್ಚೆಯಾಯಿತು. ನಾವು ಕೂಡ ಚರ್ಚೆ ಮಾಡಿದೆವು. ಇದು ಒಳ್ಳೆಯದಲ್ಲ ಎಂಬುದಾಗಿ. ಮುಂದೆ ಫ್ರೀ ಫ್ರೀ ಅಂತ ಹೋದರೆ ಇದು ಎಲ್ಲಿಗೆ ಹೋಗಿ ಮುಟ್ಟಬಹುದು ಅಂತ ಈಗ ನಾವುಗಳೂ ಅದೇ ಲೈನಲ್ಲಿ ಹೊರಟಿದ್ದೇವೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ
ಎಲ್ಲೋ ಒಂದು ಕಡೆ ಚುನಾವಣೆ, ರಿಸಲ್ಟ್, ಸರ್ಕಾರ ಬಂದ್ರೆ ತಾನೇ ನಾವೇನಾದ್ರೂ ಮಾಡಲು ಸಾಧ್ಯವಾಗುವುದು? ಅಧಿಕಾರ ಸಿಕ್ಕಿದರೆ ತಾನೇ ನಾವು ಕೆಲಸ ಮಾಡಲು ಸಾಧ್ಯವಾಗುವುದು ಅನ್ನುವ ದೃಷ್ಟಿ ಬಂದಾಗ ಆವತ್ತಿಗೆ ರಿಸಲ್ಟ್ ಅನಿವಾರ್ಯ ಆಗುತ್ತದೆ. ರಿಸಲ್ಟ್ ಬರಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯಲಾರಿಟಿ, ಇಲ್ಲದ್ದು ಬಲ್ಲದ್ದು ಎಲ್ಲ ಮಾಡ್ತೀವಿ. ಬಟ್ ನಮ್ಮ ಮನಸಿಗೆ ಇಷ್ಟ ಆಗ್ತದೋ ಇಲ್ಲವೋ, ಸಿದ್ದರಾಮಯ್ಯನವರ ಮನಸಿಗೆ ಇಷ್ಟ ಆಗ್ತದೋ ಇಲ್ಲವೋ ಕೆಲವೊಂದನ್ನು ಮಾಡಿಕೊಂಡು ಹೋಗಬೇಕಾಗುತ್ತದೆ. ಕೆಲವನ್ನು ಆ್ಯಕ್ಸೆಪ್ಟ್ ಮಾಡಬೇಕಾಗುತ್ತದೆ ಎಂದು ಚೆಲುವರಾಯಸ್ವಾಮಿ ಹೇಳಿರುವುದು ಈ ವಿಡಿಯೋದಲ್ಲಿದೆ.
ಐದು ಗ್ಯಾರಂಟಿ ಘೋಷಣೆಗಳು
ಗ್ಯಾರೆಂಟಿ 1: ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ
ಗ್ಯಾರೆಂಟಿ 2: ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ಗೃಹಿಣಿಗೆ ತಿಂಗಳಿಗೆ 2000 ರೂ.
ಗ್ಯಾರಂಟಿ 3: ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ
ಗ್ಯಾರೆಂಟಿ 4: ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ
ಗ್ಯಾರೆಂಟಿ 5: ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಆರ್ಥಿಕ ನೆರವು












Click it and Unblock the Notifications