ವಿಧಾನಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ!

ಬೆಂಗಳೂರು, ಮಾ. 18: ತೀವ್ರ ಕುತೂಹಲ ಮೂಡಿಸಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೊಷಣೆ ಮಾಡಿದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೊಷಣೆ ಮಾಡಿದೆ.

Recommended Video

      ಉಪ ಚುನಾವಣೆಗೆ ಸಚಿವರಿಗೆ ಖಡಕ್ ವಾರ್ನಿಂಗ್ ! | Oneindia Kannada

      ಚುನಾವಣೆ ಘೊಷಣೆ ಆಗುತ್ತಿದ್ದಂತೆಯೆ ಎಲ್ಲರಿಗಿಂತ ಮೊದಲು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರಕ್ಕೆ ದಿ. ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರಿಗೆ ಟಿಕೆಟ್ ಕೊಡಲಾಗಿದೆ. ಬಸವಕಲ್ಯಾಣ ಕ್ಷೇತ್ರಕ್ಕೆ ದಿ. ಮಾಜಿ ಶಾಸಕ ಬಿ. ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್ ಕೊಡಲಾಗಿದ್ದು, ತೀವ್ರ ಕುತೂಹಲ ಮೂಡಿಸಿದ್ದ ಮಸ್ಕಿ ಕ್ಷೇತ್ರಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಬಸವನಗೌಡ ಆರ್. ತುರವಿಹಾಳ್ ಅವರಿಗೆ ಟಿಕೆಟ್ ಕೊಡಲಾಗಿದೆ.

      The Congress has announced its list of candidates for the by-election in three assembly constituencies

      ಇನ್ನುಳಿದಂತೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಪ್ರಕಟಿಸಬೇಕಿದೆ. ಇನ್ನೆರಡು ದಿನಗಳಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೊಷಣೆಯಾಗುವ ಸಾಧ್ಯತೆಯಿದೆ. ಇನ್ನು ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಆಗುವ ಮೊದಲೇ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಘೊಷಣೆ ಮಾಡಿದೆ.

      The Congress has announced its list of candidates for the by-election in three assembly constituencies

      ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವ ಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಮೂರು ಕ್ಷೇತ್ರಗಳಿಗೆ ಇದೇ ಮಾರ್ಚ್ 23 ರಂದು ಅಧಿಸೂಚನೆ ಪ್ರಕಟವಾಗಲಿದೆ. ಮಾ. 30 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು, ಏಪ್ರಿಲ್ 4 ನಾಮಪತ್ರ ವಾಪಾಸ್ ಪಡೆಯಲು ಅಂತಿಮ ದಿನ. ಏಪ್ರೀಲ್ 17 ಮತದಾನ, ಮೇ 2 ರಂದು ಮತ ಎಣಿಕೆ ನಡೆಯಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+