ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶುರುವಾಗಿರುವ ಅವಾಂತರಗಳು
ಬೆಂಗಳೂರು, ನವೆಂಬರ್ 06: ಕಾಂಗ್ರೆಸ್ ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ದಿವಾಳಿ ಮಾಡಲು ಅಧಿಕಾರಕ್ಕೆ ಬಂದಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸುವ ಜೊತೆ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುತ್ತಿರುವುದು ನಿಜಕ್ಕೂ ಆತಂಕಕಾರಿ ಎಂದು ರಾಜ್ಯ ಬಿಜೆಪಿ ಟ್ವೀಟ್ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶುರುವಾಗಿರುವ ಅವಾಂತರಗಳು.
▪️ಸರ್ಕಾರಿ ಮಹಿಳಾ ಅಧಿಕಾರಿಗಳ ಕೊಲೆ.
▪️ಸರ್ಕಾರಿ ಅಧಿಕಾರಿಗಳ ಮೇಲೆ ಗುಂಪು ಹಲ್ಲೆ.
▪️ಭಯೋತ್ಪಾದಕರ ಅಡಗುತಾಣವಾಗುತ್ತಿರುವ ಕರ್ನಾಟಕ.
▪️ ರಾಜ್ಯದೆಲ್ಲೆಡೆ ಹೆಚ್ಚುತ್ತಿರುವ ಮತೀಯ ಶಕ್ತಿಗಳ ಅಪರಾಧ ಚಟುವಟಿಕೆ.
▪️ ಮಿತಿ ಮೀರಿದ ಭ್ರಷ್ಟಾಚಾರ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲಿಂದ ನೇಕಾರರ ಬದುಕಿಗೆ ಮರಣ ಶಾಸನ ಬರೆಯುತ್ತಿದೆ ಎಂಬುದಕ್ಕೆ ತುಮಕೂರು ಜಿಲ್ಲೆಯೊಂದರಲ್ಲೇ 150ಕ್ಕೂ ಹೆಚ್ಚು ನೇಕಾರರ ಕುಟುಂಬಗಳು ಬೀದಿಗೆ ಬಿದ್ದಿರುವುದು ತಾಜಾ ನಿದರ್ಶನ. ಕಾಂಗ್ರೆಸ್ ಸರ್ಕಾರ ತಂದೊಡ್ಡಿರುವ ವಿದ್ಯುತ್ ಲೋಡ್‌ಶೆಡ್ಡಿಂಗ್ ಕೃಪೆಯಿಂದಾಗಿ ಪಾರಂಪರಿಕ ನೇಕಾರಿಕಾ ಕಲೆಗಾರಿಕೆಗೂ ನಶಿಸುವ ಅಪಾಯ ತಲೆದೋರುತ್ತಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಇಂಧನ ಸಚಿವ ಕೆ ಜೆ ಜಾರ್ಜ್ ಮಾತ್ರ ಕರೆಂಟ್ ಇಲ್ಲದ ಕತ್ತಲಿನಲ್ಲಿ ಕಾಣೆಯಾಗಿದ್ದಾರೆ.
ರಾಜ್ಯದ ಆರ್ಥಿಕತೆಯನ್ನು ಬೇಜವಾಬ್ದಾರಿಯಿಂದ ನಿರ್ವಹಿಸಿ ಕಾಂಗ್ರೆಸ್ ಸರ್ಕಾರ ಬೊಕ್ಕಸ ಬರಿದು ಮಾಡಿ ಕೂತಿದೆ. ಹಣ ಹೊಂದಿಸಲು ಚಿಟ್ ಫಂಡ್ ವ್ಯವಹಾರದಿಂದ ಹಣ ಎತ್ತಲು ಸಜ್ಜಾಗಿರುವುದು ವಿಪರ್ಯಾಸ ಮಾತ್ರವಲ್ಲ, ಕಳವಳಕಾರಿ. ಚಿಟ್ ಫಂಡ್ ಹೆಸರಿನಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿ ಜನರಿಗೆ ಟೋಪಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಕಂಡುಕೊಳ್ಳುತ್ತಿರುವ ಹೊಸ ಮಾರ್ಗವಿದು ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ - ಮಹಿಳೆಯರ ಮೇಲೆ ಹಲ್ಲೆ, ಕೊಲೆಗಳು ಮತ್ತೊಮ್ಮೆ ಶುರುವಾಗಿದೆ. 2018 ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಳಾ ಅಧಿಕಾರಿಗಳು, ಮಹಿಳಾ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗಳಾಗುತ್ತಿದ್ದವು, ಈಗ ಒಂದು ಹೆಜ್ಜೆ ಮುಂದೆ ಹೋಗಿ ಮಹಿಳಾ ಅಧಿಕಾರಿಗಳ ಕೊಲೆಗಳು ನಡೆಯುತ್ತಿವೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರೇ, ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರಿನ ಅಸಲಿಯತ್ತು.? ಎಂದು ಬಿಜೆಪಿ ಕಿಡಿಕಾರಿದೆ.












Click it and Unblock the Notifications