ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಗ್ಯಾರಂಟಿ ಸುಲಿಗೆ ಟ್ಯಾಕ್ಸ್ ಜಾರಿ: ಬೆಲೆ ಏರಿಕೆ ಪಟ್ಟಿ ಕೊಟ್ಟ ಸಂಸದ
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 23: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ತಂದಿದೆ. ರಾಜ್ಯದಲ್ಲಿ ತೆರಿಗೆ ಏರಿಕೆಯಾಗಿದ್ದರೆ, ಕೇಂದ್ರ ಸರ್ಕಾರ ತೆರಿಗೆ ಕಡಿಮೆ ಮಾಡಿ ಜನರಿಗೆ ಆರ್ಥಿಕ ಚೈತನ್ಯ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯದಶಮಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಜಿಎಸ್‌ಟಿಯನ್ನು ಸರಳೀಕರಣ ಮಾಡಿ ಜನರಿಗೆ ಕೊಡುಗೆ ನೀಡಿದ್ದಾರೆ. ಶೇ.18 ರ ತೆರಿಗೆಯನ್ನು ಶೇ.5 ಕ್ಕೆ ತಂದಿದ್ದಾರೆ. ಕೆಲವು ಸರಕು, ಸೇವೆಗಳಲ್ಲಿ ತೆರಿಗೆ ವಿನಾಯಿತಿ ನೀಡಿದ್ದಾರೆ. ನಾನು ಆರ್ಥಿಕ ಸ್ಥಾಯಿ ಸಮಿತಿಯಲ್ಲಿ ಕೆಲಸ ಮಾಡುತ್ತಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿದಿರಲಿಲ್ಲ. ಮಧ್ಯಮವರ್ಗ ಹಾಗೂ ಬಡಜನರ ಪರವಾಗಿ ನಾನು ವಿಶೇಷವಾದ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ರೈತರು ಬಳಕೆ ಮಾಡುವ ಟ್ರ್ಯಾಕ್ಟರ್, ರಸಗೊಬ್ಬರ, ಹನಿ ನೀರಾವರಿ ಉಪಕರಣಗಳ ತೆರಿಗೆಯನ್ನು ಶೇ.5 ರ ವ್ಯಾಪ್ತಿಗೆ ತರಲಾಗಿದೆ. ಯುಪಿಎ ಅವಧಿಯಲ್ಲಿ ಎಲ್ಲ ಸರಕು, ಸೇವೆಗಳ ಮೇಲೆ ಶೇ.30 ರಷ್ಟು ತೆರಿಗೆ ಇತ್ತು. ಮೋದಿ ಸರ್ಕಾರ ಮೊದಲಿಗೆ ನಾಲ್ಕು ಹಂತಗಳಲ್ಲಿ ತೆರಿಗೆ ತಂದು ಈಗ ಎರಡು ಹಂತಗಳನ್ನು ಉಳಿಸಿಕೊಂಡಿದೆ. ಈ ಸುಧಾರಣೆಯಿಂದ ಎರಡೂವರೆ ಲಕ್ಷ ಕೋಟಿ ರೂ. ಜನರ ಕೈಗೆ ಸಿಗಲಿದೆ ಎಂದು ಅಂದಾಜಿಸಲಾಗಿದೆ. ಇದರಿಂದ ಖರೀದಿ ಸಾಮರ್ಥ್ಯ ಹೆಚ್ಚಲಿದೆ. ಒಂದು ಕಾರು ಖರೀದಿಸುವವರಿಗೆ ಎರಡು ಲಕ್ಷ ರೂ. ನಷ್ಟು ಉಳಿತಾಯವಾಗಲಿದೆ. ಆರೋಗ್ಯ ವಿಮೆ ಹಾಗೂ ಜೀವ ವಿಮೆ ಮಾಡಿಸಲು ಯಾವುದೇ ತೆರಿಗೆ ಇಲ್ಲ. ಬಹಳಷ್ಟು ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಫಿಟ್‌ನೆಸ್ ಉಪಕರಣಗಳಿಗೆ ತೆರಿಗೆ ತೆಗೆದುಹಾಕಲಾಗಿದೆ ಎಂದರು.
ಕೇಂದ್ರ ಸರ್ಕಾರ 144 ವಂದೇ ಭಾರತ್ ರೈಲುಗಳ ಕಾರ್ಯಾಚರಣೆ ನಡೆಸುತ್ತಿದೆ. ಯುಪಿಎ ಕಾಲದಲ್ಲಿದ್ದ ವಿಮಾನ ನಿಲ್ದಾಣಗಳು ಈಗ ದುಪ್ಪಟ್ಟಾಗಿದೆ. ರಾಷ್ಟ್ರೀಯ ಹೆದ್ದಾರಿಗಳ ಉದ್ದ ಶೇ.60 ರಷ್ಟು ಹೆಚ್ಚಿದೆ. ಡಿಬಿಟಿ ವ್ಯವಸ್ಥೆಯಡಿ ಶೇ.90 ರಷ್ಟು ಹಣ ನೇರವಾಗಿ ಜನರ ಖಾತೆಗೆ ಹೋಗುತ್ತಿದೆ. ಆಪರೇಶನ್ ಸಿಂದೂರದಲ್ಲಿ ಭಾರತೀಯ ಯೋಧರು ಉಗ್ರರ ತಾಣಗಳನ್ನು ಧ್ವಂಸ ಮಾಡಿದ್ದಾರೆ. ಯುಪಿಎಗೆ ಹೋಲಿಸಿದರೆ ಎನ್‌ಡಿಎ ಸರ್ಕಾರ ರಕ್ಷಣಾ ವಲಯಕ್ಕೆ 34 ಪಟ್ಟು ಅಧಿಕ ಅನುದಾನ ನೀಡಿದೆ. ಹೀಗೆ ತೆರಿಗೆ ಹಣವನ್ನು ಕೇಂದ್ರ ಸರ್ಕಾರ ಸದ್ಬಳಕೆ ಮಾಡುತ್ತಿದೆ ಎಂದರು.
ಯುಪಿಎ ಅವಧಿಯಲ್ಲಿ ಹಾಲಿನ ಉತ್ಪನ್ನಗಳಿಗೆ 18% ತೆರಿಗೆ ಇತ್ತು. ಐಷಾರಾಮಿ ಕಾರ್‌ಗಳಿಗೂ ಅಷ್ಟೇ ಇತ್ತು. ಎನ್‌ಡಿಎ ಸರ್ಕಾರ ಹಾಲಿಗೆ ತೆರಿಗೆ ತೆಗೆದುಹಾಕಿದೆ. ಯುಪಿಎ ಅವಧಿಯಲ್ಲಿ ಸಿಮೆಂಟ್, ಪೇಯಿಂಟ್, ಟಿವಿ, ಫ್ರಿಡ್ಜ್‌ಗೆ 30% ಇದ್ದು, ಈಗ ಅದು 18% ಗೆ ಇಳಿದಿದೆ. ಮಹಿಳೆಯರ ಸ್ಯಾನಿಟರಿ ಪ್ಯಾಡ್‌ಗೆ 13% ತೆರಿಗೆ ಇತ್ತು. ʼಸ್ವಸ್ಥ ನಾರಿ, ಸಶಕ್ತ ಪರಿವಾರʼ ಎಂಬ ಘೋಷಣೆ ನೀಡಿರುವ ಪ್ರಧಾನಿ ಮೋದಿ ಸ್ಯಾನಿಟರಿ ಪ್ಯಾಡ್ ಮೇಲಿನ ತೆರಿಗೆ ರದ್ದು ಮಾಡಿದ್ದಾರೆ. ಮಿನರಲ್ ನೀರಿನ ಬಾಟಲ್‌ಗೆ ಇದ್ದ ಶೇ.28 ರ ತೆರಿಗೆ ಶೇ.5 ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರಕ್ಕೆ ಜಿಎಸ್‌ಟಿ ಎಂದರೆ ಗ್ಯಾರಂಟಿ ಸುಲಿಗೆ ಟ್ಯಾಕ್ಸ್. 38 ರೂ. ಇದ್ದ ಹಾಲಿಗೆ 47 ರೂ. ಆಗಿದೆ. ಬಸ್ ದರ 100 ಕಿ.ಮೀ. 100 ಇದ್ದಿದ್ದು, 115 ರೂ. ಆಗಿದೆ. ಪೆಟ್ರೋಲ್‌ಗೆ 99 ರೂ. ಇದ್ದಿದ್ದು, 103 ರೂ. ಆಗಿದೆ. ಡೀಸೆಲ್‌ಗೆ 8% ದರ ಹೆಚ್ಚಿದೆ. ನೀರಿನ ಶುಲ್ಕ 55% ಹೆಚ್ಚಾಗಿದೆ. ವಿದ್ಯುತ್ ದರ 120 ರೂ. ನಿಂದ 145 ರೂ.ಗೆ ಏರಿದೆ. ಸ್ಟಾಂಪ್ ಡ್ಯೂಟಿ 150% ಹೆಚ್ಚಿದೆ. ಅಫಿಡವಿಟ್‌ಗೆ 20 ರೂ. ನಿಂದ 100 ರೂ.ಗೆ ಏರಿಸಲಾಗಿದೆ. ಬಿಬಿಎಂಪಿಯಲ್ಲಿ ಕಸಕ್ಕೆ ಹೊಸದಾಗಿ 400 ರೂ. ಶುಲ್ಕ ವಿಧಿಸಲಾಗಿದೆ. ಹೊಸ ವಾಹನಗಳ ನೋಂದಣಿಗೆ 500 ರೂ. ನಿಂದ 1,000 ರೂ. ಹೆಚ್ಚಿದೆ. ಸರ್ಕಾರಿ ಆಸ್ಪತ್ರೆಗಳ ಸೇವಾ ಶುಲ್ಕವನ್ನು 100 ರಿಂದ 500 ರೂ. ಗೆ ಏರಿಸಲಾಗಿದೆ ಎಂದು ದೂರಿದರು.
ದಲಿತರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿಗೆ ಬಳಸಲಾಗಿದೆ. ಪ್ರಸಕ್ತ ಸಾಲಿನ 2025-26 ನೇ ಬಜೆಟ್ ನಲ್ಲಿ SCSP/TSP ಅಡಿ 42,017.51 ಕೋಟಿ ರೂ. ಅನುದಾನದಲ್ಲಿ 11,896.84 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತಾಡುವ ಕಾಂಗ್ರೆಸ್ ನಾಯಕರು, ದಲಿತರ ನಿಗಮಗಳಿಗೆ ಅನುದಾನ ಕಡಿತ ಮಾಡಿದ್ದಾರೆ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅನುದಾನದಲ್ಲಿ 90 ಕೋಟಿ ರೂ. ಅನುದಾನ ಕಡಿತ, ವಿಶ್ವಕರ್ಮ ನಿಗಮಕ್ಕೆ 12 ಕೋಟಿ ರೂ. ಅನುದಾನ ಕಡಿತ, ಉಪ್ಪಾರ ನಿಗಮಕ್ಕೆ 7 ಕೋಟಿ ರೂ. ಅನುದಾನ ಕಡಿತ ಮಾಡಿದ್ದಾರೆ ಎಂದರು.
ತೆರಿಗೆ ಇಳಿಕೆ ಮಾಡಿರುವುದರಿಂದ ರಾಜ್ಯಕ್ಕೆ ನಷ್ಟವಾಗಿದೆ ಎಂದು ಈಗ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಜಿಎಸ್‌ಟಿ ಕೌನ್ಸಿಲ್‌ನಲ್ಲಿರುವ 33 ಸದಸ್ಯರು ಕೂಡ ಇದಕ್ಕೆ ಒಪ್ಪಬೇಕಾಗುತ್ತದೆ. ರಾಜ್ಯ ಸರ್ಕಾರದ ಪರವಾಗಿ ಸಚಿವ ಕೃಷ್ಣ ಭೈರೇಗೌಡರು ಇದಕ್ಕೆ ಸಹಿ ಹಾಕಿದ್ದಾರೆ. ಸರಿ ಇಲ್ಲ ಎಂದಮೇಲೆ ಸಹಿ ಹಾಕಿದ್ದು ಏಕೆ? ಈ ಸುಧಾರಣೆ ಬಗ್ಗೆ ಒಂದು ವರ್ಷದಿಂದಲೇ ಸಿದ್ಧತೆ ನಡೆದಿದೆ. ಕೇಂದ್ರ ಸರ್ಕಾರಕ್ಕೆ ಆದಾಯ ಕಡಿಮೆಯಾದರೂ ಜನರ ಹಿತದೃಷ್ಟಿಯಿಂದ ಈ ಕ್ರಮ ತರಲಾಗಿದೆ. ಈಗ ಹಣದುಬ್ಬರ 2.7% ಹಾಗೂ ಆರ್ಥಿಕ ಬೆಳವಣಿಗೆ ದರ 7.9% ಇದೆ. ಹೀಗೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಆರ್ಥಿಕ ಚೈತನ್ಯ ನೀಡಿದ್ದಾರೆ ಎಂದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ











Click it and Unblock the Notifications