ಬಿಜೆಪಿಯಲ್ಲಿ ಮೂಡಿದಿಯಾ ಬಿರುಕು; ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಸಿಎಂ ಹೇಳಿದ್ಯಾಕೆ?

ಹುಬ್ಬಳ್ಳಿ, ಏಪ್ರಿಲ್30:‌ ರಾಜ್ಯ ವಿಧಾನಸಭಾ ಚುನಾವಣಾ ಟಿಕೆಟ್‌ ಹಂಚಿಕೆಯಿಂದಾಗಿ ಬಿಜೆಪಿ ಪಾಳಯದಲ್ಲಿ ಬಂಡಾಯದ ಬೆಂಕಿ ಜೋರಾಗಿದೆ. ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಕೆಲ ನಾಯಕರು ಪಕ್ಷಕ್ಕೆ ಗುಡ್‌ ಬೈ ಹೇಳಿದ್ರೆ, ಇತ್ತ ಕೆಲವು ನಾಯಕರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಇನ್ನೂ ರಾಜ್ಯ ಬಿಜೆಪಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ವಿರುದ್ದ ಈ ಹಿಂದೆ ಸಾಕಷ್ಟು ಬಿಜೆಪಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕೇಸರಿ ಕೋಟೆಯಲ್ಲಿ ಬಿರುಕು ಮೂಡಿದೆ ಎಂದು ಹೇಳಿಲಾಗುತ್ತಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

Congress has not given proper information to Priyanka Gandhi says Basavaraj Bommai

ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆ.ಪಿ ನಡ್ಡಾ ಅವರು ನನ್ನ ಮೇಲೆ‌ ಬಹಳಷ್ಟು ನಿರೀಕ್ಷೆ ಇಟ್ಟು ಒಳ್ಳೆಯ ಮಾತು ಹೇಳಿದ್ದಾರೆ. ಅಮಿತ್ ಶಾ ಅವರು ಬಂದಾಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು‌ ಹೋಗುವುದಾಗಿ ಹೇಳಿದ್ದೆ. ನಮ್ಮ ಪಕ್ಷದಲ್ಲಿ ಸ್ಪಷ್ಟ ನಿಲುವಿದೆ. ಸಿಎಂ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಕೇಂದ್ರ ಸಂಸದೀಯ ಮಂಡಳಿ ಮತ್ತು ಶಾಸಕರು ಮುಖ್ಯಮಂತ್ರಿ ಆಯ್ಕೆ ಮಾಡುತ್ತಾರೆ. ನಡ್ಡಾ ಅವರು ಹೇಳಿದ ಮಾತಿಗೆ ನಾನು ಚಿರಋಣಿಯಾಗಿರುತ್ತೇನೆ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.

ಪ್ರವಾಹದ ಸಂದರ್ಭದಲ್ಲಿ ಮೋದಿ ರಾಜ್ಯಕ್ಕೆ ಬಂದಿಲ್ಲ ಎನ್ನುವ ಪ್ರಿಯಾಂಕಾ ಗಾಂಧಿ ಹೇಳಿಕೆ ಕುರಿತು ಮಾತನಾಡಿ, ಪ್ರವಾಹ ಬಂದಾಗ ಹೆಚ್ಚಿನ ಅನುದಾನ ಕೊಟ್ಟಿದ್ದು ಮೋದಿ ಸರ್ಕಾರ. ಪ್ರಿಯಾಂಕಾ ಗಾಂಧಿಯವರ ಸರ್ಕಾರದ ಇದ್ದಾಗ ಮನೆ ಬಿದ್ದರೆ 2 ಸಾವಿರ ಕೊಡುತ್ತಿದ್ದರು. ಅತಿವೃಷ್ಟಿ ಪರಿಹಾರ ಮೋದಿ ಕಾಲದಲ್ಲಿ ಹೆಚ್ಚಿಸಲಾಗಿದೆ‌. ಅತಿಹೆಚ್ಚು ರೈತರ ಆತ್ಮಹತ್ಯೆ ಆಗಿದ್ದು ಸಿದ್ದರಾಮಯ್ಯ ಅವರು ಕಾಲದಲ್ಲಿ. ರೈತರು ಆತ್ಮಹತ್ಯೆ ಮಾಡಿಕೊಂಡಾಗ ಪ್ರಿಯಾಂಕಾ ರಾಹುಲ್ ಬಂದಿದ್ರಾ ? ಎಂದು ಪ್ರಶ್ನಿಸಿದ್ದಾರೆ.

Congress has not given proper information to Priyanka Gandhi says Basavaraj Bommai

ಯಾವುದು ಸೂಕ್ತವಲ್ಲವೋ ಅದನ್ನು ಮಾತನಾಡಿ ಜನರನ್ನು ಮರಳು ಮಾಡಲು ಸಾದ್ಯವಿಲ್ಲ. ಜನತೆಗೆ ಗೊತ್ತಿರುವ ಮಾಹಿತಿ ಪ್ರಕಾರ ಪ್ರಿಯಾಂಕಾ ಗಾಂಧಿಗೆ ಕಾಂಗ್ರೆಸ್ ಸರಿಯಾದ ಮಾಹಿತಿ ನೀಡಿಲ್ಲ ಎಂದರು.

ಇನ್ನೂ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕುರಿತು ಮಾತನಾಡಿ, ಇದೇ ವೇಳೆ ಜಗದೀಶ್ ಶೆಟ್ಟರ್ ಎಲ್ಲ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ ಎಂದು ಹೇಳಿದ ಅವರು, ಮೋದಿಯವರಿಗೆ ದಿನಕ್ಕೆ ಐದು ಕಡೆ ಪ್ರಚಾರ ಮಾಡುವ ಶಕ್ತಿ ಇದೆ ಮಾಡುತ್ತಾರೆ. ಎಐಸಿಸಿಯ ಅಧ್ಯಕ್ಷ ಖರ್ಗೆಯವರು ಸೀನಿಯರ್ ಲೀಡರ್. ಅವರ ಬಾಯಿಂದ ಇಂತ ಮಾತು ಬಂದಿದೆ ಅಂದಾಗ, ಉಳಿದವರಿಂದ ಪ್ರತಿಕ್ರಿಯೆ ಬರೋದು ಸಹಜ. ಇನ್ನೂ ದೇವೇಗೌಡರು ಯಾವ ರಾಷ್ಟ್ರೀಯ ಪಕ್ಷದವರು ಮೈತ್ರಿಗೆ ಮುಂದಾಗಿದ್ದಾರೆ ಬಹಿರಂಗವಾಗಿ ಹೇಳಲಿ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+