ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೌಡಿಗಳು, ಅಪರಾಧ ಹಿನ್ನೆಲೆ ಉಳ್ಳವರಿಗೆ ಪಕ್ಷ ಸೇರಲು ಅವಕಾಶ ಇಲ್ಲ: ಅರುಣ್ ಸಿಂಗ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 3: ರೌಡಿಗಳು ಹಾಗೂ ಅಪರಾಧ ಹಿನ್ನೆಲೆ ಉಳ್ಳವರಿಗೆ ಯಾವುದೇ ಕಾರಣಕ್ಕೂ ಪಕ್ಷ ಸೇರಲು ಅವಕಾಶ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ಈ ಕುರಿತು ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,‌ ಕಾಂಗ್ರೆಸ್ ಗೆ ಮಾತನಾಡಲು ಬೇರೆ ವಿಷಯಗಳಿಲ್ಲ. ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಪ್ರತಿಪಕ್ಷ ಕಾಂಗ್ರೆಸ್ ಗೆ ಮಾತನಾಡಲು, ಚರ್ಚಿಸಲು ಬೇರೆ ವಿಷಯಗಳಿಲ್ಲ. ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ. ರೌಡಿಗಳು ಅಥವಾ ಅಪರಾಧ ಹಿನ್ನೆಲೆ ಉಳ್ಳವರಿಗೆ ಸೇರಲು ಪಕ್ಷ ಯಾವುದೇ ಕಾರಣಕ್ಕೂ‌ ಅವಕಾಶ ನೀಡದು. ಈ ವಿಷಯದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು ಪಕ್ಷದ ನಿಲುವೇನೆಂದು ಸ್ಪಷ್ಟಪಡಿಸಿದ್ದಾರೆ ಎಂದರು.

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಅರುಣ್ ಸಿಂಗ್ ವಿಶ್ವಾಸ

ಜನಸಂಕಲ್ಪ ಸಮಾವೇಶ, ಎಸ್‍ಟಿ ಸಮ್ಮೇಳನ, ಒಬಿಸಿ ಸಮಾವೇಶಗಳಲ್ಲಿ ಲಕ್ಷಾಂತರ ಜನರು ಪಾಲ್ಗೊಂಡಿರುವುದು ರಾಜ್ಯದಲ್ಲಿ ಬಿಜೆಪಿ ಪರ ಒಲವಿನ ಸಂಕೇತವಾಗಿದೆ. ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಸರಕಾರ ರಚಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

 congress has nothing else to talk about says arun singh

ಮುಖ್ಯಮಂತ್ರಿಯವರ ಜನಸಂಕಲ್ಪ ಸಮಾವೇಶಗಳಲ್ಲಿ ಜನರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಜನರ ಸಮರ್ಥನೆ ಬಿಜೆಪಿ ಪರವಾಗಿ ಇರುವುದು ಇದರಿಂದ ಸ್ಪಷ್ಟವಾಗುತ್ತದೆ. ನಾನು ಮತ್ತು ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ಕಾರ್ಯಕರ್ತರ ಸಂಕಲ್ಪ ಯಾತ್ರೆಯಲ್ಲೂ ಕಾರ್ಯಕರ್ತರ ಪಾಲ್ಗೊಳ್ಳುವಿಕೆ ಗರಿಷ್ಠ ಪ್ರಮಾಣದಲ್ಲಿದೆ. ಇವೆಲ್ಲವನ್ನು ಗಮನಿಸಿದರೆ ಕಾರ್ಯಕರ್ತರಲ್ಲಿ ಗೆಲುವಿನ ವಿಶ್ವಾಸ ಇರುವುದು ಸ್ಪಷ್ಟ ಎಂದರು.

ರಾಜ್ಯದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಆಯ್ಕೆ ಮಾಡುತ್ತದೆ. ಗುಜರಾತ್ ಮಾದರಿಯೋ ಅಥವಾ ಮತ್ತೆ ಬೇರೆ ಯಾವುದೋ ಮಾದರಿಯೋ ಎನ್ನುವುದೆಲ್ಲ ಕೇಂದ್ರೀಯ ಸಮಿತಿಗೆ ಬಿಟ್ಟದ್ದು ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಜನಸಂಕಲ್ಪ ಯಾತ್ರೆಗೆ ರಾಜ್ಯಾದ್ಯಂತ ಭರ್ಜರಿ ಸ್ಪಂದನೆ ದೊರೆಯುತ್ತಿದೆ. ಎರಡೂ ಮೋರ್ಚಾಗಳ ಸಮಾವೇಶದಲ್ಲಿ ಜನರು ದೊಡ್ಡ ಪ್ರಮಾಣದಲ್ಲಿ ಜನರು ಸೇರಿದ್ದರು.‌ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಜನರು ಬಯಸಿದ್ದು, 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ನಿಶ್ಚಿತ ಎಂದು ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಜನರೂ ಬಿಜೆಪಿ ಸರಕಾರವನ್ನೇ ಮತ್ತೆ ಬಯಸುತ್ತಿದ್ದಾರೆ. ನಾವು 150 ಶಾಸಕರ ಸ್ಥಾನಗಳನ್ನು ಗೆಲ್ಲಲಿದ್ದೇವೆ. ಸರಕಾರ ರಚಿಸಿ ವೇಗದಿಂದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸಲಿದ್ದೇವೆ ಎಂದು ತಿಳಿಸಿದರು.

English summary
Rowdies and those with criminal backgrounds are not allowed to join the party for any reason says arun singh,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X