ಅಚ್ಚರಿ ಬೆಳವಣಿಗೆ; ಡಿ. ಕೆ. ಶಿವಕುಮಾರ್‌ಗೆ ಹೈಕಮಾಂಡ್‌ ಬುಲಾವ್!

ಬೆಂಗಳೂರು, ಡಿಸೆಂಬರ್ 11 : ಕರ್ನಾಟಕ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ ನಡೆಯುವ ಸೂಚನೆ ಸಿಕ್ಕಿದೆ. ಮಾಜಿ ಸಚಿವ, ಕನಕಪುರ ಶಾಸಕ ಡಿ. ಕೆ. ಶಿವಕುಮಾರ್‌ಗೆ ಹೈಕಮಾಂಡ್ ಬುಲಾವ್ ನೀಡಿದೆ. ರಾಜ್ಯ ರಾಜಕೀಯದಲ್ಲಿ ಇದು ಕುತೂಹಲಕ್ಕೆ ಕಾರಣವಾಗಿದೆ.

15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 2 ಸ್ಥಾನದಲ್ಲಿ ಮಾತ್ರ ಜಯಗಳಿಸಿತ್ತು. ಸೋಲಿನ ನೈತಿಕ ಹೊಣೆ ಹೊತ್ತು ಸಿಎಲ್‌ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು.

ಕೆಪಿಸಿಸಿ ಅಧ್ಯಕ್ಷರು ಯಾರಾಗಲಿದ್ದಾರೆ? ಎಂಬ ಚರ್ಚೆಗಳು ರಾಜ್ಯ ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿವೆ. ಡಿ. ಕೆ. ಶಿವಕುಮಾರ್, ಕೆ. ಎಚ್. ಮುನಿಯಪ್ಪ ಸೇರಿದಂತೆ ವಿವಿಧ ಹೆಸರುಗಳು ಮುಂಚೂಣಿಯಲ್ಲಿ ಕೇಳಿ ಬರುತ್ತಿವೆ. ಈಗ ಹೈಕಮಾಂಡ್ ಡಿ. ಕೆ. ಶಿವಕುಮಾರ್‌ಗೆ ಬುಲಾವ್ ನೀಡಿದ್ದು, ಹಲವರ ಹುಬ್ಬೇರಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಜೈಲು ಸೇರಿದ್ದರು. ಜೈಲಿನಿಂದ ಜಾಮೀನು ಪಡೆದು ಅವರು ಬಿಡುಗಡೆಗೊಂಡಿದ್ದಾರೆ. ಡಿ. ಕೆ. ಶಿವಕುಮಾರ್‌ಗೆ ಪಕ್ಷ ಮಹತ್ವದ ಜವಾಬ್ದಾರಿ ನೀಡಲಿದೆ ಎಂಬ ಸುದ್ದಿ ಹಬ್ಬಿತ್ತು.

ಬದಲಾವಣೆ ಮುನ್ಸೂಚನೆ

ಬದಲಾವಣೆ ಮುನ್ಸೂಚನೆ

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಡಿ. ಕೆ. ಶಿವಕುಮಾರ್‌ಗೆ ಬುಲಾವ್ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕರ್ನಾಟಕ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ ನಡೆಯುವ ಮುನ್ಸೂಚನೆಯನ್ನು ಇದು ನೀಡಿದೆ.

ಅಂತರ ಕಾಯ್ದುಕೊಳ್ಳುತ್ತಿದ್ದಾರೆ

ಅಂತರ ಕಾಯ್ದುಕೊಳ್ಳುತ್ತಿದ್ದಾರೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ಬಳಿಕ ಡಿ. ಕೆ. ಶಿವಕುಮಾರ್ ಯಾವುದೇ ಹುದ್ದೆ ಬೇಡ ಎಂದು ಪದೇ-ಪದೇ ಹೇಳುತ್ತಿದ್ದಾರೆ. "ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ ಪಕ್ಷ ಹೇಳಿದ ಕೆಲಸವನ್ನು ಮಾಡುತ್ತೇನೆ" ಎಂದು ಅವರು ಹಲವು ಬಾರಿ ಹೇಳಿದ್ದಾರೆ.

ಅರ್ಜಿ ಹಾಕಿಕೊಂಡು ಓಡಾಡುವುದಿಲ್ಲ

ಅರ್ಜಿ ಹಾಕಿಕೊಂಡು ಓಡಾಡುವುದಿಲ್ಲ

ಹಿಂದೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ. ಕೆ. ಶಿವಕುಮಾರ್ ಹೆಸರು ಕೇಳಿ ಬಂದಿತ್ತು. ಆಗ ಪ್ರತಿಕ್ರಿಯೆ ನೀಡಿದ್ದ ಅವರು, "ನಾನು ಯಾವುದೇ ಸ್ಥಾನಕ್ಕೂ ಅರ್ಜಿ ಹಾಕಿಕೊಂಡು ಓಡಾಡುವುದಿಲ್ಲ. ಸುಮ್ಮನೆ ಟಿವಿ, ಪೇಪರ್‌ನಲ್ಲಿ ನನ್ನ ಹೆಸರು ಹಾಕುತ್ತೀರಿ" ಎಂದು ಹೇಳಿದ್ದರು.

ಜವಾಬ್ದಾರಿ ನೀಡಲಿರುವ ಹೈಕಮಾಂಡ್

ಜವಾಬ್ದಾರಿ ನೀಡಲಿರುವ ಹೈಕಮಾಂಡ್

15 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವುದು ಅನಿವಾರ್ಯವಾಗಿದೆ. ಆದ್ದರಿಂದ, ಹೈಕಮಾಂಡ್ ಡಿ. ಕೆ. ಶಿವಕುಮಾರ್‌ಗೆ ಜವಾಬ್ದಾರಿ ನೀಡಲು ಮುಂದಾಗಿದ್ದಾರೆ. ಇದಕ್ಕೆ ಅವರು ಒಪ್ಪಿಗೆ ನೀಡಲಿದ್ದಾರೆಯೇ? ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+