ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯಗೆ ಹೈಕಮಾಂಡ್‌ ಕರೆ; ಸೋಮವಾರ ಮಹತ್ವದ ಸಭೆ!

|
Google Oneindia Kannada News

ಬೆಂಗಳೂರು, ಜನವರಿ 12 : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗ ಹೈಕಮಾಂಡ್ ಕಳುಹಿಸಿರುವ ಸಂದೇಶ ಕುತೂಹಲಕ್ಕೆ ಕಾರಣವಾಗಿದೆ.

ಸೋಮವಾರ ಸಂಜೆ ಸಿದ್ದರಾಮಯ್ಯ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಮಂಗಳವಾರ ರಾತ್ರಿ ಅವರು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಈ ವಾರವೇ ಕೆಪಿಸಿಸಿ ಅಧ್ಯಕ್ಷರ ಘೋಷಣೆಯಾಗಲಿದೆಯೇ? ಕಾದು ನೋಡಬೇಕಿದೆ.

ಇವರೇ ಕೆಪಿಸಿಸಿ ಮುಂದಿನ ಅಧ್ಯಕ್ಷರು, ಅಧಿಕೃತ ಘೋಷಣೆಯೊಂದು ಬಾಕಿ!ಇವರೇ ಕೆಪಿಸಿಸಿ ಮುಂದಿನ ಅಧ್ಯಕ್ಷರು, ಅಧಿಕೃತ ಘೋಷಣೆಯೊಂದು ಬಾಕಿ!

ಕೆಪಿಸಿಸಿ ಅಧ್ಯಕ್ಷ ಪಟ್ಟ ಒಕ್ಕಲಿಗರಿಗೆ ಅಥವ ಲಿಂಗಾಯತರಿಗೆ ಎನ್ನುವ ಚರ್ಚೆಗಳು ಈಗಾಗಲೇ ರಾಜ್ಯದಲ್ಲಿ ನಡೆಯುತ್ತಿದೆ. ಮಾಜಿ ಸಚಿವ ಡಿ. ಕೆ. ಶಿವಕುಮಾರ್, ಎಂ. ಬಿ. ಪಾಟೀಲ್ ಹೆಸರುಗಳು ಪ್ರಬಲವಾಗಿ ಕೇಳಿ ಬರುತ್ತಿವೆ.

ಕೆಪಿಸಿಸಿ ಅಧ್ಯಕ್ಷರ ಆಯ್ಕೆ: ಪರಮೇಶ್ವರ್ ನಿವಾಸದಲ್ಲಿ ಮಹತ್ವದ ಸಭೆಕೆಪಿಸಿಸಿ ಅಧ್ಯಕ್ಷರ ಆಯ್ಕೆ: ಪರಮೇಶ್ವರ್ ನಿವಾಸದಲ್ಲಿ ಮಹತ್ವದ ಸಭೆ

15 ಕ್ಷೇತ್ರಗಳ ಉಪ ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರು. ಈ ಎರಡೂ ರಾಜೀನಾಮೆಗೆ ಹೈಕಮಾಂಡ್ ಅನುಮೋದನೆ ನೀಡಲಿದೆಯೇ? ಕಾದು ನೋಡಬೇಕು.

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಮೂರು ಹೆಸರು ಶಿಫಾರಸು; ಯಾರವರು?ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಮೂರು ಹೆಸರು ಶಿಫಾರಸು; ಯಾರವರು?

ಸಭೆಯ ಬಳಿಕ ಸಿದ್ದರಾಮಯ್ಯಗೆ ಕರೆ

ಸಭೆಯ ಬಳಿಕ ಸಿದ್ದರಾಮಯ್ಯಗೆ ಕರೆ

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ರಾತ್ರಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್, ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಜೊತೆ ಸಭೆ ನಡೆಸಿದರು. ಈ ಸಭೆಯ ಬಳಿಕ ಸಿದ್ದರಾಮಯ್ಯಗೆ ಕರೆ ಮಾಡಲಾಗಿದ್ದು, ಸೋಮವಾರ ಭೇಟಿ ಮಾಡುವಂತೆ ಸೂಚನೆ ನೀಡಲಾಗಿದೆ.

10 ದಿನಗಳ ವಿದೇಶ ಪ್ರವಾಸ

10 ದಿನಗಳ ವಿದೇಶ ಪ್ರವಾಸ

ಮಂಗಳವಾರದಿಂದ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ 10 ದಿನಗಳ ಕಾಲ ವಿದೇಶ ಪ್ರವಾವನ್ನು ಕೈಗೊಳ್ಳಲಿದ್ದಾರೆ. ಅದಕ್ಕೂ ಮೊದಲು ಸಿದ್ದರಾಮಯ್ಯ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದು, ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಅಳೆದುತೂಗಿ ಲೆಕ್ಕಾಚಾರ

ಅಳೆದುತೂಗಿ ಲೆಕ್ಕಾಚಾರ

ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಎಚ್ಚರಿಕೆಯ ನಡೆಯನ್ನು ಅನುಸರಿಸುತ್ತಿದೆ. ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅಧ್ಯಕ್ಷರಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ಉತ್ತರ ಕರ್ನಾಟಕ ಭಾಗದ ನಾಯಕರ ಹೆಸರು ಕೇಳಿ ಬರುತ್ತಿದೆ. ಆದ್ದರಿಂದ, ಕೆಪಿಸಿಸಿ ಪಟ್ಟ ಯಾರಿಗೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ವರದಿ ಬಳಿಕ ತೀರ್ಮಾನ ಬದಲಾವಣೆ

ವರದಿ ಬಳಿಕ ತೀರ್ಮಾನ ಬದಲಾವಣೆ

ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಕರ್ನಾಟಕದ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಣೆ ಮಾಡಲುಮಧುಸೂದನ್ ಮಿಸ್ತ್ರಿ, ಭಕ್ತ ಚರಣದಾಸ್ ರಾಜ್ಯಕ್ಕೆ ಆಗಮಿಸಿದ್ದರು. ಇವರು ಸೋನಿಯಾ ಗಾಂಧಿಗೆ ನೀಡುವ ವರದಿ ಹಿನ್ನಲೆಯಲ್ಲಿ ಹೈಕಮಾಂಡ್ ಸಿದ್ದರಾಮಯ್ಯ ಅಭಿಪ್ರಾಯವನ್ನು ಪಡೆಯಲು ಮುಂದಾಗಿದೆ. ಈ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ.

English summary
Opposition leader of Karnataka Siddaramaiah will meet party high command leaders on Monday, January 13, 2020. After meeting with Siddaramaiah high command may announce KPCC president.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X