ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆ : ಕಾಂಗ್ರೆಸ್‌ ನಾಯಕರಿಗೆ ಹೈಕಮಾಂಡ್ ಬುಲಾವ್!

By Gururaj
|
Google Oneindia Kannada News

ಬೆಂಗಳೂರು, ಮೇ 24 : ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆರಂಭವಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಿದೆ. ಮೇ 26ರಂದು ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ, ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ಮಹತ್ವದ ಸಭೆ ನಡೆಯಲಿದೆ.

ಗುರುವಾರದ ಬದಲು ಶುಕ್ರವಾರ ವಿಶ್ವಾಸ ಮತ ಯಾಚನೆಗುರುವಾರದ ಬದಲು ಶುಕ್ರವಾರ ವಿಶ್ವಾಸ ಮತ ಯಾಚನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲಿದ್ದಾರೆ.

Congress High Command calls Karnataka leaders to Delhi

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಮೇ 26ರ ಭಾನುವಾರ ನಾಯಕರು ಸಭೆ ನಡೆಸಲಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ಗೆ 22, ಜೆಡಿಎಸ್‌ಗೆ 12 ಸಚಿವ ಸ್ಥಾನಗಳು ದೊರೆಯಲಿವೆ.

ಕಾಂಗ್ರೆಸ್ - ಜೆಡಿಎಸ್ ಅಧಿಕಾರ ಹಂಚಿಕೆ ಅಂತಿಮ, 'ಕೈ'ಗೆ ಸಿಂಹ ಪಾಲುಕಾಂಗ್ರೆಸ್ - ಜೆಡಿಎಸ್ ಅಧಿಕಾರ ಹಂಚಿಕೆ ಅಂತಿಮ, 'ಕೈ'ಗೆ ಸಿಂಹ ಪಾಲು

ಯಾವ-ಯಾವ ಶಾಸಕರು ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ಸೇರಬೇಕು? ಎಂದು ದೆಹಲಿಯಲ್ಲಿ ಚರ್ಚೆ ನಡೆಯಲಿದೆ. ಸೋಮವಾರ ಅಥವ ಮಂಗಳವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ.

ಎಚ್.ಡಿ.ಕುಮಾರಸ್ವಾಮಿ ಅವರು ಮೇ 25ರ ಶುಕ್ರವಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ. ಬಳಿಕ ಸ್ಪೀಕರ್ ಆಯ್ಕೆ ನಡೆಯಲಿದೆ. ಜೆಡಿಎಸ್‌ ಪಕ್ಷದಲ್ಲೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದ ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ.

English summary
The High Command has summoned the Congress leaders of the Karnataka to the Delhi after Congress JD(S) alliance government come to power in state. H.D.Kumaraswamy take oath as Chief Minister of Karnataka on May 23, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X