Lok Sabha Election 2024: ಕಾಂಗ್ರೆಸ್ ಪಟ್ಟಿ ಬಿಡುಗಡೆ: ಆರು ಮಹಿಳಾ ಮಣಿಗಳನ್ನ ಕಣಕ್ಕಿಳಿಸಿದ ಹೈಕಮಾಂಡ್
ಬೆಂಗಳೂರು, ಮಾರ್ಚ್ 22: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಬಹುಮತ ಪಡೆದು ಗೆದ್ದು ಬಿಗಿರುವ ಕಾಂಗ್ರೆಸ್, ಲೋಕಸಮರಕ್ಕೆ ಸಕಲ ಸಿದ್ದತೆಯನ್ನ ನಡೆಸುತ್ತಿದೆ. ಇತ್ತ ಕಾಂಗ್ರೆಸ್ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಇತ್ತ ಕಮಲ-ದಳ ನಾಯಕರ ಪ್ರತಿತಂತ್ರ ರೂಪಿಸಲು ಕಾಂಗ್ರೆಸ್ ಮುಂದಾಗಿದೆ.
ಹೌದು, ಕಾಂಗ್ರೆಸ್ ಹೈಕಮಾಂಡ್ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಫೈಕಿ ಮೊದಲ ಪಟ್ಟಿಯಲ್ಲಿ ಏಳು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನ ಘೋಷಿಸಿತ್ತು. ಗುರುವಾರ ರಾತ್ರಿ ಬಿಡುಗಡೆಯಾದ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದ್ದು, ತೀವ್ರ ಗೊಂದಲವಿರುವ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನ ಅಂತಿಮಗೊಳಿಸದೇ ಬಾಕಿ ಉಳಿಸಿಕೊಂಡಿದೆ. ಇನ್ನೂ ವಿಶೇಷ ಎಂದರೇ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಮಹಿಳಾ ಮಣಿಗಳಿಗೆ ಹೆಚ್ಚಿನ ಆಧ್ಯತೆಯನ್ನ ನೀಡಿದೆ.

ಮೊದಲ ಪಟ್ಟಿಯಲ್ಲಿ ಗೀತಾ ಶಿವರಾಜ್ ಕುಮಾರ್ ಸೇರಿದಂತೆ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆಗೊಳಿಸಿತ್ತು. ಇದೀಗ ಗುರುವಾರ ಬಿಡುಗಡೆಯಾದ 17 ಕ್ಷೇತ್ರಗಳ ಪೈಕಿ ದಾವಣಗೆರೆಯಿಂದ ಸಚಿವ ಎಸ್ ಮಲ್ಲಿಕಾರ್ಜುನ್ ಅವರ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್, ಬಾಗಲಕೋಟೆಯಿಂದ ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತಾ ಪಾಟೀಲ, ಬೆಂಗಳೂರು ದಕ್ಷಿಣದಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ, ಉತ್ತರ ಕನ್ನಡದಿಂದ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳಕರ್ ಅವರ ಪತ್ನಿ ಡಾ.ಅಂಜಲಿ ನಿಂಬಾಳಕರ್, ಚಿಕ್ಕೋಡಿಯಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್ ನೀಡಲಾಗಿದೆ.
ಆರು ಮಹಿಳೆಯಲಿರಿಗೆ ಟಿಕೆಟ್ ಕೊಟ್ಟ ಕಾಂಗ್ರೆಸ್
* ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ
* ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್
* ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ
* ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್
* ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ
* ಶಿವಮೊಗ್ಗ ಲೋಕಸಭಾ ಕ್ಷೇತ್ರ-ಗೀತಾ ಶಿವರಾಜ್ ಕುಮಾರ್
ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
1.ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್
2.ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ
3.ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ
4.ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್
5.ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ
6.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್
7.ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ
8.ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ
9.ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ
10.ಬೆಂಗಳೂರು ಸೆಂಟ್ರಲ್ ಕ್ಷೇತ್ರ-ಮನ್ಸೂರ್ ಅಲಿಖಾನ್
11.ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್
12.ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ
13.ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್
14.ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ
15.ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್ ಜಿ ನಾಯಕ್
16.ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್
17. ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ
18. ಶಿವಮೊಗ್ಗ ಲೋಕಸಭಾ ಕ್ಷೇತ್ರ-ಗೀತಾ ಶಿವರಾಜ್ ಕುಮಾರ್
19. ತುಮಕೂರು ಲೋಕಸಭಾ ಕ್ಷೇತ್ರ -ಎಸ್ಪಿ ಮುದ್ದಹನುಮೇಗೌಡ
20. ಮಂಡ್ಯ ಲೋಕಸಭಾ ಕ್ಷೇತ್ರ-ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
21.ಹಾಸನ ಲೋಕಸಭಾ ಕ್ಷೇತ್ರ- ಶ್ರೇಯಸ್ ಪಟೇಲ್
22. ಬೆಂಗಳೂರು ಗ್ರಾಮಾಂತರಲೋಕಸಭಾ ಕ್ಷೇತ್ರ -ಡಿಕೆ ಸುರೇಶ್
23. ವಿಜಯಪುರ ಲೋಕಸಭಾ ಕ್ಷೇತ್ರ- ಎಚ್ಆರ್ ಅಲ್ಗೂರ್
24. ಹಾವೇರಿ ಲೋಕಸಭಾ ಕ್ಷೇತ್ರ-ಆನಂದ್ ಸ್ವಾಮಿ ಗಡ್ಡ ದೇವರಮಠ












Click it and Unblock the Notifications