Lok Sabha Election 2024: ಕಣ್ಣೀರಿಗೂ ಕರಗದ ಹೈಕಮಾಂಡ್ : ವೀಣಾ ಕಾಶಪ್ಪನವ ರಿಗೆ ಟಿಕೆಟ್ ಮಿಸ್ !
ಬೆಂಗಳೂರು, ಮಾರ್ಚ್ 21: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ ಮೊದಲ ಪಟ್ಟಿಯಲ್ಲಿ ಏಳು ಜನ ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಿದ್ದು, ಇದೀಗ ಮೂರನೇ ಪಟ್ಟಿಯಲ್ಲಿ 17 ಜನ ಅಭ್ಯರ್ಥಿಗಳ ಪಟ್ಟಿಯನ್ನ ಕಾಂಗ್ರೆಸ್ ಬಿಡುಗಡೆ ಮಾಡಿದೆ.
ಹೌದು, ಲೋಕಸಭೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಸಚಿವರ ಮಕ್ಕಳಿಗೆ ಮಣೆಹಾಕಲಾಗಿದೆ. ವೆಂಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಸಂಬಂಧಿಗೂ ಸಹ ಟಿಕೆಟ್ ನೀಡಲಾಗಿದ್ದು, ಟಿಕೆಟ್ ಗಾಗಿ ಕಣ್ಣೀರು ಸುರಿಸಿದರು ಸಹ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡದೇ ಸಚಿವರ ಮಗಳಿಗೆ ಮಣೆ ಹಾಕಿದೆ.

ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಸಚಿವ ಶಿವಾನಂದ ಪಾಟೀಲ್ ಅವರ ಪುತ್ರು ಸಂಯುಕ್ತ ಶಿವಾನಂದ ಪಾಟೀಲ್ ಅವರಿಗೆ ಕಾಂಗ್ರೆಸ್ ಹೈಕಮಾಂಡ ಟಿಕೆಟ್ ನೀಡಲಾಗಿದೆ. ಮೊನ್ನೆಯಷ್ಟೇ ಟಿಕೆಟ್ ವಿಚಾರವಾಗಿ ದೆಹಲಿಯ ಮಲ್ಲಿಕಾರ್ಜುನ್ ಖರ್ಗೆ ಅವರ ನಿವಾಸದ ಬಳಿ ವೀಣಾ ಕಾಶಪ್ಪನವರ್ ಅವರು ಕಣ್ಣೀರು ಹಾಕಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ವೀಣಾ ಕಾಶಪ್ಪನವರ್ ಅವರ ಹೆಸರು ಕೈ ಬಿಟ್ಟಿದ್ದಾರೆ ಎನ್ನುವ ಕುರಿತು ಕಾಂಗ್ರೆಸ್ ನಾಯಕರ ಮನೆ ಮುಂದೆಯೇ ಕಣ್ಣೀರು ಹಾಕಿ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಸಚಿವ ಪುತ್ರಿಗೆ ಟಿಕೆಟ್ ನೀಡಿದೆ.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ವೀಣಾ ಕಾಶಪ್ಪನವರ್ ಅವರು ಕಳೆದ ಐದು ವರ್ಷದಿಂದ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರೂ ಕೂಡ ಟಿಕೆಟ್ ಕೈ ತಪ್ಪಿರುವುದರಿಂದ ಭಾವುಕರಾಗಿದ್ದಾರೆ. ಹೈಕಮಾಂಡ್ ನಾಯಕರ ಭೇಟಿ ಬಳಿಕ ಕಣ್ಣೀರಿಟ್ಟ ಅವರು, ಭಾವುಕರಾಗಿ ಪಕ್ಷದ ನಾಯಕರಿಗೆ ಕೆಲವು ಪ್ರಶ್ನೆಗಳನ್ನು ಕೇಳಿದರು.
ಇನ್ನೂ ನಿನ್ನೆಯಷ್ಟೇ ಹೈಕಮಾಂಡ್ ಭೇಟಿ ಬಳಿಕ ವೀಣಾ ಕಾಶಪ್ಪನವರ್ ಅವರು ಮಾಧ್ಯಮಗಳ ಮುಂದೆ ಅಸಮಾಧಾನವನ್ನ ಹೊರಹಾಕಿದ್ದಾರೆ. ನನಗೆ ಗೊತ್ತಾಗಬೇಕು ಯಾವ ಮಾನದಂಡದ ಮೇಲೆ ನನ್ನನ್ನು ಕೈ ಬಿಟ್ಟಿದ್ದಾರೆ. ಕ್ಷೇತ್ರದಲ್ಲಿ ಸಕ್ರಿಯವಾಗಿಲ್ಲದೇ ಇದ್ದರೆ, ಕಳೆದ ಬಾರಿ ಠೇವಣಿ ಕಳೆದುಕೊಂಡಿದ್ದರೆ, ಇಲ್ಲಾ, ಕ್ಷೇತ್ರದ ಜನ ನನ್ನನ್ನು ಗುರುತಿಸದೇ ಇದ್ದರೆ ಹೀಗೆ ಏನಾದರೂ ಕಾರಣ ಬೇಕಲ್ಲ.. ನನಗೆ ಟಿಕೆಟ್ ನೀಡದರೆ ಇರಲು ಏನು ಕಾರಣ ಎಂದು ಕಾಂಗ್ರೆಸ್ ಹಿರಿಯ ನಾಯಕರಿಗೆ ಪ್ರಶ್ನಿಶಿದ್ದಾರೆ.
ಕಳೆದ ಐದು ವರ್ಷಗಳಿಂದ ಕ್ಷೇತ್ರದ ಜನರ ಜೊತೆಗೆ ನಾನಿದ್ದೇನೆ. ಅವರ ಕಷ್ಟ ಸುಖಗಳಿಗೆ ಆಗಿದ್ದೇನೆ. ಎಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಲೋಕಸಭಾ ವ್ಯಾಪ್ತಿಯಲ್ಲಿ ಬರು ಎಂಟು ವಿಧಾನಸಭಾ ಕ್ಷೇತ್ರದಲ್ಲಿಯೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ವಿಧಾನಸಭಾ ಚುನಾವಣೆಯಲ್ಲಿ ಅವರ ಪರ ಕೆಲಸ ಮಾಡಿ ಇಂದು ಶಾಸಕರೇ ಬೇಡ ಎನ್ನುತ್ತಿದ್ದಾರೆ ಎಂದರೆ, ಅವರನ್ನೇ ಕೇಳಬೇಕು ಯಾವ ಮಾನದಂಡದ ಮೇಲೆ ನಾನು ಬೇಡ ಎಂದು ಕೇಳಬೇಕು ಎಂದು ವೀಣಾ ಕಾಶಪ್ಪನವರ್ ತೀವ್ರ ಬೇಸರ ವ್ಯಕ್ತಪಡಿಸಿದರು.












Click it and Unblock the Notifications