Congress Candidates List : ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್- ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಫೈನಲ್ ಮಾಡಿದ ಹೈಕಮಾಂಡ್?
ಬೆಂಗಳೂರು, ಮಾರ್ಚ್ 23: ಲೋಕಮರದಲ್ಲಿ ದಿನಗಣನೆ ಆರಂಭವಾಗಿದ್ದು, ಚುನಾವಣಾ ಕಾವು ದಿನದಿಂದಿ ದಿನಕ್ಕೆ ಹೆಚ್ಚಾಗುತ್ತಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ ಏಳು ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದು, ಎರಡನೇ ಪಟ್ಟಿಯಲ್ಲಿ 17 ಅಭ್ಯರ್ಥಿಗಳ ಹೆಸರನ್ನ ಬಿಡುಗಡೆ ಮಾಡಿದೆ. ಆದರೆ, ಬಾಕಿ ಉಳಿದ ನಾಲ್ಕು ಕ್ಷೇತ್ರವೇ ಕಾಂಗ್ರೆಸ್ ದೊಡ್ಡ ತಲೆನೋವಾಗಿದೆ.
ಹೌದು, ಲೋಕಸಭಾ ಚುಣಾವಣೆ ಹಿನ್ನೆಲೆ ರಾಜ್ಯದಲ್ಲಿ 20 ಕ್ಷೇತ್ರಗಳನ್ನ ಗೆಲ್ಲುವ ಗುರಿ ಹಾಕಿಕೊಂಡಿರುವ ಕಾಂಗ್ರೆಸ್ ಅಳೆದು ತೂಗಿ ಟಿಕೆಟ್ ನೀಡುತ್ತಿದೆ. ಅಲ್ಲದೇ ಬಹುತೇಕ ಕುಟುಂಬಸ್ಥರಿಗೆ ಟಿಕೆಟ್ ನೀಡಿದ್ದು, ಬಾಕಿ ಉಳಿದ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿಯಲ್ಲಿ ಟಿಕೆಟ್ ಗಾಗಿ ತೀವ್ರ ಫೈಪೋಟಿ ಏರ್ಪಟ್ಟಿದ್ದು, ಕಾಂಗ್ರೆಸ್ ಕೊನೆಗೂ ಅಭ್ಯರ್ಥಿಗಳನ್ನ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ.

ಲೋಕಸಭೆ ಚುನಾವಣೆಯಲ್ಲಿ ಬಾಕಿ ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಕಾಂಗ್ರೆಸ್ ನಾಯಕರು ಫೈನಲ್ ಮಾಡಿದ್ದಾರೆ. ತೀವ್ರ ಪೈಪೋಟಿ ಇರುವ ಮತ್ತು ಆಕಾಂಕ್ಷಿಗಳು ಹೆಚ್ಚಾಗಿರುವ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳಿಗೆ ತೀವ್ರ ಫೈಪೋಟಿ ಏರ್ಪಟ್ಟಿದೆ. ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ಹೇಳಲಾಗಿದೆ.
ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಎರಡು ಪಟ್ಟಿಯಲ್ಲಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಬಾಕಿ ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕೂಡ ಅಂತಿಮಗೊಳಿಸಿದ್ದು, ಕೋಲಾರ ಕ್ಷೇತ್ರಕ್ಕೆ ತಮ್ಮ ಅಳಿಯನಿಗೆ ಟಿಕೆಟ್ ಕೊಡುವಂತೆ ಸಚಿವ ಕೆ ಹೆಚ್ ಮುನಿಯಪ್ಪ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಕೋಲಾರ ಲೋಕಸಭಾ ಕ್ಷೇತ್ರದಿಂದ ಬಹುತೇಕ ಎಲ್ ಹನುಮಂತಯ್ಯ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇನ್ನೂ ಎರಡನೇ ಪಟ್ಟಿಯಲ್ಲಿ ಐದು ಜನ ಮಂತ್ರಿಗಳ ಮಕ್ಕಳಿಗೆ ಹೈಕಮಾಂಡ್ ಟಿಕೆಟ್ ನೀಡಿದೆ. ಈ ನಿಟ್ಟಿನಲ್ಲಿ ಚಾಮರಾಜನಗರ ಕ್ಷೇತ್ರಕ್ಕೆ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಅವರಿಗೆ ಹೈಕಮಾಂಡ್ ಮಣೆ ಹಾಕಿದೆ. ಈ ಹಿಂದೆ ಚಾಮರಾಜನಗರ ಕ್ಷೇತ್ರದಿಂದ ಸಚಿವ ಮಹದೇವಪ್ಪ ಅವರಿಗೆ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚನೆ ನೀಡಿತ್ತು. ಆದರೆ, ಮಹದೇವಪ್ಪ ಅವರು ಮಗನಿಗೆ ಟಿಕೆಟ್ ನೀಡುವಂತೆ ಒತ್ತಡ ಹಾಕಿದ್ದು, ಅಂತಿಮವಾಗಿ ಸುನಿಲ್ ಬೋಸ್ ಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾದ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್‌ಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಫೈಪೋಟಿ ಜೋರಾಗಿದ್ದು, ಕಾಂಗ್ರೆಸ್ ನಿಂದ ರಕ್ಷಾ ರಾಮಯ್ಯ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಹಾಗೂ ಶಿವ ಶಂಕರ್ ರೆಡ್ಡಿ ಅವರ ನಡುವೆ ತೀವ್ರ ಫೈಪೋಟಿ ಏರ್ಪಟ್ಟಿದ್ದು, ಕಾಂಗ್ರೆಸ್ ಹೈಕಮಾಂಡ್ ಯುವ ನಾಯಕ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಲಿದೆ ಎಂದು ಹೇಳಲಾಗಿದೆ. ಇನ್ನೂ ಬಳ್ಳಾರಿಗೆ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ತುಕಾರಾಂ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ.
ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
1.ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್
2.ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ
3.ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ
4.ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್
5.ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ
6.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್
7.ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ
8.ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ
9.ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ
10.ಬೆಂಗಳೂರು ಸೆಂಟ್ರಲ್ ಕ್ಷೇತ್ರ-ಮನ್ಸೂರ್ ಅಲಿಖಾನ್
11.ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್
12.ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ
13.ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್
14.ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ
15.ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್ ಜಿ ನಾಯಕ್
16.ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್
17. ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ
18. ಶಿವಮೊಗ್ಗ ಲೋಕಸಭಾ ಕ್ಷೇತ್ರ-ಗೀತಾ ಶಿವರಾಜ್ ಕುಮಾರ್
19. ತುಮಕೂರು ಲೋಕಸಭಾ ಕ್ಷೇತ್ರ -ಎಸ್ಪಿ ಮುದ್ದಹನುಮೇಗೌಡ
20. ಮಂಡ್ಯ ಲೋಕಸಭಾ ಕ್ಷೇತ್ರ-ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
21.ಹಾಸನ ಲೋಕಸಭಾ ಕ್ಷೇತ್ರ- ಶ್ರೇಯಸ್ ಪಟೇಲ್
22. ಬೆಂಗಳೂರು ಗ್ರಾಮಾಂತರಲೋಕಸಭಾ ಕ್ಷೇತ್ರ -ಡಿಕೆ ಸುರೇಶ್
23. ವಿಜಯಪುರ ಲೋಕಸಭಾ ಕ್ಷೇತ್ರ- ಎಚ್ಆರ್ ಅಲ್ಗೂರ್
24. ಹಾವೇರಿ ಲೋಕಸಭಾ ಕ್ಷೇತ್ರ-ಆನಂದ್ ಸ್ವಾಮಿ ಗಡ್ಡ ದೇವರಮಠ
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications