ಸಿದ್ದರಾಮಯ್ಯ ಮುಂದೆ ಎರಡು ಆಯ್ಕೆ ಇಟ್ಟ ಕಾಂಗ್ರೆಸ್ ಹೈಕಮಾಂಡ್

Recommended Video

      ಸಿದ್ದರಾಮಯ್ಯಗೆ ಖಡಕ್ ಸಂದೇಶ ರವಾನಿಸಿದ ಹೈಕಮಾಂಡ್. | Siddaramaiah | Oneindia Kannada

      ಬೆಂಗಳೂರು, ಸೆಪ್ಟೆಂಬರ್ 17: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಕಾಂಗ್ರೆಸ್ ಹೈಕಮಾಂಡ್ ಎರಡು ಆಯ್ಕೆಗಳನ್ನಿಟ್ಟಿದೆ.

      ಯಾವುದಾದರೊಂದನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು ಎಂದು ಹೇಳಿರುವುದು ಅವರಿಗೆ ದೊಡ್ಡ ಆಘಾತವಾಗಿದೆ. ಯಾವ ಸ್ಥಾನ ಆಯ್ಕೆ ಮಾಡಿಕೊಂಡರೂ ಕೂಡ ಅವರಿಗೆ ಹಿನ್ನಡೆಯೇ ಆಗಲಿದೆ.

      ರಾಜ್ಯ ಅಸ್ಸೆಂಬ್ಲಿಯಲ್ಲಿ ವಿರೋಧ ಪಕ್ಷ ನಾಯಕನ ಸ್ಥಾನಕ್ಕೆ ಹೆಸರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಬಹುತೇಕ ಅಂತಿಮಗೊಳಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಪತನವಾದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಪಕ್ಷದ ಹಿರಿಯ ನಾಯಕರು ಸಿದ್ದರಾಮಯ್ಯ ವಿರುದ್ಧ ಸೋನಿಯಾ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರಿಗೆ ದೂರು ಕೊಟ್ಟಿದ್ದಾರೆ.

      ಸಿದ್ದರಾಮಯ್ಯ ಊಹೆ ಮಾಡದ ರೀತಿಯಲ್ಲಿ ಶಾಕ್

      ಸಿದ್ದರಾಮಯ್ಯ ಊಹೆ ಮಾಡದ ರೀತಿಯಲ್ಲಿ ಶಾಕ್

      ಎರಡರಲ್ಲಿ ಒಂದಷ್ಟೆ ನಿಮ್ಮ ಪಾಲಿಗೆ ಸಿಗುವುದು. ಯಾವುದು ಬೇಕು ನೀವೇ ತೀರ್ಮಾನ ಮಾಡಿ ಎಂದು ಹೈಕಮಾಂಡ್ ನಿಂದ ಸಿದ್ದರಾಮಯ್ಯರಿಗೆ ಖಡಕ್ ಸಂದೇಶ ರವಾನಿಸಿದೆ ಎಂದು ತಿಳಿದು ಬಂದಿದೆ. ಶಾಸಕಾಂಗ ನಾಯಕ ಸ್ಥಾನ ಅಥವಾ ವಿರೋಧ ಪಕ್ಷ ನಾಯಕನ ಸ್ಥಾನ ಯಾವುದಾದರೂ ಒಂದು ಎಂದು ಆಯ್ಕೆ ಇಟ್ಟಿದ್ದಾರೆ.

      ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಲಾಬಿ

      ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಲಾಬಿ

      ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ದೆಹಲಿಗೆ ತೆರಳಿ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಲಾಬಿ ಮಾಡಿದ್ದರಂತೆ. ಈಗ ವಿಪಕ್ಷ ಸ್ಥಾನಕ್ಕೆ ಲಾಬಿ ವಿಚಾರ ತಿಳಿಯುತ್ತಿದ್ದಂತೆ ಹೈಕಮಾಂಡ್ ಸಿದ್ದರಾಮಯ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಎರಡೆರಡು ಸ್ಥಾನಗಳನ್ನು ಒಬ್ಬರಿಗೆ ನೀಡಲು ಸಾಧ್ಯವಿಲ್ಲ ಎಂದು ಹೈಕಮಾಂಡ್ ಹೇಳಿದೆ.

      ಯಾವುದಾದರೊಂದು ಸ್ಥಾನ ಅನಿವಾರ್ಯ

      ಯಾವುದಾದರೊಂದು ಸ್ಥಾನ ಅನಿವಾರ್ಯ

      ಚೆಂಡು ಸಿದ್ದರಾಮಯ್ಯರ ಅಂಗಳದಲ್ಲಿದ್ದು, ಎರಡು ಸ್ಥಾನಗಳಲ್ಲಿ ಒಂದನ್ನು ಒಪ್ಪಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಯಾವುದೇ ಒಂದು ಹುದ್ದೆಯನ್ನು ಒಪ್ಪಿಕೊಂಡರೂ ಸಿದ್ದರಾಮಯ್ಯರಿಗೆ ಹಿನ್ನಡೆಯಾಗುವ ಸಾಧ್ಯತೆಗಳಿವೆ.

      ಒಂದು ಸ್ಥಾನ ಒಪ್ಪಿಕೊಂಡರೆ ಮತ್ತೊಂದನ್ನು ಕಳೆದುಕೊಳ್ಳಲಿದ್ದಾರೆ. ಹೈ ಕಮಾಂಡ್ ನಿಲುವಿನಿಂದ ಗೊಂದಲಕ್ಕೊಳಗಾಗಿರುವ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದ ಮೇಲೆ ಒಲವು ಹೊಂದಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

      ಸಿದ್ದರಾಮಯ್ಯ ವಿಪಕ್ಷ ನಾಯಕರಾದರೆ ಶಾಂಸಕಾಂಗ ಪಕ್ಷದ ನಾಯಕ?

      ಸಿದ್ದರಾಮಯ್ಯ ವಿಪಕ್ಷ ನಾಯಕರಾದರೆ ಶಾಂಸಕಾಂಗ ಪಕ್ಷದ ನಾಯಕ?

      ಸಿದ್ದರಾಮಯ್ಯನವರು ವಿಪಕ್ಷ ನಾಯಕರಾದ್ರೆ ಶಾಸಕಾಂಗ ಪಕ್ಷದ ನಾಯಕ ಯಾರಾಗ್ತಾರೆ ಎಂಬ ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ. ವಿಪಕ್ಷ ನಾಯಕನ ಸ್ಥಾನದ ಮೇಲೆ ಮಾಜಿ ಡಿಸಿಎಂ ಜಿ. ಪರಮೇಶ್ವರ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆರಂಭದ ದಿನಗಳಲ್ಲಿ ಕಣ್ಣಿಟ್ಟಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ಇಡಿ ಬಂಧನದಲ್ಲಿರುವ ಡಿ.ಕೆ.ಶಿವಕುಮಾರ್ ಹೆಸರು ಪಟ್ಟಿಯಿಂದ ಕೈ ಬಿಡಲಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+