ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಸಿಸಿ ಅಧ್ಯಕ್ಷರ ನೇಮಕ: ಹೌದೊ ಹುಲಿಯಾ ಎಂದ ಕಾಂಗ್ರೆಸ್ ಹೈಕಮಾಂಡ್!

|
Google Oneindia Kannada News

ಬೆಂಗಳೂರು, ಮಾ. 09: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ಕೊಟ್ಟು 3 ತಿಂಗಳುಗಳ ಬಳಿಕವೂ ನೂತನ ಅಧ್ಯಕ್ಷರನ್ನು ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ಧೈರ್ಯ ತೋರಿಸುತ್ತಿಲ್ಲ. ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಸ್ಥಾನಕ್ಕೆ ಹಿಂದೆಂದಿಗಿಂತಲೂ ಈಗ ಹೆಚ್ಚಿನ ಪೈಪೋಟಿ ಶುರುವಾಗಿದೆ. ಇದೇ ಕಾಂಗ್ರೆಸ್ ಹೈಕಮಾಂಡ್‌ಗೂ ತಲೆನೋವಾಗಿದೆ. ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ವಿಳಂಬದ ಕುರಿತು ರಾಜ್ಯ ನಾಯಕರಿಗೆ ತಿಳಿಸಲು ಸ್ವತಃ ಕಾಂಗ್ರೆಸ್ ಹೈಕಮಾಂಡ್ ತನ್ನ ಪ್ರತಿನಿಧಿ ಕಳಿಸಿತ್ತು.

Recommended Video

Siddaramaiah meets and greets BSY on his birthday | Yedyurappa | Siddaramaiah | Oneindia Kannada

ಕಳೆದ ಒಂದ ವಾರದ ಹಿಂದೆ ರಾಜ್ಯಕ್ಕೆ ಬಂದಿದ್ದ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಪ್ರತಿಪಕ್ಷ ನಾಯಕ ಗುಲಾಂ ನಬೀ ಆಜಾದ್ ಅವರು ಕಾಂಗ್ರೆಸ್ ಪಕ್ಷದ ಪ್ರಮುಖ 6 ರಾಜ್ಯ ನಾಯಕರನ್ನು ಭೇಟಿ ಮಾಡಿ ಹೈಕಮಾಂಡ್ ಅಭಿಪ್ರಾಯವನ್ನು ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸೂಚಿಸುವವರನ್ನು ನೇಮಕ ಮಾಡಬೇಕು ಅಥವಾ ಅವರನ್ನು ಒಪ್ಪಿಸಿದ ಬಳಿಕ ನೇಮಕ ಮಾಡಬೇಕು.

ಮಾಜಿ ಸಿಎಂ ಸಿದ್ದರಾಮಯ್ಯ ಮೃದುಧೋರಣೆ ಸಿಎಂ ಯಡಿಯೂರಪ್ಪರಿಗೆ, ಬಿಜೆಪಿಗಲ್ಲ!ಮಾಜಿ ಸಿಎಂ ಸಿದ್ದರಾಮಯ್ಯ ಮೃದುಧೋರಣೆ ಸಿಎಂ ಯಡಿಯೂರಪ್ಪರಿಗೆ, ಬಿಜೆಪಿಗಲ್ಲ!

ಸಿದ್ದರಾಮಯ್ಯ ಅವರನ್ನು ಕಡೆಗಣಿಸಿ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವುದು ಅಸಾಧ್ಯ ಎಂಬುದನ್ನು ಡಿ ಕೆ ಶಿವಕುಮಾರ್ ಸೇರಿದಂತೆ ಇತರ ಕಾಂಗ್ರೆಸ್ ನಾಯಕರಿಗೆ ಗುಲಾಂ ನಬೀ ಆಜಾದ್ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಹೀಗಾಗಿ ಸಧ್ಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ 'ಹೌದೊ ಹುಲಿಯಾ' ಎನ್ನದೆ ಬೇರೆ ಮಾರ್ಗವಿಲ್ಲ ಎಂಬದು ಸ್ಪಷ್ಟವಾಗಿದೆ.

ಕಾಂಗ್ರೆಸ್ ಪಕ್ಷದ 6 ರಾಜ್ಯ ನಾಯಕರನ್ನು ಭೇಟಿ ಮಾಡಿದ್ದ ಆಜಾದ್

ಕಾಂಗ್ರೆಸ್ ಪಕ್ಷದ 6 ರಾಜ್ಯ ನಾಯಕರನ್ನು ಭೇಟಿ ಮಾಡಿದ್ದ ಆಜಾದ್

ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಬೆಂಗಳೂರಿಗೆ ಬಂದು ಕೆಪಿಸಿಸಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ 6 ಪ್ರಮುಖ ರಾಜ್ಯ ನಾಯಕರನ್ನು ಭೇಟಿ ಮಾಡಿದ್ದಾರೆ. ಎಲ್ಲರನ್ನೂ ಪ್ರತ್ಯೇಕವಾಗಿ ಭೇಟಿ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಭಿಪ್ರಾಯ ತಿಳಿಸಿದ್ದಾರೆ. ಆದರೆ ಅದೇ ಸಂದರ್ಭದಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಎರಡು ಬಾರಿ ಭೇಟಿ ಮಾಡಿದ್ದಾರೆ. ಅದಾದ ಬಳಿಕ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಿರ್ಧಾರ ಅಂತಿಮ ಎಂದು ಸುಮ್ಮನಾಗಿದ್ದಾರೆ.

ಕೇಂದ್ರ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಜೊತೆಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ. ಜಿ ಪರಮೇಶ್ವರ್, ಡಿ ಕೆ ಶಿವಕುಮಾರ್​, ವೀರಪ್ಪ ಮೊಯ್ಲಿ, ಎಚ್ ​​ಕೆ ಪಾಟೀಲ್​​​, ದಿನೇಶ್​​ ಗುಂಡೂರಾವ್​​ ಹಾಗೂ ಈಶ್ವರ್​ ಖಂಡ್ರೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಸಿದ್ದರಾಮಯ್ಯ ನಡೆ ನಮಗೆ ನಿಗೂಢವಾಗಿದೆ ಎಂದ ಆಜಾದ್

ಸಿದ್ದರಾಮಯ್ಯ ನಡೆ ನಮಗೆ ನಿಗೂಢವಾಗಿದೆ ಎಂದ ಆಜಾದ್

ಸಿದ್ದರಾಮಯ್ಯ ಅವರನ್ನು ಹೊರತು ಪಡಿಸಿ ಆರು ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿ ಮಾಡಿದ್ದ ಗುಲಂನಬಿ ಆಜಾದ್​​ ಅವರು ಸಧ್ಯ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡಿದ್ರೆ ಪಕ್ಷಕ್ಕೆ ಗಂಡಾಂತರವಿದೆ ಎಂದು ತಿಳಿಹೇಳಿದ್ದಾರೆ. ನಾನು ಸೋನಿಯಾ ಗಾಂಧಿ ಅವರ ಪ್ರತಿನಿಧಿಯಾಗಿ ಬೆಂಗಳೂರಿಗೆ ಬಂದಿದ್ದೇನೆ. ಸದ್ಯ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡಿದರೆ ಪಕ್ಷಕ್ಕೆ ಗಂಡಾಂತರ ಇದೆ. ಒಂದು ವೇಳೆ ಸಿದ್ದರಾಮಯ್ಯ ಅವರ ಮಾತು ಮೀರಿ ನೇಮಕ ಮಾಡಿದ್ರೆ ಪಕ್ಷಕ್ಕೆ ಹಾನಿಯಾಗಲಿದೆ. ಅವರ ನಡೆ ನಮಗೆ ನಿಗೂಢವಾಗಿದೆ. ಅವರನ್ನು ಕಡೆಗಣಿಸಿದ್ರೆ ರಾಜ್ಯ ಕಾಂಗ್ರೆಸ್ ಎರಡು ಭಾಗವಾಗುವ ಸಾಧ್ಯತೆಯಿದೆ. ಸಿದ್ದರಾಮಯ್ಯರನ್ನು ಪರಿಗಣಿಸಲಿಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲಿ ಉಳಿಗಾಲವಿಲ್ಲ. ಹೀಗಾಗಿ ಎಲ್ಲರಿಗೂ ಮನವಿ ಮಾಡುತ್ತೇನೆ. ಕೆಪಿಸಿಸಿ ವಿಚಾರದಲ್ಲಿ ಹೈಕಮಾಂಡ್​​ ನಿರ್ಧಾರಕ್ಕೆ ಬದ್ಧರಾಗಿ ಎಂದು ಗುಲಾಂ ನಬಿ ಆಜಾದ್ ಅವರು ಡಿಕೆಶಿ, ಪರಮೇಶ್ವರ್, ಮೊಯಿಲಿ, ಪಾಟೀಲ್, ಖಂಡ್ರೆ, ಗುಂಡೂರಾವ್ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸಿದ್ದರಾಮಯ್ಯ ಬಿಜೆಪಿಗೆ; ಕೇಂದ್ರ ಸಚಿವ ಸ್ಥಾನ!ಸಿದ್ದರಾಮಯ್ಯ ಬಿಜೆಪಿಗೆ; ಕೇಂದ್ರ ಸಚಿವ ಸ್ಥಾನ!

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ರಾಜ್ಯ ಕೈ ನಾಯಕರು

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ರಾಜ್ಯ ಕೈ ನಾಯಕರು

ಕಾಂಗ್ರೆಸ್ ಕೇಂದ್ರ ನಾಯಕ ಗುಲಾಂ ನಬಿ ಆಜಾದ್ ಅವರೊಂದಿಗೆ ಚರ್ಚಿಸಿದ ಬಳಿಕ ಹೈಕಮಾಂಡ್ ನಿರ್ಧಾರಕ್ಕೆ ಬದ್ದವಿರುವುದಾಗಿ ರಾಜ್ಯ ಕಾಂಗ್ರೆಸ್ ನಾಯಕರು ಮಾತು ಕೊಟ್ಟಿದ್ದಾರೆ. ಆದ್ದರಿಂದ ಬಜೆಟ್ ಅಧಿವೇಶನದ ಬಳಿಕವೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಮಾಡುವುದಾಗಿ ಆಜಾದ್ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಭರವಸೆ ಕೊಟ್ಟಿದ್ದಾರೆ. ಅದಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಕೂಡ ಒಪ್ಪಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಅಭಿಪ್ರಾಯದಂತೆಯೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತಿದೆಯಾ ಎಂಬ ಚರ್ಚೆಗಳು ಕಾಂಗ್ರೆಸ್ ವಲಯದಲ್ಲಿ ನಡೆದಿವೆ.

ಎಂ.ಬಿ. ಪಾಟೀಲ್, ಡಿ.ಕೆ. ಶಿವಕುಮಾರ್ ಮಧ್ಯೆ ಪೈಪೋಟಿ

ಎಂ.ಬಿ. ಪಾಟೀಲ್, ಡಿ.ಕೆ. ಶಿವಕುಮಾರ್ ಮಧ್ಯೆ ಪೈಪೋಟಿ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವರಾದ ಎಂ.ಬಿ. ಪಾಟೀಲ್ ಹಾಗೂ ಡಿ.ಕೆ. ಶಿವಕುಮಾರ್ ಮಧ್ಯೆ ಪೈಪೋಟಿಯಿದೆ. ಸಧ್ಯ ಡಿ.ಕೆ. ಶಿವಕುಮಾರ್ವ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಆದರೆ ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಡಿ.ಕೆ. ಶಿವಕುಮಾರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿದ್ದರಾಮಯ್ಯ ಅವರು ಒಪ್ಪಿರಲಿಲ್ಲ. ಈಗಲೂ ಅಂತಹುದೇ ಪಟ್ಟನ್ನು ಸಿದ್ದರಾಮಯ್ಯ ಅವರು ಹಿಡಿದಿದ್ದಾರೆ ಎಂಬ ಮಾಹಿತಿಯಿದೆ.

ತಮ್ಮ ಆಪ್ತ ಎಂ.ಬಿ. ಪಾಟೀಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನು ಮಾಡುವ ಮೂಲಕ ಲಿಂಗಾಯತ ವಿರೋಧಿ ಹಣೆಪಟ್ಟಿಯಿಂದ ಹೊರಗೆ ಬರಲು ಸಿದ್ದರಾಮಯ್ಯ ಅವರು ಪ್ರಯತ್ನ ನಡೆಸಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕ ದೊಡ್ಡ ಹಿನ್ನಡೆಯಾಗಿತ್ತು. ಹೀಗಾಗಿ ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಮಾತು ಕೇಳುತ್ತಿದೆ. ಹೀಗಾಗಿಯೆ ಕಾಂಗ್ರೆಸ್ ಹೈಕಮಾಂಡ್ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಒಪ್ಪುವ ನಾಯಕರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವುದು ಖಚಿತವಾಗಿದ್ದು, ಆ ಮೂಲಕ ಹೌದೊ ಹುಲಿಯಾ ಎಂದಂತಾಗಿದೆ.

English summary
High Command has considered former CM Siddaramaiah's opinion regarding the appointment of KPCC president and has instructed other leaders to abide by the High Command decision.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X