ಆಪರೇಷನ್ ಹಸ್ತ ಬಲು ಜೋರು; 20 ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಗಾಳ: ಸತೀಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ
ಚಾಮರಾಜನಗರ, ಆಗಸ್ಟ್ 21: 2024 ರ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೂರು ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದೆ. ಇತ್ತ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತದ ಸದ್ದು ಜೋರಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿಗೆ ಇದೀಗ ಶಾಸಕರನ್ನ ಹಿಡಿದಿಟ್ಟುಕೊಳ್ಳುವುದೇ ದೊಡ್ಡ ಚಿಂತೆಯಾಗಿದೆ.
ಹೌದು, ವಿಪಕ್ಷ ನಾಯಕನ ಆಯ್ಕೆ ವಿಳಂಬದ ಕುರಿತು ಸಾಕಷ್ಟು ಗೊಂದಲದಲ್ಲಿರುವ ಬಿಜೆಪಿಗೆ ಆಪರೇಷನ್ ಹಸ್ತದ ಚಿಂತೆ ಎದುರಾಗಿದ್ದು, ಸುಮಾರು 20 ಶಾಸಕರು ಕಾಂಗ್ರೆಸ್ ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಿದ್ದೆಗೆಡಿಸಿದೆ.

ಇನ್ನೂ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಸಚಿವ ಸತೀಶ್ ಜಾರಕಿಹೊಳಿ, ಬಿಜೆಪಿಯವರ ಬಗ್ಗೆ 24 ಗಂಟೆಗಳ ಕಾಲ ಅಲರ್ಟ್ ಆಗಿರಬೇಕು. ಇಲ್ಲದೇ ಹೋದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು. ರಾಜ್ಯ ನಾಯಕರು ಅಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ ಹಾಗೂ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ ಎಂದು ಹೇಳಿದ್ದಾರೆ.
ಸಹೋದರ ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಪಕ್ಷ ಸೆರ್ಪಡೆಯಾಗುತ್ತಾರಾ ಎಂಬ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ತೀರ್ಮಾನ ಕೈಗೊಳ್ಳುತ್ತಾರೆ. ರಾಜಕಾರಣದಲ್ಲಿ ಯಾರು ಶಾಶ್ವತ ಮಿತ್ರರೂ ಅಲ್ಲ ಶತ್ರುಗಳು ಅಲ್ಲಾ ಎಂದು ಹೇಳಿದರು.












Click it and Unblock the Notifications