ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆ ಚುನಾವಣೆ : ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಗೆ ಅಧಿಕೃತ ಒಪ್ಪಿಗೆ

|
Google Oneindia Kannada News

Recommended Video

ಲೋಕಸಭೆ ಚುನಾವಣೆ : ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಗೆ ಅಧಿಕೃತ ಒಪ್ಪಿಗೆ | oneindia Kannada

ಬೆಂಗಳೂರು, ಸೆಪ್ಟೆಂಬರ್ 25 : 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲು ಅಧಿಕೃತ ಒಪ್ಪಿಗೆ ಸಿಕ್ಕಿದೆ. ಜೆಡಿಎಸ್‌ ಜೊತೆ ಮಾತುಕತೆ ನಡೆಸಲು ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಲಾಗಿದೆ.

ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಸೋಮವಾರ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಕಾಂಗ್ರೆಸ್ ಮೈತ್ರಿ ನಿರ್ಧಾರ ಕೈಗೊಂಡಿದೆ.

ಕರ್ನಾಟಕದಲ್ಲಿ ಬಿಜೆಪಿಯ ರೊಟ್ಟಿ ಜಾರಿ ತುಪ್ಪದಲ್ಲಿ ಬೀಳುವ ಹೊತ್ತು!ಕರ್ನಾಟಕದಲ್ಲಿ ಬಿಜೆಪಿಯ ರೊಟ್ಟಿ ಜಾರಿ ತುಪ್ಪದಲ್ಲಿ ಬೀಳುವ ಹೊತ್ತು!

ಸಭೆಯ ಬಳಿಕ ಕರ್ನಾಟಕ, ಉತ್ತರ ಪ್ರದೇಶ, ತೆಲಂಗಾಣ, ಜಾರ್ಖಂಡ್, ಬಿಹಾರ ಸೇರಿದಂತೆ 10 ರಾಜ್ಯಗಳ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಆಯಾ ರಾಜ್ಯಗಳ ನಾಯಕರ ಜೊತೆ ಕಾಂಗ್ರೆಸ್‌ ವರಿಷ್ಠರು ಪ್ರತ್ಯೇಕವಾಗಿ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಎಸೆದ ಬಾಂಬ್ 2019ರ ಚುನಾವಣೆಯ ತಂತ್ರವೇ?ಸಿದ್ದರಾಮಯ್ಯ ಎಸೆದ ಬಾಂಬ್ 2019ರ ಚುನಾವಣೆಯ ತಂತ್ರವೇ?

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್‌ 9 ಮತ್ತು ಜೆಡಿಎಸ್‌ 2 ಸ್ಥಾನಗಳಲ್ಲಿ ಜಯಗಳಿಸಿತ್ತು. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಬಿ.ಎಸ್.ಯಡಿಯೂರಪ್ಪ, ಶ್ರೀರಾಮುಲು ರಾಜೀನಾಮೆ ನೀಡಿದ್ದಾರೆ. ಆದ್ದರಿಂದ, ಎರಡು ಕ್ಷೇತ್ರಗಳು ತೆರವಾಗಿವೆ.

ಲೋಕಸಭೆ ಚುನಾವಣೆ : 9 ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿಗಳಿಲ್ಲಲೋಕಸಭೆ ಚುನಾವಣೆ : 9 ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿಗಳಿಲ್ಲ

ಹೈಕಮಾಂಡ್ ಸೂಚನೆ ಏನು?

ಹೈಕಮಾಂಡ್ ಸೂಚನೆ ಏನು?

ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಬಿಜೆಪಿಗೆ ಲಾಭವಾಗುವ ಸಾಧ್ಯತೆ ಇದೆ. 2014ರ ಚುನಾವಣೆಯಂತೆ ಬಿಜೆಪಿ ಹೆಚ್ಚು ಸ್ಥಾನಗಳಿಸಬಾರದು. ಮೈತ್ರಿ ಮಾಡಿಕೊಂಡರೂ ಜೆಡಿಎಸ್-ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಟಿಕೆಟ್ ಆಕಾಂಕ್ಷಿಗಳಲ್ಲಿ ಅಸಮಾಧಾನ ಉಂಟಾಗುವ ಸಾಧ್ಯತೆ ಇದೆ. ಇಂತಹ ಬೆಳವಣಿಗೆ ನಡೆಯದಂತೆ ನಾಯಕರು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಸ್ಥಾನ ಹೊಂದಾಣಿಕೆ ಬಗ್ಗೆ ಚರ್ಚಿಸಿ

ಸ್ಥಾನ ಹೊಂದಾಣಿಕೆ ಬಗ್ಗೆ ಚರ್ಚಿಸಿ

2014ರ ಚುನಾವಣೆಯಲ್ಲಿ ಕಾಂಗ್ರೆಸ್‌ 9, ಜೆಡಿಎಸ್ 2 ಸ್ಥಾನಗಳಲ್ಲಿ ಜಯಗಳಿಸಿದ್ದವು. ಕಾಂಗ್ರೆಸ್‌ ಗೆದ್ದ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡಬೇಕು. ಉಳಿದ ಕ್ಷೇತ್ರಗಳಲ್ಲಿ ಮೈತ್ರಿ ಲೆಕ್ಕಾಚಾರದ ಕುರಿತು ಜೆಡಿಎಸ್‌ ಜೊತೆ ಚರ್ಚೆ ಮಾಡಿ, ಸೀಟು ಹಂಚಿಕೆ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.

ಇನ್ನೂ ನಿರ್ಧಾರವಾಗಿಲ್ಲ

ಇನ್ನೂ ನಿರ್ಧಾರವಾಗಿಲ್ಲ

ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಸಭೆಯ ಬಳಿಕ ಮಾತನಾಡಿದ ಅವರು, 'ಯಾವ ಕ್ಷೇತ್ರದಿಂದ ಯಾವ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬುದು ಇನ್ನೂ ತೀರ್ಮಾನವಾಗಿಲ್ಲ' ಎಂದು ಹೇಳಿದರು.

ಮೈತ್ರಿ ಸರ್ಕಾರವೇ ಇದೆ

ಮೈತ್ರಿ ಸರ್ಕಾರವೇ ಇದೆ

ಕರ್ನಾಟಕದಲ್ಲಿ 2018ರ ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಆದ್ದರಿಂದ, ಲೋಕಸಭೆ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಯಲಿದೆ. ಸಮ್ಮಿಶ್ರ ಸರ್ಕಾರ ರಚನೆಯಾಗುವ ಸಮಯದಲ್ಲೇ ಲೋಕಸಭೆ ಚುನಾವಣೆ ಮೈತ್ರಿ ಬಗ್ಗೆ ಘೋಷಣೆಯಾಗಿತ್ತು. ಈಗ ಕಾಂಗ್ರೆಸ್‌ ಹೈಕಮಾಂಡ್ ಅಧಿಕೃತ ಒಪ್ಪಿಗೆ ಸಿಕ್ಕಿದೆ.

English summary
Congress high command approved for JD(S) Congress alliance in Lok Sabha Elections 2019. High command directed party Karnataka leaders to talk with JD(S) regarding seat distribution.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X