ಕಾಂಗ್ರೆಸ್ ಮೊದಲ ಪಟ್ಟಿ ಫೈನಲ್: ಕರ್ನಾಟಕದ 15 ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ
ಬೆಂಗಳೂರು, ಮಾರ್ಚ್ 08: ಲೋಕಸಭೆ ಎಲೆಕ್ಷನ್ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಜೋರಾಗಿದೆ. 195 ಲೋಕಸಭಾ ಕ್ಷೇತ್ರಗಳ ಮೊದಲ ಪಟ್ಟಿಯನ್ನ ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡುತ್ತಿದ್ದಂತೆ ಕಾಂಗ್ರೆಸ್ ಪಟ್ಟಿ ಬಿಡುಗಡೆಗೆ ಸರ್ಕಸ್ ಮುಂದುವರೆಸಿದೆ.
ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸರಣಿ ಸಭೆಯನ್ನು ನಡೆದಿದ್ದು, ಇಂದು ಕಾಂಗ್ರೆಸ್ ಮಹತ್ವದ ಸಭೆ ನಡೆಯಲಿದೆ, ಈಗಾಗಲೇ ಕರ್ನಾಟಕದ ಅಭ್ಯರ್ಥಿಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಭೆ ನಡೆಸಿದ್ದು, ಅಂತಿಮ ಪಟ್ಟಿಯನ್ನ ಗುರುವಾರ ನಡೆದ ಸಭೆಯ ಮುಂದಿಟ್ಟು ಚರ್ಚೆ ನಡೆಸಿದ್ದಾರೆ.

ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಕಾಂಗ್ರೆಸ್ ನಲ್ಲಿ ಕೆಲವು ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಯ ಸಮಸ್ಯೆ ಎದುರಾಗಿದೆ. ಹೀಗಾಗಿ 28 ಲೋಕಸಭಾ ಕ್ಷೇತ್ರಗಳಲ್ಲಿ 15 ಅಭ್ಯರ್ಥಿಗಳು ಅಂತಿಮ ಆಗಿದ್ದು. ಉಳಿದ 13 ಕ್ಷೇತ್ರಗಳಲ್ಲಿ ಕಾದು ನೋಡಲು ಡಿಕೆ ಶಿವಕುಮಾರ್ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಮಾರ್ಚ್ 10 ರೊಳಗೆ ಕಾಂಗ್ರೆಸ್‌ನಿಂದ 15 ಕ್ಷೇತ್ರಗಳಿಗೆ ಹೆಸರು ಪ್ರಕಟ ಮಾಡಲಿದ್ದು, ಉಳಿದ 13 ಅಭ್ಯರ್ಥಿಗಳನ್ನ ಬಿಜೆಪಿಯ ಎರಡನೇ ಪಟ್ಟಿ ಬಳಿಕ ಬಿಡುಗಡೆ ನಂತರ ಉಳಿದ ಕ್ಷೇತ್ರಗಳ ಅಭ್ಯರ್ಥಿಯನ್ನ ಫೈನಲ್ ಮಾಡಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ?
ಬೆಂಗಳೂರು ಗ್ರಾಮಾಂತರ - ಡಿ.ಕೆ. ಸುರೇಶ್
ಮಂಡ್ಯ- ಸ್ಟಾರ್ ಚಂದ್ರು (ವೆಂಕಟೇರಮಣಗೌಡ)
ತುಮಕೂರು- ಎಸ್.ಪಿ. ಮುದ್ದಹನುಮೇಗೌಡ
ಮೈಸೂರು- ಎಂ. ಲಕ್ಷ್ಮಣ್
ಚಿಕ್ಕಬಳ್ಳಾಪುರ- ರಕ್ಷಾ ರಾಮಯ್ಯ
ಕೋಲಾರ- ಕೆ.ಎಚ್. ಮುನಿಯಪ್ಪ
ಬೆಂಗಳೂರು ಕೇಂದ್ರ-ಎನ್.ಎ. ಹ್ಯಾರೀಸ್
ಬೆಂಗಳೂರು ದಕ್ಷಿಣ- ಸೌಮ್ಯಾ ರೆಡ್ಡಿ
ಹಾಸನ- ಶ್ರೇಯಸ್ ಪಟೇಲ್
ಶಿವಮೊಗ್ಗ - ಗೀತಾ ಶಿವರಾಜಕುಮಾರ್
ಚಿತ್ರದುರ್ಗ- ಬಿ.ಎನ್. ಚಂದ್ರಪ್ಪ
ವಿಜಯಪುರ- ಮಾಜಿ ಶಾಸಕ ರಾಜು ಅಲಗೂರು
ಬೀದರ್- ರಾಜಶೇಖರ್ ಪಾಟೀಲ್
ಕಲಬುರಗಿ- ರಾಧಾಕೃಷ್
ಉಡುಪಿ-ಚಿಕ್ಕಮಗಳೂರು- ಜಯಪ್ರಕಾಶ್ ಹೆಗ್ಡೆ ,ಡಾ. ಅಂಶುಮಂತ್












Click it and Unblock the Notifications