Karnataka Assembly Elections 2023: 'ರಿವರ್ಸ್ ಗೇರ್ ಡ್ರೈವರ್' ಅಮಿತ್ ಶಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪ್ರಬಲ ರಾಜಕೀಯ ಪಕ್ಷಗಳ ನಡುವೆ ವಾಗ್ದಾಳಿ ಹೆಚ್ಚಾಗಿದೆ. ಈ ನಡುವೆ 'ಮೋದಿ ವಿಷದಹಾವು' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರೆ, ಇತ್ತ ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಲೀಟ್ ಯತ್ನಾಳ್ 'ಸೋನಿಯಾಗಾಂಧಿ ವಿಷಕನ್ಯೆ' ಎಂದಿದ್ದಾರೆ. ಮತ್ತೊಂದೆಡೆ 'ರಿವರ್ಸ್ ಗೇರ್ ಡ್ರೈವರ್' ಅಮಿತ್ ಶಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಜಿಎಸ್‌ಟಿ, ಎಂಜಿಎನ್‌ಆರ್‌ಇಜಿಎ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು ವಿರೋಧಿಸಿ ನಂತರ ಅದನ್ನು ಸಮರ್ಥಿಸಿಕೊಂಡ ವ್ಯಕ್ತಿಯೇ "ನೈಜ ರಿವರ್ಸ್ ಗೇರ್ ಡ್ರೈವರ್" ಎಂದು ಕಾಂಗ್ರೆಸ್ ಶುಕ್ರವಾರ ಕರ್ನಾಟಕದಲ್ಲಿ ಚುನಾವಣಾ ರ್‍ಯಾಲಿಯಲ್ಲಿ "ರಿವರ್ಸ್ ಗೇರ್" ವಾಗ್ದಾಳಿ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ತಿರುಗೇಟು ನೀಡಿದೆ.

Congress hits back at Amit Shahs reverse gear driver statement

ಶುಕ್ರವಾರ ಕರ್ನಾಟಕದಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಶಾ, ಈ ಚುನಾವಣೆಯಲ್ಲಿ ಒಂದು ಕಡೆ ರಾಹುಲ್ ಬಾಬಾ ನಾಯಕತ್ವದಲ್ಲಿ ಕಾಂಗ್ರೆಸ್ ಇದ್ದರೆ, ಇನ್ನೊಂದು ಕಡೆ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಇದೆ. ಈ ಚುನಾವಣೆಯ ಮತದಾರರು ಮೋದಿ ನೇತೃತ್ವದ ಡಬಲ್ ಇಂಜಿನ್ ಸರ್ಕಾರವನ್ನು ಗೆಲ್ಲಿಸುವ ಮೂಲಕ ಕರ್ನಾಟಕವನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ಜೊತೆಗೆ ರಾಜ್ಯವನ್ನು ಹಿಂದಕ್ಕೆ ಕೊಂಡೊಯ್ಯುವ ರಿವರ್ಸ್ ಗೇರ್ ಕಾಂಗ್ರೆಸ್ ಸರ್ಕಾರವನ್ನು ಕೈಬಿಡುತ್ತಾರೆ ಎಂದು ಹೇಳಿದ್ದರು.

ಈ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ಪ್ರಭಾರಿ, ಜೈರಾಮ್ ರಮೇಶ್ ಅವರು ಟ್ವಿಟರ್‌ನಲ್ಲಿ, "ಭಾರತವನ್ನು ಒಂದುಗೂಡಿಸಲು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದಾಡಿದ ವ್ಯಕ್ತಿ ರಿವರ್ಸ್ ಗೇರ್‌ನಲ್ಲಿಲ್ಲ" ಎಂದು ಹೇಳಿದ್ದಾರೆ.

Congress hits back at Amit Shahs reverse gear driver statement

"ಜಿಎಸ್‌ಟಿ, ಎಂಜಿಎನ್‌ಆರ್‌ಇಜಿಎ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯನ್ನು ವಿರೋಧಿಸಿ ನಂತರ ಅವುಗಳನ್ನು ಸಮರ್ಥಿಸಿಕೊಂಡ ಇನ್ನೊಬ್ಬ ವ್ಯಕ್ತಿ ನಿಜವಾದ ರಿವರ್ಸ್ ಗೇರ್ ಡ್ರೈವರ್. ಅವನು ಪಕ್ಷದೊಂದಿಗೆ ಇತಿಹಾಸವನ್ನು ತಿರುಚಿ ಸಾಮಾಜಿಕ ಸಾಮರಸ್ಯವನ್ನು ನಾಶಪಡಿಸುತ್ತಿದ್ದಾನೆ!" ಎಂದು ರಮೇಶ್, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಮಾತಿನ ಚಕಮಕಿ ನಡೆಯುತ್ತಿದ್ದು, ಎರಡೂ ಪಕ್ಷಗಳು ಇತರ ಕಡೆಯ ಉನ್ನತ ನಾಯಕರ ಚುನಾವಣಾ ಪ್ರಚಾರವನ್ನು ನಿಷೇಧಿಸುವಂತೆ ಕೋರಿ ಶುಕ್ರವಾರ ಚುನಾವಣಾ ಆಯೋಗದ ಮೊರೆ ಹೋಗಿವೆ.

Congress hits back at Amit Shahs reverse gear driver statement

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಚಾರದ ಮೇಲೆ ಎಫ್‌ಐಆರ್ ಮತ್ತು ನಿರ್ಬಂಧವನ್ನು ಬಿಜೆಪಿ ಕೋರಿದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ ನಿರ್ಬಂಧ ಹೇರಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷಪೂರಿತ ಹಾವಿಗೆ ಹೋಲಿಸಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಇನ್ನೂ ಅಮಿತ್ ಶಾ ಮತ್ತು ಯೋಗಿ ಆದಿತ್ಯನಾಥ್ ಅವರು ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಕೋಮು ಭಾವೋದ್ರೇಕಗಳನ್ನು ಮತ್ತು ಅಸಂಗತತೆಯನ್ನು ಉಂಟುಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ರಾಜ್ಯದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+