ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

28ರಂದು ಕರ್ನಾಟಕ ಕಾಂಗ್ರೆಸ್ ಆತ್ಮಾವಲೋಕನ ಸಭೆ

|
Google Oneindia Kannada News

ಬೆಂಗಳೂರು, ಮೇ 22 : ಕರ್ನಾಟಕ ಕಾಂಗ್ರೆಸ್ ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಆತ್ಮಾವಲೋಕನ ಸಭೆ ನಡೆಸಲು ತೀರ್ಮಾನಿಸಿದೆ. ಮೇ 28ರಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಆತ್ಮಾವಲೋಕನ ಸಭೆಯನ್ನು ಪಕ್ಷ ನಡೆಸಲಿದ್ದು, ಮೇ 28ರಂದು ಸಭೆ ನಡೆಯಲಿದೆ ಎಂಂದು ಹೇಳಿದರು.

Parameshwar

ಸಿಎಂ ಸಿದ್ದರಾಮಯ್ಯ ಹಾಗೂ ಸಂಪುಟದ ಸಚಿವರು, ಪ್ರದೇಶ ಕಾಂಗ್ರೆಸ್‌ ನ ಎಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಂಡುಮ ಪಕ್ಷದ ಸೋಲಿಗೆ ಕಾರಣಗಳನ್ನು ಕಂಡುಕೊಳ್ಳಲಾಗುವುದು ಎಂದು ಪರಮೇಶ್ವರ್ ತಿಳಿಸಿದರು. [ಕರ್ನಾಟಕದಲ್ಲಿ ಗೆದ್ದವರು, ಸೋತವರು]

ಕಾಂಗ್ರೆಸ್ ಪಕ್ಷ ಕೆಲವು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಹೊಂದಿತ್ತು. ಆದರೆ, ಆ ಕ್ಷೇತ್ರಗಳಲ್ಲಿ ಸೋಲು ಅನುಭವಿಸಿದ್ದೇವೆ. ಈ ಸೋಲಿನ ಬಗ್ಗೆ ಜಿಲ್ಲಾಧ್ಯಕ್ಷರಿಂದ ವರದಿ ಪಡೆಯಲಾಗಿದ್ದು, ವರದಿ ಪರಿಶೀಲನೆ ನಡೆಸಿ, ನಾಯಕರು ಯಾರಾದರೂ ಪಕ್ಷದ ಅಭ್ಯರ್ಥಿಗಳ ವಿರುದ್ಧವಾಗಿ ಕೆಲಸ ಮಾಡಿದ್ದರೆ, ಅಂತವರ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಶಿಸ್ತು ಸಮಿತಿ ಇದೆ. ಪಕ್ಷ ವಿರೋಧಿ ಕೆಲಸ ಮಾಡಿದ ನಾಯಕರಿಗೆ ನೋಟಿಸ್‌ ನೀಡಿ, ವಿಚಾರಣೆ ನಡೆಸಲಾಗುವುದು. ಎಐಸಿಸಿ ಸಹ ತನ್ನ ಮೂಲಗಳಿಂದ ಪಕ್ಷ ವಿರೋಧಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದು, ವಿರೋಧಿ ಕೆಲಸ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿದೆ ಎಂದು ಪರಮೇಶ್ವರ್ ತಿಳಿಸಿದರು.

ಜೂನ್ ನಲ್ಲಿ ಸಭೆ : ಜೂನ್ ತಿಂಗಳಿನಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಉಪಸ್ಥಿತಿಯಲ್ಲಿ ಕಾಂಗ್ರೆಸ್‌ ಪ್ರತಿನಿಧಿಗಳ ಸಭೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.

English summary
After Lok Sabha Election Results 2014, Karnataka Congress holds review meeting on May 28 said, KPCC president Dr G Parameshwar. Chief Minister Siddaramaiah and his cabinet ministers and district Congress presidents will be present in the meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X