B Khata to A Khata : ಕಾಂಗ್ರೆಸ್ ಮಹಾ ದೋಖಾ; 'ಬಿ ಖಾತಾದಿಂದ ಎ ಖಾತಾ ಮಾಡಲು ಶೇ 5% ತೆರಿಗೆ' : ಏನಿದು ಆರೋಪ

ಬೆಂಗಳೂರು, ಅಕ್ಟೋಬರ್‌ 20: ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ಕಾಂಗ್ರೆಸ್ ಮಹಾ ದೋಖಾ ಮಾಡುತ್ತಿದೆ. ನೀವು ಹಬ್ಬವನ್ನು ಸಂತೋಷದಿಂದ ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಜೆಡಿಎಸ್ ಹೋರಾಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಈ ಕುರಿತು ಟ್ವೀಟ್ ಮೂಲಕ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.ಶುಭೋದಯ ಬೆಂಗಳೂರು ! ಎಲ್ಲರಿಗೂ ದೀಪಾವಳಿಯ ಶುಭಾಶಯಗಳು ನೀವು ದೀಪ ಹಚ್ಚುತ್ತಿರುವಾಗ, ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ, 7.5 ಲಕ್ಷ ಮನೆ ಮಾಲೀಕರು 100 ದಿನಗಳಲ್ಲಿ ಲಕ್ಷ ಲಕ್ಷ ಪಾವತಿಸುವಂತೆ ಒತ್ತಾಯಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Congress imposed a 5 tax on converting B Khata to A Khata Nikhil Kumaraswamy Said

ಆದ್ರೆ ಇದರ ಬಗ್ಗೆ ಚಿಂತಿಸಬೇಡಿ, ಜೆಡಿಎಸ್ ಪಕ್ಷವು ಪ್ರತಿಯೊಬ್ಬ ಬಿ ಖಾತಾ ಹೊಂದಿರುವವರ ಪರವಾಗಿ ಹೋರಾಡುತ್ತದೆ. ನಾವು ಪ್ರತಿಭಟನೆ ಮೂಲಕ ಮತ್ತು ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತೇವೆ. ನಿಮ್ಮ ಹಬ್ಬವನ್ನು ಸಂತೋಷದಿಂದ ಆಚರಿಸಿ, ನಾವು ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ. ಈ ಬಗ್ಗೆ ನಾನು ಗುರುವಾರ ಪೂರ್ಣ ವಿವರಗಳೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ನೆಪದಲ್ಲಿ 15,000 ಕೋಟಿ ಸುಲಿಗೆ ಮಾಡಿ ಬೆಂಗಳೂರು ಗುಂಡಿಗಳನ್ನು ಮುಚ್ಚಲು ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡುವ ಅರ್ಜಿಗೆ 500 ರೂಪಾಯಿ ಶುಲ್ಕ . ಆ ಶುಲ್ಕದ ಹೆಸರಿನಲ್ಲಿಯೇ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದೆ ಈ ರಾಜ್ಯ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

30/40 ನಿವೇಶನಕ್ಕೆ 4ರಿಂದ 8 ಲಕ್ಷ ರೂಪಾಯಿವರೆಗೂ ಕಿತ್ತುಕೊಳ್ಳುತ್ತಿದ್ದಾರೆ. ಮೊದಲು 10ರಿಂದ 13 ಸಾವಿರ ರೂಪಾಯಿ ಅಷ್ಟನ್ನೇ ಕಟ್ಟಬೇಕಿತ್ತು ಈಗ ಎ ಖಾತಾ ಮೂಲಕ 15,000 ಕೋಟಿ ರೂಪಾಯಿ ವಸೂಲಿ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+