ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತೃಪ್ತ ಶಾಸಕರಿಗೆ ಕೈ ಉಸ್ತುವಾರಿ ವೇಣುಗೋಪಾಲ್ ಖಡಕ್ ಎಚ್ಚರಿಕೆ

By Manjunatha
|
Google Oneindia Kannada News

ಬೆಂಗಳೂರು, ಜೂನ್ 14: ಸಚಿವ ಸ್ಥಾನ ಸಿಗದಿದುದ್ದಕ್ಕೆ ಅತೃಪ್ತಗೊಂಡು ಬಣ ನಿರ್ಮಿಸಿಕೊಂಡಿರುವ ಶಾಸಕರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇಂದು ಕುಮಾರಕೃಪದಲ್ಲಿ ಅತೃಪ್ತ ಶಾಸಕರೊಂದಿಗೆ ಸಭೆ ನಡೆಸಿದ ವೇಣುಗೋಪಾಲ್ ಅವರು, 'ಇಂದಿನಿಂದ ಯಾವುದೇ ಶಾಸಕರು ಪ್ರತ್ಯೇಕ ಸಭೆಗಳನ್ನು ನಡೆಸುವಂತಿಲ್ಲ, ನಡೆಸಿದರೆ ಶಿಸ್ತುಕ್ರಮ ಕೈಗೊಳ್ಳುತ್ತೇವೆ' ಎಂದು ಎಚ್ಚರಿಕೆ ನೀಡಿದ್ದಾರೆ.

ಬಂಡಾಯ ಶಮನಕ್ಕಾಗಿ ಜೂನ್ 17ರಂದು ಸಚಿವ ಸಂಪುಟ ವಿಸ್ತರಣೆಬಂಡಾಯ ಶಮನಕ್ಕಾಗಿ ಜೂನ್ 17ರಂದು ಸಚಿವ ಸಂಪುಟ ವಿಸ್ತರಣೆ

ಸಚಿವ ಸ್ಥಾನ ಕೈತಪ್ಪಿರುವವರಲ್ಲಿ ಬಹಳಷ್ಟು ಜನ ಅರ್ಹರಿದ್ದಾರೆ ಎಂದಿರುವ ಅವರು, ಈಗ ಸಚಿವ ಸ್ಥಾನ ತ್ಪಪಿರುವವರಿಗೆ ಮುಂದಿನ ದಿನಗಳಲ್ಲಿ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Congress in charge KC Venugopal gives warning to dissident MLAs

ಈಗ ಅಧಿಕಾರ ಸ್ವೀಕರಿಸಿರುವ ಸಚಿವರ ಕಾರ್ಯವೈಖರಿಯನ್ನು ಮೌಲ್ಯಮಾಪನಕ್ಕೆ ಒಳಪಡಿಸಿ ತೃಪ್ತಿ ತರಲಿಲ್ಲವೆಂದರೆ ಅಂಥಹವರನ್ನು ಬದಲಾವಣೆ ಮಾಡಿ ಬೇರೆ ಅವರಿಗೆ ಅವಕಾಶ ನೀಡಲಾಗುವುದು ಎಂದು ವೇಣುಗೋಪಾಲ್ ಹೇಳಿದ್ದಾರೆ.

ಸಂಪುಟ ವಿಸ್ತರಣೆ : ಅಸಮಾಧಾನ ಬಗೆಹರಿಸಲು 3+3+2 ಸೂತ್ರ!ಸಂಪುಟ ವಿಸ್ತರಣೆ : ಅಸಮಾಧಾನ ಬಗೆಹರಿಸಲು 3+3+2 ಸೂತ್ರ!

ಅತೃಪ್ತ ಶಾಸಕರ ಸಭೆಯಲ್ಲಿ ಎಂ.ಬಿ.ಪಾಟೀಲ್, ಎಂಟಿಬಿ ನಾಗರಾಜು, ಡಾ.ಸುಧಾಕರ್, ವಿ.ಮುನಿಯಪ್ಪ, ಎಚ್‌.ಕೆ.ಪಾಟೀಲ್, ಸತೀಶ್ ಜಾರಕಿಹೊಳಿ ಇನ್ನೂ ಕೆಲವರು ಭಾಗವಹಿಸಿದ್ದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಅವರು, 'ಅನ್ಯಾಯ ಆಗಿದೆ ಆದರೆ ಸಹಿಸಿಕೊಂಡು ಇರಿ ಎಂಬರ್ಥದ ಮಾತುಗಳನ್ನು ವೇಣುಗೋಪಾಲ್ ಆಡಿದರು' ಎಂದು ಅಸಮಾಧಾನ ಹೊರಹಾಕಿದ್ದಾರೆ.

English summary
Karnataka Congress in charge KC Venugopal today holds meeting with dissident MLAs of congress. He warn MLAs not to do suppurate meeting regarding minister posts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X