Get Updates
Get notified of breaking news, exclusive insights, and must-see stories!

Karnataka Election 2023: ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ, ಪಕ್ಷದ ವಿರುದ್ಧ ಬಂಡಾಯವೆದ್ದವರ ಸಂಪೂರ್ಣ ಮಾಹಿತಿ

ಬೆಂಗಳೂರು, ಏಪ್ರಿಲ್. 07: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇ ಮಾಡಿದ್ದು ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದ ಕಾರಣ ಹೈಕಮಾಂಡ್ ಅಳೆದು ತೂಗಿ ಟಿಕೆಟ್ ನೀಡಿದೆ. ಮೊದಲ ಪಟ್ಟಿ ಬಿಡುಗಡೆ ವೇಳೆ ಯಾವುದೇ ಅಸಮಾಧಾನ ಕಾಣಿಸಿಕೊಂಡಿರಲಿಲ್ಲ. ಆದರೆ ಎರಡನೇ ಪಟ್ಟಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಹೊರಬರಲು ಕಾರಣವಾಗಿದೆ.

ಟಿಕೆಟ್ ನಿರೀಕ್ಷೆಯಲ್ಲಿದ್ದ ಹಲವು ನಾಯಕರು ಬಂಡಾಯವೆದ್ದಿದ್ದಾರೆ. ತಮಗೆ ಟಿಕೆಟ್ ಸಿಗಲಿಲ್ಲ ಎಂದು ಕೆಲವರು, ತಮ್ಮ ಸಂಬಂಧಿಗೆ ಟಿಕೆಟ್ ಕೊಡಲಿಲ್ಲ ಎಂದು ಕೆಲವರು, ಮತ್ತೆ ತಮ್ಮ ನಾಯಕರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವು ನಾಯಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರೇ ಮತ್ತೆ ಕೆಲವರು ಬೇರೆ ಪಕ್ಷಗಳ ಬಾಗಿಲು ಬಡಿಯುತ್ತಿದ್ದಾರೆ. ಯಾವ್ಯಾವ ನಾಯಕರು ಬಂಡಾಯವೆದ್ದಿದ್ದಾರೆ ಎಂದು ಒಂದು ಸುತ್ತು ಹಾಕಿ ಬರೋಣ.

Congress Internal Conflict Rises After Party Released its 2nd List of Candidates

*ತುಮಕೂರಿನ ಮಾಜಿ ಶಾಸಕ ಷಫಿ ಅಹಮ್ಮದ್*

ತುಮಕೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯುವ ಮುಖಂಡ ಇಕ್ಬಾಲ್ ಅಹಮ್ಮದ್ ಅವರು ಸ್ಪರ್ಧಿಸಲಿದ್ದಾರೆ. ಹೈಕಮಾಂಡ್ ನಿರ್ಧಾರವನ್ನು ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ಎಸ್.ಷಫಿ ಅಹಮ್ಮದ್ ವಿರೋಧಿಸಿದ್ದಾರೆ. ಗೆಲ್ಲುವ ಸಾಮರ್ಥ್ಯವಿಲ್ಲದ ಜೂನಿಯರ್ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

*ಚಿತ್ರದುರ್ಗದ ಮಾಜಿ ಎಂಎಲ್‌ಸಿ ಜಿ. ರಘು ಆಚಾರ್ ಜೆಡಿಎಸ್‌ಗೆ*

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಎಂಎಲ್‌ಸಿ ಜಿ. ರಘು ಆಚಾರ್, ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪಕ್ಷ ತೊರೆಯಲು ಸಜ್ಜಾಗಿದ್ದಾರೆ. ರಘು ಆಚಾರ್ ಜೆಡಿಎಸ್ ಸೇರ್ಪಡೆಗೆ ಏಪ್ರಿಲ್ 14ರಂದು ದಿನಾಂಕ ನಿಗದಿಯಾಗಿದೆ ಎಂದು ತಿಳಿದು ಬಂದಿದೆ. ಅತೃಪ್ತರಾಗಿರುವ ರಘು ಆಚಾರ್ ಅವರ ನಿವಾಸಕ್ಕೆ ಪರಿಷತ್ ಸದಸ್ಯ ಟಿ.ಎ. ಶರವಣ ಅವರು ಶುಕ್ರವಾರ ಭೇಟಿ‌ ಮಾಡಿ ಜೆಡಿಎಸ್‌ ಪಕ್ಷಕ್ಕೆ ಬರುವಂತೆ ಆಹ್ವಾನ ಕೊಟ್ಟಿದ್ದಾರೆ.

*ಚನ್ನಗಿರಿಯಲ್ಲಿ ವಡ್ನಾಳ್ ರಾಜಣ್ಣ ಅಸಮಾಧಾನ*

ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವಡ್ನಾಳ್ ರಾಜಣ್ಣಗೆ ಟಿಕೆಟ್ ಸಿಕ್ಕಿಲ್ಲ. ಹೀಗಾಗಿ ಅವರ ಬೆಂಬಲಿಗರು ರಾಜಣ್ಣ ಅಥವಾ ಅವರ ಸೋದರ ಮಗನಿಗೆ ಟಿಕೆಟ್ ನೀಡಬೇಕು. ಇಲ್ಲದಿದ್ದತೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಬೆದರಿಕೆ ಹಾಕಿದ್ದರು. ಇನ್ನು ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರ ಹೊರಹಾಕಿರುವ ವಡ್ನಾಳ್ ರಾಜಣ್ಣ, ಕೊನೆಯ ಕ್ಷಣದಲ್ಲಿ ಟಿಕೆಟ್‌ ತಪ್ಪಿಸಲಾಗಿದೆ. ಬಂಡಾಯವಾಗಿ ಸ್ಪರ್ಧೆ ಬಗ್ಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

Congress Internal Conflict Rises After Party Released its 2nd List of Candidates

*ಕಡೂರಿನಲ್ಲಿ ವೈಎಸ್‌ವಿ ದತ್ತಾಗೆ ಶಾಕ್ ಕೊಟ್ಟ ಕಾಂಗ್ರೆಸ್*

ಇನ್ನು, ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈಎಸ್‌ವಿ ದತ್ತಾಗೆ ಟಿಕೆಟ್ ನೀಡಲಾಗಿಲ್ಲ. ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಸಾವಿರಾರು ಅಭಿಮಾನಿಗಳು ದತ್ತ ಮನೆಯಲ್ಲಿ ಜಮಾಯಿಸಿ ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿ, ದತ್ತಾ ಅವರಿಗೆ ಪಕ್ಷೇತರವಾಗಿ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ. ಇನ್ನು ಬೆಂಬಲಿಗರಿಗೆ ಪತ್ರ ಬರೆದಿರುವ ದತ್ತಾ, ಭಾನುವಾರ (ಏಪ್ರಿಲ್‌ 9) ಬೆಳಗ್ಗೆ 11 ಗಂಟೆಗೆ ತಮ್ಮ ಅಭಿಮಾನಿಗಳ ಸಭೆ ಕರೆದಿದ್ದಾರೆ.

*ಬಾದಾಮಿಯಲ್ಲಿ ಸಿದ್ದರಾಮಯ್ಯ ಬೆಂಬಲಿಗರ ಬೇಸರ*

ಕೋಲಾರದಲ್ಲಿ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ್ದಾಗಲೇ ಬಾದಾಮಿಯ ಜನರು ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ಮಾಡಿ ಬಾದಾಮಿಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿದ್ದರು. ಆದರೆ, ಕಳೆದ ಬಾರಿ ಬಾದಾಮಿಯಿಂದ ಸ್ಪರ್ಧಿಸಿ ಗೆದ್ದಿದ್ದ ಸಿದ್ದರಾಮಯ್ಯ ಈ ಬಾರಿ ಬಾದಾಮಿ ತೊರೆದಿದ್ದಾರೆ. ಮಾಜಿ ಸಚಿವ ಬಿ.ಬಿ ಚಿಮ್ಮನಕಟ್ಟಿ ಪುತ್ರ ಭೀಮಸೇನ್ ಚಿಮ್ಮನಕಟ್ಟಿಗೆ ಬಾದಾಮಿಯಿಂದ ಟಿಕೆಟ್‌ ಘೋಷಣೆಯಾಗಿದೆ. ಆದರೆ, ಸಿದ್ದರಾಮಯ್ಯ ಬೆಂಬಲಿಗರು ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧಿಸಬೇಕು ಎಂದು ಹಠ ಹಿಡಿದಿದ್ದಾರೆ.

*ಗೋಕಾಕ್, ಗಂಗಾವತಿಯಲ್ಲೂ ಬಂಡಾಯದ ಬಿಸಿ*

ಗೋಕಾಕ್‌ನಲ್ಲಿ ಅಶೋಕ್ ಪೂಜಾರಿಗೆ ಟಿಕೆಟ್ ನೀಡದಿರುವುದಕ್ಕೆ ಅವರ ಬೆಂಬಲಿಗರು, ಪ್ರತಿಭಟನೆ ನಡೆಸಿ ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಇತ್ತ,

ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿಗೆ ಟೆಕೆಟ್ ನೀಡಲಾಗಿದ್ದು, ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಸಿಟ್ಟಾಗಿದ್ದಾರೆ.

*ಮಂಡ್ಯದಲ್ಲಿ ರಾಧಾಕೃಷ್ಣ ಬೆಂಬಲಿಗರಿಂದ ಪ್ರತಿಭಟನೆ*

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಮಾಡಿ ಮಂಡ್ಯದಲ್ಲಿ ಬಿಜೆಪಿ ಅಲೆ ತರಲು ಪ್ರಯತ್ನಿಸಲಾಗಿತ್ತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಹಲವು ಆಕಾಂಕ್ಷಿಗಳಿದ್ದರು. ಆದರೆ, ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ರವಿಕುಮಾರ್‌ಗೆ ಮಣೆ ಹಾಕಲಾಗಿದೆ. ಇದರಿಂದ ಮಂಡ್ಯ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಹೊರಬಿದ್ದಿದ್ದು, ಬೆಂಕಿಹೊತ್ತಿಕೊಂಡಿದೆ. ರಾಧಾಕೃಷ್ಣ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

*ಕಿತ್ತೂರಲ್ಲಿ ಡಿ.ಬಿ ಇನಾಮ್‌ದಾರ್‌ಗೆ ನಿರಾಸೆ*

ಕಿತ್ತೂರಿನಲ್ಲಿ ಬಾಬಾಸಾಹೇಬ್ ಪಾಟೀಲ್‌ಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಇದರಿಂದ ಮಾಜಿ ಸಚಿವ ಡಿ.ಬಿ ಇನಾಮ್‌ದಾರ್‌ಗೆ ನಿರಾಸೆಯಾಗಿದ್ದು, ಅವರ ಬೆಂಬಲಿಗರು ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಲ್ಲದೇ, ಇನಾಮ್‌ದಾರ್‌ ಸೊಸೆ ಲಕ್ಷ್ಮೀ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಬಿ ಇನಾಮ್‌ದಾರ್‌ ಬೆಂಬಲಿಗರು ಸಾಮೂಹಿಕವಾಗಿ ಕಾಂಗ್ರೆಸ್‌ಗೆ ರಾಜೀನಾಮೆ ಕೊಡಲು ನಿರ್ಧರಿಸಿದ್ದಾರೆ.

*ಕಲಘಟಗಿ ಕಾಂಗ್ರೆಸ್‌ನಲ್ಲಿಯೂ ಬಂಡಾಯದ ಬಿಸಿ*

ಧಾರವಾಡ ಜಿಲ್ಲೆ ಕಲಘಟಗಿಯ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮತ್ತೆ ಸಂತೋಷ್‌ ಲಾಡ್ ಸ್ಪರ್ಧಿಸಲಿದ್ದಾರೆ. ಅವರ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಆದರೆ, ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸದಲ್ಲಿ ಕ್ಷೇತ್ರದಲ್ಲಿ ಕುಕ್ಕರ್‌ಗಳನ್ನು ಹಂಚಿ ಮತದಾರರ ಓಲೈಕೆ ಶುರು ಮಾಡಿದ್ದ ನಾಗರಾಜ್‌ ಛಬ್ಬಿಗೆ ನಿರಾಸೆಯಾಗಿದೆ. ಇವರು ಕೂಡ ಕಾಂಗ್ರೆಸ್ ಬಿಡಲು ಸಜ್ಜಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+