ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೊತ್ತು ಗುರಿ ಇಲ್ಲದ ಡಬ್ಬಲ್ ಸ್ಟೇರಿಂಗ್ ಪಕ್ಷ ಕಾಂಗ್ರೆಸ್; ಸುಧಾಕರ್

|
Google Oneindia Kannada News

ತುಮಕೂರು, ಜುಲೈ. 26: "ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಭಿವೃದ್ಧಿಯ ಡಬಲ್ ಇಂಜಿನ್ ಸರ್ಕಾರ ಬೇಕಾ ಅಥವಾ ಗೊತ್ತು ಗುರಿ ಇಲ್ಲದ ಡಬ್ಬಲ್ ಸ್ಟೇರಿಂಗ್ ಸರ್ಕಾರ ಬೇಕಾ? ಎಂಬುದನ್ನು ಜನರೇ ನಿರ್ಧರಿಸಲಿದ್ದಾರೆ" ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ತುಮಕೂರು ಗ್ರಾಮಾಂತರ ಮತ್ತು ನೆಲಮಂಗಲದಲ್ಲಿ ಮಂಗಳವಾರ ಆಯೋಜಿಸಿದ್ದ ಜನೋತ್ಸವ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, "ನಮ್ಮದು ಡಬಲ್ ಇಂಜಿನ್ ಸರ್ಕಾರ. ಇದರಿಂದಾಗಿಯೇ ರೈತರಿಗೆ, ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಸೇರಿದಂತೆ ಎಲ್ಲ ವರ್ಗದ ಜನರಿಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳು ತಲುಪುತ್ತಿವೆ. ಆದರೆ ಕಾಂಗ್ರೆಸ್‌ನಲ್ಲಿ ಪರಿಸ್ಥಿತಿಯೇ ಭಿನ್ನವಾಗಿದೆ" ಎಂದರು.

ಬಿಜೆಪಿಯ ಶಕ್ತಿ ಬಗ್ಗೆ 'ಜನೋತ್ಸವ'ದಲ್ಲಿ ಉತ್ತರ ಸಿಗಲಿದೆ: ಸುಧಾಕರ್ಬಿಜೆಪಿಯ ಶಕ್ತಿ ಬಗ್ಗೆ 'ಜನೋತ್ಸವ'ದಲ್ಲಿ ಉತ್ತರ ಸಿಗಲಿದೆ: ಸುಧಾಕರ್

"ಕೆಪಿಸಿಸಿ ಅಧ್ಯಕ್ಷರು ಏರಿಗೆ ಎಳೆದರೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ನೀರಿಗೆ ಎಳೆಯುತ್ತಿದ್ದಾರೆ. ಇಂತಹ ಪಕ್ಷದಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ?. ನಮ್ಮದು ಜನಪರ ಸರ್ಕಾರ. ಜನರಿಗಾಗಿ ಜಾರಿಗೊಳಿಸಿದ ಯೋಜನೆಗಳು ಜನರಿಗೆ ತಲುಪಿವೆ. ಹಾಗಾಗಿ ಜನರ ಮಧ್ಯೆ ಕಾರ್ಯಕ್ರಮ ಮಾಡುತ್ತಿದ್ದೇವೆ. ಆದರೆ ಕಾಂಗ್ರೆಸ್‌ನವರು ವ್ಯಕ್ತಿ ಉತ್ಸವ ಮಾಡಲು ಮುಂದಾಗಿದ್ದಾರೆ" ಎಂದು ಲೇವಡಿ ಮಾಡಿದರು.

ಪ್ರಜಾಪ್ರಭುತ್ವವೇ ಜನರ ಹಬ್ಬ: "ಪ್ರಜಾಪ್ರಭುತ್ವವೇ ಜನರ ಹಬ್ಬವಾಗಿದೆ. ಇದನ್ನು ಬಿಜೆಪಿ ಮಾಡುತ್ತಿದೆ. ಜನರಿಗಾಗಿ, ಜನರಿಗೋಸ್ಕರ ಮತ್ತು ಜನರ ಮಧ್ಯೆ ಕಾರ್ಯಕ್ರಮ ಮಾಡುತ್ತಿದ್ದೇವೆ. ಆದರೆ ವ್ಯಕ್ತಿಪೂಜೆ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ಜನಪರ ಕಾಳಜಿ ಇದೆಯೇ?. ಈ ಹಿಂದೆ ಕೋವಿಡ್ ಕಾರಣ ಯಾವುದೇ ಸಮಾವೇಶ ಮಾಡಲು ಸಾಧ್ಯವಾಗಲಿಲ್ಲ. ಜನರು ಪಕ್ಷದ ಪರ ಇದ್ದಾರೆ. ಪಕ್ಷದ ಮೇಲೆ ಜನರಿಗೆ ಅಭಿಮಾನ ಇದೆ" ಎಂದು ಸಚಿವರು ಅಭಿಪ್ರಾಯಪಟ್ಟರು.

Breaking:ಮಂಕಿಫಾಕ್ಸ್ ತಡೆಗೆ ಕರ್ನಾಟಕದಲ್ಲಿ ಕಟ್ಟೆಚ್ಚರ: ಡಾ.ಕೆ.ಸುಧಾಕರ್Breaking:ಮಂಕಿಫಾಕ್ಸ್ ತಡೆಗೆ ಕರ್ನಾಟಕದಲ್ಲಿ ಕಟ್ಟೆಚ್ಚರ: ಡಾ.ಕೆ.ಸುಧಾಕರ್

"ಇದೇ 28ರಂದು ಸಮಾವೇಶದಲ್ಲಿ ಸೇರುವ ಜನಸಾಗರವನ್ನು ಕಂಡು ಬಿಜೆಪಿ ಶಕ್ತಿ ಏನು ಎಂಬುದು ಅರಿವಾಗಬೇಕು. ಆ ಮೂಲಕ 2023ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು ಸುಲಭವಾಗಲಿದೆ. ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಎಲ್ಲರಿಗೂ ಆರೋಗ್ಯ ಸಿಗುತ್ತಿದೆ. ಇದನ್ನು ಮಧ್ಯಮವರ್ಗದ ಜನರಿಗೂ ವಿಸ್ತರಣೆ
ಮಾಡಲಾಗಿದೆ" ಎಂದು ಸಚಿವರು ವಿವರಿಸಿದರು.

ಐದು ಕಡೆಗಳಲ್ಲಿ ಜನೋತ್ಸವ

ಐದು ಕಡೆಗಳಲ್ಲಿ ಜನೋತ್ಸವ

"ರಾಜ್ಯದ ಐದು ಕಡೆಗಳಲ್ಲಿ ಜನೋತ್ಸವ ಕಾರ್ಯಕ್ರಮ ನಡೆಸಲು ಉದ್ಧೇಶಿಸಲಾಗಿದೆ. ಮೊದಲ ಕಾರ್ಯಕ್ರಮ ದೊಡಬಳ್ಳಾಪುರದಲ್ಲಿ ನಡೆಯಲಿದ್ದು, ಲಕ್ಷಾಂತರ ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಾಲ್ಕು ಜಿಲ್ಲೆಗಳಿಂದ ಆಗಮಿಸುವ ಜನಸಾಗರ ವಿರೋಧಪಕ್ಷಗಳಿಗೆ ಎಚ್ಚರಿಕೆ ನೀಡಲಿದೆ" ಎಂದು ಸಚಿವ ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.

ಸಮಾಜ ಒಡೆಯುವುದು ಕಾಂಗ್ರೆಸ್ ಹುಟ್ಟುಗುಣ: "ಒಂದು ಸಮುದಾಯದ ಬೆಂಬಲದಿಂದ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ, ಒಂದು ಸಮುದಾಯವನ್ನು ಮತ್ತೊಂದು ಸಮುದಾಯಕ್ಕೆ ಹೋಲಿಕೆ ಮಾಡುವುದು ಶೋಭೆ ತರಲ್ಲ. ಈ ಹೇಳಿಕೆಗೆ ಸಮುದಾಯವೂ ವಿರೋಧ ವ್ಯಕ್ತಪಡಿಸುತ್ತಿದೆ. ಹೋಲಿಕೆ ಮಾಡುವುದು, ವರ್ಗೀಕರಣ ಮಾಡುವುದು ಕಾಂಗ್ರೆಸ್ ಹುಟ್ಟುಗುಣ. ಧರ್ಮ ಧರ್ಮದ ಮಧ್ಯೆ, ವರ್ಗ ವರ್ಗಗಳ ಮಧ್ಯೆ, ಜಾತಿ ಜಾತಿಗಳ ಮಧ್ಯೆ ಬಿರುಕು ಮೂಡಿಸುವುದು ಕಾಂಗ್ರೆಸ್ ಹುಟ್ಟುಗುಣ" ಎಂದು ಸಚಿವರು ಕಿಡಿ ಕಾರಿದರು.

"ವ್ಯಕ್ತಿಯ ವೈಭವೀಕರಣ ಮಾಡುವುದರಿಂದ ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ಧಕ್ಕೆ ಬರಲಿದೆ. ನಾವು ಮಾಡುತ್ತಿರುವುದು ಪ್ರಜಾಪ್ರಭುತ್ವ ಎತ್ತಿ ಹಿಡಿಯುವ ಕಾರ್ಯಕ್ರಮ. ಅವರು ಇಡೀ ರಾಜ್ಯ ಸೇರಿಸಿ ಒಂದು ಸಮಾವೇಶ ಮಾಡುತ್ತಿದ್ದರೆ ನಾವು ರಾಜ್ಯದ ಐದು ಭಾಗಗಳಲ್ಲಿ ಐದು ಸಮಾವೇಶಗಳನ್ನು ಮಾಡುತ್ತಿದ್ದೇವೆ. ಅದಕ್ಕೂ ಇದಕ್ಕೂ ಹೋಲಿಕೆ ಮಾಡಬಾರದು" ಎಂದು ಸಚಿವರು ಹೇಳಿದರು.

ಪ್ಯಾರಾಮೆಡಿಕಲ್ ಸಿಬ್ಬಂದಿ ಕೊರತೆ

ಪ್ಯಾರಾಮೆಡಿಕಲ್ ಸಿಬ್ಬಂದಿ ಕೊರತೆ

"ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇಲ್ಲ, ಪ್ಯಾರಾಮೆಡಿಕಲ್ ಸಿಬ್ಬಂದಿ ಮತ್ತು ನರ್ಸಿಂಗ್ ಸಿಬ್ಬಂದಿ ಕೊರತೆ ಇದ್ದು, ಈ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಅಗತ್ಯ ಸಿಬ್ಬಂದಿಯನ್ನು ತುಂಬುವ ಕೆಲಸ ಮಾಡಲಾಗುವುದು" ಎಂದು ಸಚಿವ ಸುಧಾಕರ್ ಭರವಸೆ ನೀಡಿದರು.

ಮೊಯ್ಲಿ ಆರೋಪ ಕಾಂಗ್ರೆಸ್‌ಗೆ ಅನ್ವಯ

ಮೊಯ್ಲಿ ಆರೋಪ ಕಾಂಗ್ರೆಸ್‌ಗೆ ಅನ್ವಯ

"ಬಿಜೆಪಿ ಅಭಿವೃದ್ಧಿ ಮಾಡದೇ ಸಮಾವೇಶ ಮಾಡುತ್ತಿದೆ" ಎಂಬ ಮಾಜಿ ಸಂಸದ ವೀರಪ್ಪ ಮೊಯ್ಲಿ ಅವರ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, "ಮೊಯ್ಲಿ ಆರೋಪ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಸ್ವತಃ ಅವರಿಗೇ ಅನ್ವಯಿಸಲಿದೆ. ದೇಶದಲ್ಲಿಯೇ ಕಾಂಗ್ರೆಸ್ ಶೂನ್ಯಕ್ಕೆ ತಲುಪುತ್ತಿದ್ದು, ಸಂಸದರಾಗಿ ಸೋತು ಮೊಯ್ಲಿ ಅವರೂ ಮೂಲೆ ಸೇರಿದ್ದಾರೆ ಹಾಗಾಗಿ ಅವರ ಆರೋಪ ಅವರ ಪಕ್ಷಕ್ಕೆ ಮತ್ತು ಅವರಿಗೆ ಸೂಕ್ತ ಎಂದು ತಿರುಗೇಟು ನೀಡಿದರು.

ಸುರೇಶ್ ಗೌಡರ ಸೋಲು ಅನಿರೀಕ್ಷಿತ

ಸುರೇಶ್ ಗೌಡರ ಸೋಲು ಅನಿರೀಕ್ಷಿತ

"ಬಿಜೆಪಿ ಶಿಸ್ತು ಮತ್ತು ಸಂಯಮದ ಪಕ್ಷವಾಗಿದೆ. ಸುರೇಶ್ ಗೌಡರ ಸೋಲು ಅನಿರೀಕ್ಷಿತ. 2023ರಲ್ಲಿ ಜಿಲ್ಲೆಯಲ್ಲಿಯೇ ಮೊದಲ ಟಿಕೆಟ್ ಸುರೇಶ್ ಗೌಡರಗೆ ಘೋಷಣೆಯಾಗಲಿದೆ. ನನಗಿರುವ ಮಾಹಿತಿ ಮತ್ತು ಗುಪ್ತಚರ ಮಾಹಿತಿಯಿಂದ ಹೇಳುತ್ತಿದ್ದು, ಪಕ್ಷವನ್ನು ಶಕ್ತಿಯುತವಾಗಿ ಸಂಘಟಿಸಲು ಎಲ್ಲರೂ ಕೈ ಜೋಡಿಸಬೇಕು" ಎಂದು ಸಚಿವ ಸುಧಾಕರ್ ಕೋರಿದರು.

ಕರ್ನಾಟಕ ವಿದೇಶಿ ಬಂಡವಾಳ ಹೂಡಿಕೆಗೆ ಖ್ಯಾತಿ

ಕರ್ನಾಟಕ ವಿದೇಶಿ ಬಂಡವಾಳ ಹೂಡಿಕೆಗೆ ಖ್ಯಾತಿ

"ಮೂರು ವರ್ಷದ ಆಡಳಿತದಲ್ಲಿ ಯಶಸ್ವಿ ಕೋವಿಡ್ ನಿರ್ವಹಣೆ ಜೊತೆಗೆ ಅತಿವೃಷ್ಟಿಯನ್ನೂ ಸಮರ್ಥವಾಗಿ ಎದುರಿಸಲಾಗಿದೆ. ಅನೇಕರಿಗೆ ಪುನರ್ವಸತಿ ಕಲ್ಪಿಸಲಾಗಿದೆ, ಅನೇಕ ದೇಶಗಳು ಕೋವಿಡ್‌ನಿಂದ ಆರ್ಥಿಕವಾಗಿ ದಿವಾಳಿಯಾಗುತ್ತಿವೆ. ನಮ್ಮ ನೆರೆ ರಾಷ್ಟ್ರ ಶ್ರೀಲಂಕಾ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಆದರೆ ಕರ್ನಾಟಕ ಕಳೆದ ಒಂದು ವರ್ಷದಲ್ಲಿ ದೇಶದಲ್ಲಿಯೇ ಅತ್ಯಧಿಕ ವಿದೇಶಿ ಬಂಡವಾಳ ಹೂಡಿಕೆ ಮತ್ತು ಜಿಎಸ್ ಟಿ ಪಡೆದ ರಾಜ್ಯವಾಗಿ ಖ್ಯಾತಿಗಳಿಸಿದೆ" ಎಂದು ಸಚಿವರು ಹೇಳಿದರು.

ಎಲ್ಲ ವರ್ಗದ ಜನರಿಗೆ ಕಾರ್ಯಕ್ರಮ

ಎಲ್ಲ ವರ್ಗದ ಜನರಿಗೆ ಕಾರ್ಯಕ್ರಮ

"ಕಳೆದ ಮೂರು ವರ್ಷಗಳಿಂದ ಇಡೀ ವಿಶ್ವವನ್ನು ಕೋವಿಡ್ ಕಾಡಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕುಂಟಿತವಾಗಿತ್ತು. ಆದರೆ ಈಗ ರಾಜ್ಯದಲ್ಲಿ ಅಭಿವೃದ್ಧಿಗೆ ವೇಗ ಸಿಕ್ಕಿದೆ. ಎಲ್ಲ ವರ್ಗದ ಜನರಿಗೆ ಕಾರ್ಯಕ್ರಮ ನೀಡಲಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರ ಎಲ್ಲರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಇದರಿಂದ ಎರಡುಪಟ್ಟು ಅನುಕೂಲ ಜನರಿಗೆ ಆಗಲಿದೆ" ಎಂದರು.

10 ಲಕ್ಷ ಜನರಿಗೆ ಅನುಕೂಲ

10 ಲಕ್ಷ ಜನರಿಗೆ ಅನುಕೂಲ

"ರೈತಮಕ್ಕಳ ಅನುಕೂಲಕ್ಕಾಗಿ ದೇಶದಲ್ಲಿಯೇ ಮೊದಲ ಬಾರಿಗೆ ವಿದ್ಯಾನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಇದರಿಂದ ರಾಜ್ಯದ 10 ಲಕ್ಷ ಜನರಿಗೆ ಅನುಕೂಲವಾಗಲಿದೆ. ಈ ಹಿಂದೆ ಕಾಂಗ್ರೆಸ್ ಕೆಲ ಸಮುದಾಯದ ಮಕ್ಕಳಿಗೆ ಮಾತ್ರ ಪ್ರವಾಸ ಭಾಗ್ಯ, ಕೆಲ ಸಮುದಾಯದ ಮಕ್ಕಳಿಗೆ ಮಾತ್ರ ಶೂ ನೀಡಿತ್ತು. ಆದರೆ ನಮ್ಮ ಸರ್ಕಾರ ಇಂತಹ ಯಾವುದೇ ತಾರತಮ್ಯ ಮಾಡದೆ ಜಾತಿ, ಧರ್ಮ, ಶ್ರೀಮಂತ, ಬಡವ ಎಂಬ ಯಾವುದೇ ಬೇಧವಿಲ್ಲದೆ ನೀಡುತ್ತಿದೆ" ಎಂದು ಸಚಿವ ಸುಧಾಕರ್ ಹೇಳಿದರು.

ಪ್ರಣಾಳಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದೇವೆ

ಪ್ರಣಾಳಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದೇವೆ

"ಸರ್ವರ ಅಭಿವೃದ್ಧಿಯೇ ಮೂಲಮಂತ್ರವಾಗಿ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ಇದು ನಮ್ಮ ಸರ್ಕಾರದ ದಿಕ್ಸೂಚಿಯಾಗಿದೆ. ನಮ್ಮ ಪ್ರಣಾಳಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದೇವೆ. ಜನರಿಗೆ ನೀಡಿರುವ ಪ್ರತಿ ಯೋಜನೆಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಹಾಗಾಗಿಯೇ ಜನೋತ್ಸವ ಆಯೋಜಿಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ಮೂಲಕ ಸಹಕರಿಸುವಂತೆ" ಸುಧಾಕರ್ ಕೋರಿದರು.

Recommended Video

ಬಿ.ಜೆ.ಪಿ ಶಾಸಕ ಗಾಂಜಾ ಗಾಂಜ ಬಗ್ಗೆ ನೀಡಿದ ಹೇಳಿಕೆಗೆ ಪಕ್ಷವೇ ತಲೆ ತಗ್ಗಿಸಬೇಕಾಗಿದೆ | OneIndia Kannada

English summary
Health Minister Dr. K. Sudhakar said that the people will decide whether they want a double engine government of development or a double steering government without a clear goal in the next assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X