ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಮರ್ಥ ನಾಯಕರೇ ಇಲ್ಲದ ಕಾಂಗ್ರೆಸ್ ಪಕ್ಷ ನೆಲಕಚ್ಚುವ ಸ್ಥಿತಿ ತಲುಪಿದೆ: ಅರುಣ್ ಸಿಂಗ್ ಕಿಡಿ

ಸಿದ್ದರಾಮಯ್ಯ ಆಡಳಿತದಲ್ಲಿ ಪಿಎಫ್‍ಐಗೆ ಪ್ರೋತ್ಸಾಹ, ಹಿಂದೂಗಳ ಹತ್ಯೆ ನಿರಂತರವಾಗಿತ್ತು ಎಂದು ಅರುಣ್ ಸಿಂಗ್ ಟೀಕಿಸಿದರು.

|
Google Oneindia Kannada News

ಬೆಂಗಳೂರು,ಫೆಬ್ರವರಿ4: ಹಿಂದೂಗಳ ಅವಹೇಳನ ಮಾಡುವ ಕೆಲಸವನ್ನೇ ಸಿದ್ದರಾಮಯ್ಯ ಮಾಡುತ್ತಾರೆ. ಇದೇ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷ ನೆಲಕಚ್ಚುವ ಸ್ಥಿತಿ ತಲುಪಿದೆ. ಸಮರ್ಥ ನಾಯಕರೇ ಇಲ್ಲದ ಕಾಂಗ್ರೆಸ್ ಪಕ್ಷ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟೀಕಿಸಿದರು.

ಈ ಕುರಿತು ಶನಿವಾರ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನಾಯಕರು, ನೀತಿ ಇಲ್ಲದ ಪಕ್ಷ. ಕಾಂಗ್ರೆಸ್ ತೊರೆಯುವವರ ಸಂಖ್ಯೆ ಹೆಚ್ಚಾಗಿದೆ. ದೃಷ್ಟಿಹೀನ ಪಕ್ಷವದು. ರಾಹುಲ್ ಗಾಂಧಿಯವರು ಏನು ಹೇಳುತ್ತಾರೆಂದು ಯಾರಿಗೂ ಅರ್ಥ ಆಗುವುದಿಲ್ಲ. ತುಷ್ಟೀಕರಣದ ನೀತಿ ಕಾಂಗ್ರೆಸ್‍ನದು. ಸಿದ್ದರಾಮಯ್ಯ ಆಡಳಿತದಲ್ಲಿ ಪಿಎಫ್‍ಐಗೆ ಪ್ರೋತ್ಸಾಹ, ಹಿಂದೂಗಳ ಹತ್ಯೆ ನಿರಂತರವಾಗಿತ್ತು ಎಂದು ಅರುಣ್ ಸಿಂಗ್ ಟೀಕಿಸಿದರು.

Budget 2023; ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಗರಿಷ್ಠ ಅನುದಾನ: ಅರುಣ್ ಸಿಂಗ್Budget 2023; ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಗರಿಷ್ಠ ಅನುದಾನ: ಅರುಣ್ ಸಿಂಗ್

ಕಾಂಗ್ರೆಸ್ ಭರವಸೆ ಕೇವಲ ಆಶ್ವಾಸನೆಯಾಗಿಯೇ ಉಳಿಯುತ್ತದೆ. ಕಾಂಗ್ರೆಸ್ ಪಕ್ಷ ಸುಳ್ಳುಗಳ ಸರದಾರನಂತಿದೆ ಎಂದು ಆರೋಪಿಸಿದರು. ರಾಜಸ್ಥಾನ, ಛತ್ತೀಸಗಡದಲ್ಲೂ ಅವರು ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿಲ್ಲ ಎಂದು ಹೇಳಿದರು.

Congress Is A Leaderless Party Says Arun Singh

ಮೂರ್ನಾಲ್ಕು ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಪಕ್ಷದ ಸಿದ್ಧತೆ, ಜನರ ಒಲವು, ಹಿರಿಯರ ವಿಶ್ಲೇಷಣೆ ಗಮನಿಸಿದರೆ ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ನಿಶ್ಚಿತ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಬಿಜೆಪಿ 150ಕ್ಕೂ ಹೆಚ್ಚು ಸೀಟು ಗೆಲ್ಲಲಿದೆ. ಬಿಜೆಪಿ ಬಳಿ ಸಕ್ರಿಯ- ಸದೃಢ ಕಾರ್ಯಕರ್ತರ ಶಕ್ತಿ ಇದೆ. ಬಿಜೆಪಿ ನಿರಂತರವಾಗಿ ದೇಶಸೇವೆ, ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಬೂತ್ ಕಮಿಟಿ, ಪೇಜ್ ಸಮಿತಿ ಸೇರಿ ಅಭೇದ್ಯ ಸಂಘಟನೆ ನಮ್ಮ ಪಕ್ಷದ್ದು. ಇಂಥ ಸಂಘಟನೆ ಬೇರೆ ಪಕ್ಷಗಳ ಬಳಿ ಇಲ್ಲ. ಬೂತ್ ವಿಜಯ, ವಿಜಯ ಸಂಕಲ್ಪ ಅಭಿಯಾನ ಯಶಸ್ವಿ ಮಾಡಿದ ಕಾರ್ಯಕರ್ತರು ಮತ್ತು ಮುಖಂಡರನ್ನು ಅಭಿನಂದಿಸಿದರು. ಬಡವರಿಗೆ ಮನೆ, ಉಚಿತ ಕೋವಿಡ್ ಲಸಿಕೆ, 80 ಕೋಟಿ ಜನರಿಗೆ ಉಚಿತ ಪಡಿತರ ಸೇರಿದಂತೆ ವಿವಿಧ ಜನೋಪಯೋಗಿ ಯೋಜನೆಗಳನ್ನು ಜನರಿಗೆ ತಿಳಿಸಿ ಎಂದು ಮನವಿ ಮಾಡಿದರು.

ವಿಶ್ವಮಾನ್ಯ ಪ್ರಧಾನಿ ನರೇಂದ್ರ ಮೋದಿಜಿ ಅವರು ಒಂದಲ್ಲ ಒಂದು ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ನೀಡಿದ್ದಾರೆ. ಯಡಿಯೂರಪ್ಪ- ಬೊಮ್ಮಾಯಿ ಸರಕಾರವು ರೈತರು, ಮಹಿಳೆಯರು, ಜನಸಾಮಾನ್ಯರು ಸೇರಿ ಎಲ್ಲರಿಗಾಗಿ ಕೆಲಸ ಮಾಡಿದೆ. ಇದನ್ನು ಜನರಿಗೆ ತಲುಪಿಸಿ ನಾವು 150 ಸೀಟ್ ಗೆಲ್ಲುತ್ತೇವೆ ಎಂದರು. ಮೋದಿಜಿ, ಯಡಿಯೂರಪ್ಪ, ಕಾಮನ್ ಮ್ಯಾನ್ ಬಸವರಾಜ ಬೊಮ್ಮಾಯಿ ಸೇರಿ ನಾಯಕಗಣವೇ ನಮ್ಮಲ್ಲಿದೆ. ಇವೆಲ್ಲವೂ ನಮ್ಮ ಗೆಲುವಿಗೆ ಪೂರಕವಾಗಲಿದೆ ಎಂದು ತಿಳಿಸಿದರು.

Congress Is A Leaderless Party Says Arun Singh

ಇನ್ನೂ ಈ ವೇಳೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ಕಾಂಗ್ರೆಸ್ ಮುಖಂಡ ಯಾರು ರಾಹುಲ್ ಗಾಂಧಿಯೇ? ವಿಶ್ವವೇ ಮೆಚ್ಚಿದ ಮಹಾನ್ ನಾಯಕ ಪ್ರಧಾನಿ ನರೇಂದ್ರ ಮೋದಿಜಿ, ಅಮಿತ್ ಶಾ ಜಿ ಅವರು ನಮ್ಮ ಜೊತೆ ಇರಬೇಕಾದರೆ ಬರುವಂಥ ಕರ್ನಾಟಕ ಸೇರಿ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು ನಿಶ್ಚಿತ ಎಂದು ನುಡಿದರು.

ಕರ್ನಾಟಕದ ಯಾವುದಾದರೂ ಮನೆಗೆ ಹೋಗಿ ಸರಕಾರದ ಸವಲತ್ತು ಸಿಗದ ಒಂದು ಮನೆ ಇದ್ದರೆ ತಿಳಿಸಿ ಎಂದು ಕಾರ್ಯಕರ್ತರು ಮತ್ತು ಮುಖಂಡರಿಗೆ ಸೂಚಿಸಿದ ಅವರು, ಸರ್ವರಿಗೂ ಸಮಬಾಳು, ಸಮಪಾಲು ಚಿಂತನೆಯಡಿ ಅನೇಕ ಸವಲತ್ತುಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೊಟ್ಟಿವೆ. ಕರ್ನಾಟಕದ ಬಜೆಟ್ ಸಂದರ್ಭದಲ್ಲೂ ನಿರೀಕ್ಷೆಗೆ ಮೀರಿ ಸವಲತ್ತುಗಳನ್ನು ಕೊಡಲಿದ್ದೇವೆ.

ಪ್ರಪಂಚದ ಎಲ್ಲ ದೇಶಗಳ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಭಾರತದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೆ, ಭಾರತವು ವಿಶ್ವವೇ ಮೆಚ್ಚುವ ರೀತಿಯಲ್ಲಿ ದಾಪುಗಾಲು ಹಾಕುತ್ತಿದೆ. ಯಾವುದೇ ಶಕ್ತಿ ಕೂಡ ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆಯಲು ಅಸಾಧ್ಯ ಎಂದು ಹೇಳಿದರು.

ಪರಿಶಿಷ್ಟ ಜಾತಿ, ವರ್ಗದವರ ಸಮಸ್ಯೆ ಪರಿಹರಿಸಬೇಕು. ಎಲ್ಲ ವರ್ಗದವರ ವಿಶ್ವಾಸ ಪಡೆದುಕೊಳ್ಳಿ. ಇದು 130ರಿಂದ 140 ಸ್ಥಾನ ಗೆಲ್ಲಲು ಸಹಾಯಕ ಎಂದು ಕಿವಿಮಾತು ಹೇಳಿದರು. ಕರ್ನಾಟಕವು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದ ಮೊದಲ ರಾಜ್ಯ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನವನ್ನೂ ಅದು ಕೊಡುತ್ತಿದೆ. ಬಡ ಹೆಣ್ಣುಮಗುವಿಗೆ ಭಾಗ್ಯಲಕ್ಷ್ಮಿ ಯೋಜನೆಯಡಿ ಸುಮಾರು 25 ಲಕ್ಷ ಜನರಿಗೆ ಸವಲತ್ತು ಪಡೆದಿದ್ದಾರೆ ಎಂದು ಹೇಳಿದರು.

English summary
Karnataka Assembly Elections 2023; Congress party without any competent leader says Arun singh
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X