ದೇಶದ ಜನರ ಕೆಂಗಣ್ಣಿಗೆ ಕಾಂಗ್ರೆಸ್ ಗುರಿಯಾಗಿದೆ: ಗೋವಿಂದ ಕಾರಜೋಳ
ಬೆಳಗಾವಿ,ಡಿಸೆಂಬರ್ 19: ವೀರ್ ಸಾವರ್ಕರ್ ಫೋಟೋ ಅನಾವರಣ ಮಾಡುವುದರಿಂದ ಕಾಂಗ್ರೆಸ್ ಗೆ ಏನು ಆಗುತ್ತದೆಯೋ ಗೊತ್ತಿಲ್ಲ. ಕಾಂಗ್ರೆಸ್ ನವ್ರು ಈಗಾಗಲೇ ವಿವೇಚನಾರಹಿತವಾದಂತಹ ವಿಚಾರಗಳನ್ನ ಪ್ರಸ್ತಾಪಿಸಿ, ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಕಿಡಿಕಾರಿದರು.
ಈ ಕುರಿತು ಬೆಳಗಾವಿಯಲ್ಲಿ ಮಾಧದ್ಯಮಗಳೊಂದಿಗೆ ಮಾತನಾಡಿದ ಅವರು, ವೀರ್ ಸಾವರ್ಕರ್ ಈ ದೇಶದ ಗೌರವಾನ್ವಿತ ವ್ಯಕ್ತಿ,ದೇಶಕ್ಕಾಗಿ ಹೋರಾಟ ಮಾಡಿದ ಯಶಸ್ಸು ಅವರಿಗೂ ಸಲ್ಲುತ್ತದೆ. ಕಾಂಗ್ರೆಸ್ ನವ್ರು ಈಗಾಗಲೇ ವಿವೇಚನಾರಹಿತವಾದಂತಹ ವಿಚಾರಗಳನ್ನ ಪ್ರಸ್ತಾಪಿಸಿ, ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಷ್ಟೇ ಅಲ್ಲದೇ ದೇಶದಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನ ತಿರಸ್ಕರಿಸಿದ್ದಾರೆ. ಈಗಲೂ ಅವರಿಗೆ ಬುದ್ದಿ ಬಂದಿಲ್ಲ ಅಂದ್ರೆ ಜನರೇ ತಿರ್ಮಾನ ಮಾಡುತ್ತಾರೆ ಎಂದರು.
ಬಸವಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿಜೀ ಸೇರಿದಂತೆ ಇನ್ನೂ ಹಲವು ರಾಷ್ಟ್ರೀಯ ನಾಯಕರ ಭಾವಚಿತ್ರಗಳನ್ನ ಹಾಕುತ್ತೇವೆ. ಬಸವಣ್ಣನವರ ಫೋಟೋ ಹಾಕುವ ಬಗ್ಗೆ ನಾವು ಕಾಂಗ್ರೆಸ್ ನಿಂದ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು.

ಜನರು ಕಾಂಗ್ರೆಸ್ ನ್ನ ತಿರಸ್ಕರ ಮಾಡಿದ್ದಕ್ಕೆ ಅವರು ಬೀದಿಗೆ ಬಿದ್ದಿದ್ದಾರೆ. ಅವರ ಪಾಲಿಗೆ ಇರುವಂತದ್ದು, ಬೀದಿ ಹೋರಾಟ. ಅವರಿಗೆ ಅಧಿಕಾರ ನಡೆಸಲು ಈ ದೇಶನ ಜನ ಒಪ್ಪುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ವೋಟ್ ಗಳನ್ನ ತೆಗೆದು ಹಾಕಲು ಕಾಂಗ್ರೆಸ್ ನವರು ಹುನ್ನಾರ ನಡೆಸುತ್ತಿದ್ದಾರೆ. ಈಗಾಗಲೇ ನನ್ನ ಮತ ಕ್ಷೇತ್ರದ ಕೆಲ ಹಳ್ಳಿಗಳಿಂದಲೂ ಈಗಾಗಲೇ ದೂರುಗಳು ಬಂದಿವೆ. ಈ ರೀತಿಯಾದ ವೋಟ್ ಗಳನ್ನ ತೆಗೆದು ಹಾಕುವ ನಿಟ್ಟಿನಲ್ಲಿ ಎಲ್ಲಾ ಕಡೆ ಗದ್ದಲವನ್ನ ಮಾಡುತ್ತಿದ್ದಾರೆ. ಈ ರೀತಿ ಸ್ವಾತಂತ್ರ್ಯ ನಂತರದ ಮಾಡಿರುವ ಅಪರಾಧದ ಹಿನ್ನೆಲೆಯಿಂದಲೇ ಕಾಂಗ್ರೆಸ್ ನ್ನ ದೇಶದಲ್ಲಿ ತಿರಸ್ಕರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ವಿಧಾನಸಭೆ ಸಭಾಂಗಣದಲ್ಲಿ ಸಾರ್ವಕರ್ ಫೋಟೋ ಖಂಡಿಸಿ ಕೈ ಪ್ರತಿಭಟನೆ
ವಿಧಾನಸಭೆ ಸಭಾಂಗಣದಲ್ಲಿ ವೀರ್ ಸಾವರ್ಕರ್ ಫೋಟೋ ಹಾಕಿದ್ದನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸುವರ್ಣಸೌಧದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಸುವರ್ಣಸೌಧದ ವಿಐಪಿ ಗೇಟ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಯು.ಟಿ ಖಾದರ್, ಹಿರಿಯ ಕಾಂಗ್ರೆಸ್ ನಾಯಕ ಎಚ್ ಕೆ ಪಾಟೀಲ್, ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ ಸೇರಿದಂತೆ ಮತ್ತಿತರ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications