ಮೈತ್ರಿಯಿಲ್ಲದೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ವಿಶ್ವಾಸವಿದೆ; ಡಿ.ಕೆ ಶಿವಕುಮಾರ್

ಬಳ್ಳಾರಿ, ಅ .16: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಡಿಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಮೈತ್ರಿ ಇಲ್ಲದೇ ಈ ಸಂಖ್ಯಾಬಲ ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೇಶದ ಅತೀ ಹಳೆಯ ಪಕ್ಷವು ತನ್ನ ತಳಮಟ್ಟದಿಂದ ಮತ್ತೆ ಪುಟಿದೇಳಲು ಕಾರ್ಯನಿರತವಾಗಿದ್ದು, ಇದಕ್ಕೆ ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆ ಸಹಕಾರಿಯಾಗಲಿದೆ ಎಂದು ನಂಬಲಾಗಿದೆ. ಕಾಂಗ್ರೆಸ್ ಅನ್ನು ಮತ್ತೆ ಪುನರುಜ್ಜೀವನಗೊಳಿಸಲು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ನಡೆಯುತ್ತಿದೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಭಾರತ್ ಜೋಡೋ ಯಾತ್ರೆಗೆ ರಾಜ್ಯದಲ್ಲಿ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ 150 ವಿಧಾನಸಭಾ ಸ್ಥಾನಗಳಲ್ಲಿ ಏಕಾಂಗಿಯಾಗಿ ಗೆದ್ದು ಯಾವುದೇ ಬೆಂಬಲವಿಲ್ಲದೇ ಸರ್ಕಾರ ರಚಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭೆಯು 224 ಸ್ಥಾನಗಳನ್ನು ಹೊಂದಿದೆ.

ಸರ್ಕಾರ ರಚನೆಯ ಬಗ್ಗೆ ಭಾರೀ ವಿಶ್ವಾಸ ವ್ಯಕ್ತಪಡಿಸಿದ ಡಿಕೆಶಿ

ಸರ್ಕಾರ ರಚನೆಯ ಬಗ್ಗೆ ಭಾರೀ ವಿಶ್ವಾಸ ವ್ಯಕ್ತಪಡಿಸಿದ ಡಿಕೆಶಿ

"ಈ ಬಾರಿ, ಜನರು ಸ್ಪಷ್ಟ ಜನಾದೇಶವನ್ನು ನೀಡಲಿದ್ದಾರೆ. 2023 ರಲ್ಲಿ ಕಾಂಗ್ರೆಸ್ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರಲಿದೆ" ಎಂದು ಡಿಕೆಶಿ ಹೇಳಿದ್ದಾರೆ.

"100%. ಯಾರ ಬೆಂಬಲವಿಲ್ಲದೇ ಮುಂದಿನ ಚುನಾವಣೆಯಲ್ಲಿ ನಾವು 150 ಸ್ಥಾನಗಳನ್ನು ಗೆಲ್ಲುತ್ತೇವೆ. ರಾಜ್ಯದ ಜನತೆ 150 ಸ್ಥಾನಗಳ ಸ್ಪಷ್ಟ ಜನಾದೇಶ ನೀಡಲಿದ್ದಾರೆ" ಎಂದಿದ್ದಾರೆ.

ಶನಿವಾರ ಬಳ್ಳಾರಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಬಳಿಕ ಭಾರತ್ ಜೋಡೋ ಯಾತ್ರೆ ಭಾನುವಾರ ಮತ್ತೆ ಆರಂಭವಾಗಿದೆ. ಭಾನುವಾರ ಸಂಜೆ ಯಾತ್ರೆ ಕರ್ನಾಟಕದಿಂದ ಆಂಧ್ರ ಪ್ರದೇಶ ತಲುಪಲಿದೆ.

ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಸಿದ ಕಾಂಗ್ರೆಸ್

ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಸಿದ ಕಾಂಗ್ರೆಸ್

ಶನಿವಾರದ ವೇಳೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ 1,000 ಕಿ.ಮೀ. ಕ್ರಮಿಸಿ ಮೈಲಯಗಲ್ಲು ಸಾಧಿಸಿದೆ. ಈ ಹಿನ್ನೆಲೆ ಬಳ್ಳಾರಿ ಜಿಲ್ಲೆಯಯಲ್ಲಿ ಬೃಹತ್ ಸಮಾವೇಶ ನಡೆಸಿ, ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದೆ.

ಕರ್ನಾಟಕದಲ್ಲಿ ನಡದ ಪಾದಯಾತ್ರೆ ವೇಳೆ ರಾಹುಲ್ ಗಾಂಧಿ ಹಲವಾರು ಬಾರಿ ಆಡಳಿತ ಸರ್ಕಾರ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

''ಕರ್ನಾಟಕದ ಬಿಜೆಪಿ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರಕಾರ. ಸರ್ಕಾರ ಮತ್ತು ಅವರ ನಾಯಕರು ಪ್ರತಿ ಸರ್ಕಾರದ ಅನುಮೋದನೆಗೆ 40% ಶುಲ್ಕ ವಿಧಿಸುತ್ತಾರೆ. ಮುಂಬರುವ ಚುನಾವಣೆಯಲ್ಲಿ ಕರ್ನಾಟಕದ ಜನರು ಅವರಿಗೆ ಪಾಠ ಕಲಿಸಲಿದ್ದಾರೆ" ಎಂದು ರಾಹುಲ್ ಗಾಂಧಿ ಭಾಷಣವೊಂದರಲ್ಲಿ ಹೇಳಿದ್ದರು.

ಚುನಾವಣೆ ಗೆದ್ದ್ ನಂತರ ಸಿಎಂ ಅಭ್ಯರ್ಥಿ ಆಯ್ಕೆ; ರಾಹುಲ್

ಚುನಾವಣೆ ಗೆದ್ದ್ ನಂತರ ಸಿಎಂ ಅಭ್ಯರ್ಥಿ ಆಯ್ಕೆ; ರಾಹುಲ್

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಯಾವುದೇ ಬಿರುಕು ಇಲ್ಲ ಎಂದು ಸ್ಪಷ್ಟಪಡಿಸಿರುವ ರಾಹುಲ್ ಗಾಂಧಿ, ಕರ್ನಾಟಕ ಕಾಂಗ್ರೆಸ್ ತಮಡದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಅವರು, "ಕರ್ನಾಟಕದಲ್ಲಿ ನಾವು ಬಹು ನಿರೀಕ್ಷೆಯ ತಂಡವನ್ನು ಹೊಂದಿದ್ದೇವೆ. ಪ್ರಸ್ತುತ ನಮ್ಮ ಗಮನವು ಮುಂಬರುವ ಚುನಾವಣೆಯಲ್ಲಿ ಜನಾದೇಶವನ್ನು ಗೆಲ್ಲುವುದು ಮಾತ್ರ. ಚುನಾವಣೆಯಲ್ಲಿ ಗೆದ್ದ ನಂತರ ಕಾಂಗ್ರೆಸ್ ಪಕ್ಷದಲ್ಲಿ ನಡೆಯುವ ಪ್ರಕ್ರಿಯೆ ಆಧರಿಸಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸುತ್ತೇವೆ" ಎಂದು ಹೇಳಿದ್ದಾರೆ.

2018 ರಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ; ಸರ್ಕಾರ ರಚನೆ

2018 ರಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ; ಸರ್ಕಾರ ರಚನೆ

ರಾಜ್ಯದಲ್ಲಿ 2018 ರ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿತು ಮತ್ತು 37 ಸ್ಥಾನಗಳನ್ನು ಗೆದ್ದ ಜನತಾ ದಳ (ಜಾತ್ಯತೀತ) ಪಕ್ಷದ ಮೈತ್ರಿಯೊಂದಿಗೆ ಸರ್ಕಾರವನ್ನು ರಚಿಸಿತು. ಆದರೆ, 2019 ರಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸಿ ಹಲವು ಶಾಸಕರನ್ನು ಖರೀದಿಸಿತು. ಬಳಿಕ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರ ಸದನದಲ್ಲಿ ವಿಶ್ವಾಸಮತ ಕಳೆದುಕೊಂಡಿತು. ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿತು.

ಇನ್ನು, ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಕೂಡ "ಕರ್ನಾಟಕದಲ್ಲಿ, ನಮ್ಮ ಪಕ್ಷವು 100% ಮತ್ತೆ ಅಧಿಕಾರಕ್ಕೆ ಬರುತ್ತದೆ, ನಮ್ಮ ನಾಯಕರು ಶ್ರಮಿಸುತ್ತಿದ್ದಾರೆ. ಬಿಜೆಪಿ-ಆರ್‌ಎಸ್‌ಎಸ್ ಸ್ವಾಯತ್ತ ಸಂಸ್ಥೆಗಳು ಮತ್ತು ಇಲ್ಲಿನ ಸರ್ಕಾರಿ ಆಡಳಿತವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+